More

    ವೀರಶೈವ ಮಹಾಸಭಾದಿಂದ ಧರಣಿ

    ಧಾರವಾಡ: ವೀರಶೈವ-ಲಿಂಗಾಯತ ಸಮಾಜವನ್ನು ಹಿಂದುಳಿದ ವರ್ಗದ (ಒಬಿಸಿ) ಪಟ್ಟಿಗೆ ಸೇರಿಸಬೇಕು ಹಾಗೂ ವೀರಶೈವ-ಲಿಂಗಾಯತ ಅಭಿವೃದ್ಧಿ ನಿಗಮ ಸ್ಥಾಪನೆ ಮಾಡಬೇಕು ಎಂದು ಆಗ್ರಹಿಸಿ ಅಖಿಲ ಭಾರತ ವೀರಶೈವ ಮಹಾಸಭಾದ ಜಿಲ್ಲಾ ಘಟಕದ ವತಿಯಿಂದ ಜಿಲ್ಲಾಧಿಕಾರಿ ಕಚೇರಿ ಎದುರು ಗುರುವಾರ ಸಾಂಕೆೇತಿಕ ಧರಣಿ ನಡೆಸಲಾಯಿತು.

    ವೀರಶೈವ ಲಿಂಗಾಯತ ಸಮುದಾಯದ ಜನರು ಆರ್ಥಿಕವಾಗಿ ಬಹಳಷ್ಟು ತೊಂದರೆ ಅನುಭವಿಸುತ್ತಿದ್ದಾರೆ. ಕೇಂದ್ರ ಸರ್ಕಾರ ಹೊರಡಿಸಿರುವ ಇತರ ಹಿಂದುಳಿದ ವರ್ಗಗಳ (ಒಬಿಸಿ) ಪಟ್ಟಿಯಲ್ಲಿ ವೀರಶೈವ ಲಿಂಗಾಯತ ಸಮುದಾಯವನ್ನು ಸೇರಿಸಿ ಯುವ ಜನರಿಗೆ ಶಿಕ್ಷಣ ಮತ್ತು ಉದ್ಯೋಗದಲ್ಲಿ ಮೀಸಲು ಅವಕಾಶ ಕಲ್ಪಿಸಬೇಕು. ಕೇಂದ್ರದ ಪಟ್ಟಿಯಲ್ಲಿ ವೀರಶೈವ ಲಿಂಗಾಯತ ಸಮುದಾಯವನ್ನು ಕೈಬಿಟ್ಟಿರುವುದರಿಂದ ಬಡ ಯುವಕರು ಶಿಕ್ಷಣ ಮತ್ತು ಸರ್ಕಾರಿ ಉದ್ಯೋಗದಿಂದ ವಂಚಿತವಾಗುವಂತಾಗಿದೆ. ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡಲು ರಾಜ್ಯ ಸರ್ಕಾರ ಕೂಡಲೆ ಕಾರ್ಯೋನ್ಮುಖವಾಗಬೇಕು ಎಂದು ಮುಖಂಡರು ಆಗ್ರಹಿಸಿದರು.

    ಉಪ್ಪಿನಬೆಟಗೇರಿಯ ಶ್ರೀ ಕುಮಾರ ವಿರೂಪಾಕ್ಷ ಮಹಾಸ್ವಾಮೀಜಿ, ಮಹಾಸಭಾ ಜಿಲ್ಲಾ ಘಟಕದ ಅಧ್ಯಕ್ಷ ಗುರುರಾಜ ಹುಣಸಿಮರದ, ಮಾಜಿ ಸಚಿವ ಪಿ.ಸಿ. ಸಿದ್ದನಗೌಡ್ರ, ಮಾಜಿ ಸಭಾಪತಿ ವೀರಣ್ಣ ಮತ್ತಿಕಟ್ಟಿ, ಶರಣಪ್ಪ ಮತ್ತಿಕಟ್ಟಿ, ಶಿವಶರಣ ಕಲಬಶೆಟ್ಟರ, ಬಿ.ವೈ. ಪಾಟೀಲ, ಬಿ.ಎಸ್. ಗೋಲಪ್ಪನವರ, ಎಂ.ಎಫ್. ಹಿರೇಮಠ, ಸದಾನಂದ ಡಂಗನವರ, ಈರೇಶ ಅಂಚಟಗೇರಿ, ರಾಜಣ್ಣ ಕೊರವಿ, ಸ್ವಾತಿ ಮಾಳಗಿ, ಶ್ರೀಶೈಲ ಕಮತರ, ದ್ಯಾಮಣ್ಣ ರೇವಣ್ಣವರ, ವಿಜಯಲಕ್ಷ್ಮೀ ಕಲ್ಯಾಣಶೆಟ್ಟರ, ಇತರರು ಧರಣಿಯಲ್ಲಿ ಭಾಗವಹಿಸಿದ್ದರು.

    ಧರಣಿ ಆರಂಭಕ್ಕೂ ಮೊದಲು ಬುಧವಾರ ನಿಧನ ಹೊಂದಿದ ಕೇಂದ್ರ ಸಚಿವ ಸುರೇಶ ಅಂಗಡಿ ಅವರ ಆತ್ಮಕ್ಕೆ ಶಾಂತಿ ಕೋರಿ ಶ್ರದ್ಧಾಂಜಲಿ ಸಲ್ಲಿಸಲಾಯಿತು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts