More

    ವೀರಶೈವ ಲಿಂಗಾಯತ ಪಂಗಡಗಳನ್ನು ಒಬಿಸಿ ಪಟ್ಟಿಗೆ ಸೇರಿಸಿ

    ಬೆಳಗಾವಿ: ವೀರಶೈವ ಲಿಂಗಾಯತ ಸಮುದಾಯದ ಎಲ್ಲ ಪಂಗಡಗಳನ್ನು ಒಳಗೊಂಡಂತೆ ಕೇಂದ್ರದ ಹಿಂದುಳಿದ ವರ್ಗಗಳ (ಒಬಿಸಿ) ಪಟ್ಟಿಯಲ್ಲಿ ಸೇರಿಸುವಂತೆ ಆಗ್ರಹಿಸಿ ಅಖಿಲ ಭಾರತ ವೀರಶೈವ ಮಹಾಸಭಾ ಜಿಲ್ಲಾ ಟಕದ ಪದಾಧಿಕಾರಿಗಳು ನಗರದಲ್ಲಿ ಸೋಮವಾರ ಪ್ರತಿಭಟನಾ ಮೆರವಣಿಗೆ ನಡೆಸಿದರು.

    ರಾಣಿ ಚನ್ನಮ್ಮ ವೃತ್ತದಿಂದ ಜಿಲ್ಲಾಧಿಕಾರಿ ಕಚೇರಿವರೆಗೆ ಪ್ರತಿಭಟನಾ ರ್ಯಾಲಿ ನಡೆಸಿದರು. ವೀರಶೈವ ಲಿಂಗಾಯತ ಸಮುದಾಯವನ್ನು ಹಿಂದುಳಿದ ವರ್ಗಗಗಳ ಪಟ್ಟೆಗೆ ಸೇರ್ಪಡೆ ಮಾಡುವಂತೆ ಕೇಂದ್ರ ಸರ್ಕಾರಕ್ಕೆ ರಾಜ್ಯ ಸರ್ಕಾರ ಶಿಫಾರಸು ಮಾಡಬೇಕು ಎಂದು ಒತ್ತಾಯಿಸಿದರು.

    60 ವರ್ಷಗಳಿಂದ ನಮ್ಮನ್ನು ಒಬಿಸಿ ಪಟ್ಟಿಯಲ್ಲಿ ಸೇರಿಸಿಲ್ಲ. ನಮ್ಮ ಹೋರಾಟಕ್ಕೆ ಎಲ್ಲ ಸ್ವಾಮೀಜಿಗಳ ಬೆಂಬಲವಿದೆ. ಎಲ್ಲರನ್ನೂ ಒಗ್ಗೂಡಿಸಿಕೊಂಡು ಹೋಗುವ ಸಮಾಜ ನಮ್ಮದು. 1989&90ರಲ್ಲಿ ಮಂಡಲ್​ ಕಮಿಷನ್​ ಜಾರಿ ಸಂದರ್ಭದಲ್ಲಿ ಜಾಟರು, ಯಾದವರು ಇದರ ಉಪಯೋಗ ಪಡೆದುಕೊಂಡರು. ನಮಗೆ ಸರಿಯಾದ ಮಾಹಿತಿ ಕೊಡದೆ ಇರುವುದರಿಂದ ದೇಶದ ದಣ ಭಾಗದಲ್ಲಿ ಯಾರಿಗೂ ಇದರ ಉಪಯೋಗ ಆಗಲಿಲ್ಲ. ಪ್ರಧಾನಿ ಮೋದಿ ಅವರು ಸ್ಪಂದಿಸಿ ತಣ ಮೀಸಲಾತಿ ನೀಡಬೇಕು ಎಂದು ಆಗ್ರಹಿಸಿದರು.

    ಜಿಲ್ಲಾಧ್ಯೆ ರತ್ನಪ್ರಭಾ ಬೆಲ್ಲದ ಮಾತನಾಡಿ, ವೀರಶೈವ ಲಿಂಗಾಯತ ಸಮುದಾಯವು ಬಹುತೇಕ ಕೃಷಿ ಮತ್ತು ಕೃಷಿ ಆಧಾರಿತ ಕಸುಬುಗಳನ್ನು ಅವಲಂಬಿಸಿದ್ದು, ಆರ್ಥಿಕವಾಗಿ ಸಾಮಾಜಿಕವಾಗಿ ಹಾಗೂ ಶೈಕ್ಷಣಿಕವಾಗಿ ಹಿಂದುಳಿದಿದೆ. ಆದರೂ ಒಬಿಸಿ ಮೀಸಲಾತಿ ದೊರೆಯದಿರುವುದು ಸೋಜಿಗದ ಸಂಗತಿ. ರಾಜ್ಯ ಸರ್ಕಾರ ಈ ಕೂಡಲೇ ನಮ್ಮ ಸಮುದಾಯಕ್ಕೆ ಒಬಿಸಿ ಮೀಸಲಾತಿ ಕಲ್ಪಿಸುವಂತೆ ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡಬೇಕು.

    ಇಲ್ಲದಿದ್ದರೆ ಬೀದಿಗಿಳಿದು ಹೋರಾಟ ಮಾಡಲಾಗುವುದು ಎಂದು ಎಚ್ಚರಿಸಿದರು. ಜಿಲ್ಲಾಡಳಿತದ ಮೂಲಕ ಮುಖ್ಯಮಂತ್ರಿ ಅವರಿಗೆ ಮನವಿ ಸಲ್ಲಿಸಲಾಯಿತು. ಮಾಜಿ ಶಾಸಕ ಡಾ.ವಿಶ್ವನಾಥ ಪಾಟೀಲ, ಅಣ್ಣಾಸಾಹೇಬ ಕೊರಬು, ರಾಜಕುಮಾರ ಟೋಪಣ್ಣವರ, ಎಂ.ಬಿ. ಝಿರಲಿ, ಜ್ಯೋತಿ ಬಾವಿಕಟ್ಟಿ, ಸರಳಾ ಹೆರೇಕರ, ಲೀನಾ ಟೋಪಣ್ಣವರ, ರಮೇಶ ಕಳಸಣ್ಣವರ, ವಿಜಯಾ ಹಿರೇಮಠ ಇತರರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts