More

    ವೃತ್ತಿಪರರ ರೂಪಿಸುವ ಕೌಶಲ ತರಬೇತಿ

    ಉಡುಪಿ : ಗುಣಮಟ್ಟದ ಶಿಕ್ಷಣದ ಜತೆ ಕೌಶಲ ಅಭಿವೃದ್ಧಿ ತರಬೇತಿ ನೀಡಿ ಯುವ ಜನರನ್ನು ವೃತ್ತಿಪರರನ್ನಾಗಿ ರೂಪಿಸಬೇಕಾಗಿದೆ ಎಂದು ಮಾಜಿ ಸಚಿವ ಆರ್.ವಿ.ದೇಶಪಾಂಡೆ ಹೇಳಿದರು. ಕೃಷ್ಣಮಠದ ರಾಜಾಂಗಣದಲ್ಲಿ ಅದಮಾರು ಮಠ ನಾಲ್ಕನೇ ದಿನದ ದರ್ಬಾರ್ ಸಭೆ ಉದ್ದೇಶಿಸಿ ಮಾತನಾಡಿದರು. ಪ್ರಸ್ತುತ ಶಿಕ್ಷಣ ವ್ಯಾಪಾರವಾಗಿದ್ದು, ನಿರುದ್ಯೋಗ ಸಮಸ್ಯೆ ವ್ಯಾಪಕವಾಗಿದೆ. ಗುಣಮಟ್ಟದ ಶಿಕ್ಷಣ ನೀಡುವಂತಾಗಬೇಕು. ಯಾಂತ್ರಿಕ ಯುಗದಲ್ಲಿ ಮೌಲ್ಯಗಳು ಕುಸಿತವಾಗಿವೆ. ಚಾರಿತ್ರೃಕ್ಕೆ ಮಹತ್ವ ಇಲ್ಲ. ಮಠ, ದೇವಾಲಯಗಳ ಮೂಲಕ ಸಂಸ್ಕೃತಿ ಪರಿಚಯವಾಗಬೇಕಾಗಿದೆ ಎಂದರು. ಅಧ್ಯಕ್ಷತೆ ವಹಿಸಿದ್ದ ಪರ್ಯಾಯ ಅದಮಾರು ಶ್ರೀ ಈಶಪ್ರಿಯತೀರ್ಥ ಸ್ವಾಮೀಜಿಯವರು ಮಣಿಪಾಲ ಶಿಕ್ಷಣ ಸಂಸ್ಥೆಗಳ ಮುಖ್ಯಸ್ಥ ಡಾ.ರಂಜನ್ ಆರ್. ಪೈ ಅವರಿಗೆ ಪರ್ಯಾಯ ದರ್ಬಾರ್ ಸನ್ಮಾನ ನೆರವೇರಿಸಿದರು.
    ಮಾಜಿ ಸಂಸದ ಕೆ.ಜಯಪ್ರಕಾಶ ಹೆಗ್ಡೆ, ಮಾಜಿ ಸಚಿವ ವಿನಯಕುಮಾರ ಸೊರಕೆ, ಮಣಿಪಾಲ ಆಕಾಡೆಮಿ ಆಫ್ ಹೈಯರ್ ಎಜುಕೇಶನ್‌ನ ಸಹಕುಲಾಧಿಪತಿ ಡಾ.ಎಚ್.ಎಸ್.ಬಲ್ಲಾಳ್, ಶ್ರೀಕೃಷ್ಣ ಸೇವಾ ಬಳಗದ ಅಧ್ಯಕ್ಷ ಪ್ರೊ.ಎಂ.ಬಿ.ಪುರಾಣಿಕ್, ಯು.ಕೆ.ರಾಘವೇಂದ್ರ ರಾವ್, ರಾಜ್ಯ ಬಿಜೆಪಿ ಅಧ್ಯಕ್ಷ ನಳಿನ್‌ಕುಮಾರ್ ಕಟೀಲ್, ಮಣಿಪಾಲ ಡಾ.ಟಿಎಂಎ ಪೈ ಪ್ರತಿಷ್ಠಾನ ಕಾರ್ಯದರ್ಶಿ ಟಿ.ಅಶೋಕ್ ಪೈ, ಮಾಹೆ ಟ್ರಸ್ಟ್ ಟ್ರಸ್ಟಿ ವಸಂತಿ ಆರ್. ಪೈ,ಉಪಸ್ಥಿತರಿದ್ದರು. ತಾಲೂಕು ಪಂಚಾಯಿತಿ ಮಾಜಿ ಅಧ್ಯಕ್ಷೆ ನಳಿನಿ ಪ್ರದೀಪ್ ಸ್ವಾಗತಿಸಿದರು. ಶ್ರೀಕೃಷ್ಣ ಸೇವಾ ಬಳಗದ ಗೌರವಾಧ್ಯಕ್ಷ ಶಾಸಕ ಕೆ.ರಘುಪತಿ ಭಟ್ ಪ್ರಸ್ತಾವಿಸಿದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts