More

    ವೃತ್ತಿಯಲ್ಲಿ ಪ್ರಾಮಾಣಿಕತೆ ಅಳವಡಿಸಿಕೊಳ್ಳಿ


    ಯಾದಗಿರಿ: ಸರಕಾರಿ ಅಧಿಕಾರಿ, ಸಿಬ್ಬಂದಿ ಜೀವನದಲ್ಲಿ ಪ್ರಾಮಾಣಿಕತೆ, ಪಾರದರ್ಶಕತೆ ಅಳವಡಿಸಿಕೊಳ್ಳುವ ಮೂಲಕ ನೈತಿಕ ಮೌಲ್ಯವನ್ನು ಹೆಚ್ಚಿಸುವಂತೆ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಬಿ.ಜಯಂತಕುಮಾರ ಕರೆ ನೀಡಿದರು.

    ಶನಿವಾರ ನಗರದ ಜಿಪಂ ಕಚೇರಿ ಸಭಾಂಗಣದಲ್ಲಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾಡಳಿತ, ಜಿಪಂ, ಪೊಲೀಸ್ ಲೋಕಾಯುಕ್ತ ಇಲಾಖೆ ಸಹಯೋಗದಡಿ ಆಯೋಜಿಸಿದ್ದ ಭ್ರಷ್ಟಾಚಾರ ವಿರುದ್ಧ ಜಾಗೃತಿ ಅರಿವು ಸಪ್ತಾಹ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಸಾರ್ವಜನಿಕರ ತೊಂದರೆಗಳಿಗೆ ಸಕಾಲಕ್ಕೆ ಸ್ಪಂದಿಸಬೇಕು. ಪ್ರಾಮಾಣಿಕತೆ ಮತ್ತು ಪಾರದರ್ಶಕತೆ ಕೆಲಸದ ಮೂಲಕ ಅವರಿಗೆ ನೆರವಾಗಬೇಕು. ತನಗೆ ಹಾಗೂ ಒಳ್ಳೆಯ ಸಮಾಜ ಮತ್ತು ಒಳ್ಳೆಯ ಪ್ರಪಂಚಕ್ಕಾಗಿ ಸೇವೆ ಮಾಡುವ ಮೂಲಕ ತಮ್ಮ ನೈತಿಕ ಮೌಲ್ಯವನ್ನು ಹೆಚ್ಚಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು.

    ಸರಕಾರಿ ನೌಕರರು ಶ್ರದ್ಧೆ ಹಾಗೂ ನಿಷ್ಠೆಯಿಂದ ಕಾರ್ಯನಿರ್ವಹಿಸಬೇಕು, ಜನರಿಗೆ ತೊಂದರೆಯಾಗದ ರೀತಿಯಲ್ಲಿ ಅವರಿಗೆ ಸ್ಪಂದಿಸುವ ಜತೆಗೆ ನಿಗದಿತ ಅವಧಿಯೊಳಗೆ ಸಮಸ್ಯೆಗಳನ್ನು ನಿವಾರಿಸಬೇಕು. ಇದರಿಂದ ಮುಂದಿನ ಪೀಳಿಗೆಗೆ ಒಳ್ಳೆಯ ವ್ಯವಸ್ಥೆ ನೀಡಲು ಸಹಕಾರಿಯಾಗಲಿದ್ದು, ಮಾತು ಹಾಗೂ ಕೃತಿಯಲ್ಲಿ ವ್ಯತ್ಯಾಸವಿರಕೂಡದು ಎಂದರು.

    ಜಿಪಂ ಸಿಇಒ ಗರೀಮಾ ಪನ್ವಾರ್ ಮಾತನಾಡಿ, ಉತ್ತಮ ಸಮಾಜ ನಿಮರ್ಾಣಕ್ಕಾಗಿ ನಿಷ್ಠೆಯಿಂದ ಸೇವೆ ಸಲ್ಲಿಸಿ. ಭ್ರಷ್ಟಾಚಾರ ಮುಕ್ತ ಸಮಾಜ ನಿರ್ಮಿಸುವ ಮೂಲಕ ನಾಗರಿಕ ಸಮಾಜ ಸುಭದ್ರವಾಗಿಸಲು ಎಲ್ಲರ ಸಹಕಾರ ಅಗತ್ಯವಾಗಿದೆ ಎಂದು ಹೇಳಿದರು.

    ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜಿ.ಸಂಗೀತಾ, ಅ.30 ರಿಂದ ನ.5ರ ವರೆಗೆ ಭ್ರಷ್ಟಾಚಾರ ವಿರುದ್ಧ ಜಾಗೃತಿ ಸಪ್ತಾಹ ಹಮ್ಮಿಕೊಳ್ಳಲಾಗಿದೆ. ದೇಶದ ಆರ್ಥಿಕ , ರಾಜಕೀಯ, ಹಾಗೂ ಸಾಮಾಜಿಕ ಅಭಿವೃದ್ಧಿಗೆ ಎಲ್ಲರೂ ಸಂವಿಧಾನ ಬದ್ಧವಾಗಿ ಹಾಗೂ ಕಾನೂನು ಪರವಾಗಿ ನಡೆದಲ್ಲಿ ಭ್ರಷ್ಟಾಚಾರ ನಿರ್ಮೂಲನೆ ಸಾಧ್ಯ ಎಂದು ತಿಳಿಸಿದರು.

    ಜಿಲ್ಲಾಧಿಕಾರಿ ಡಾ.ಸುಶೀಲಾ ಬಿ., ಮಾತನಾಡಿ, ಭಾರತವು ಸದೃಢ ಪ್ರಜಾಪ್ರಭುತ್ವ ರಾಷ್ಟವಾಗಿದ್ದು, ಜನರಿಗಾಗಿ ಜನರಿಗೋಸ್ಕರ ಹಾಗೂ ಮುಂದಿನ ಪೀಳಿಗೆಯ ಉತ್ತಮ ಭವಿಷ್ಯಕ್ಕಾಗಿ ಸರಕಾರಿ ನೌಕರರು ಪ್ರಾಮಾಣಿಕತೆ ಮತ್ತು ಪಾರದರ್ಶಕತೆ ಜೀವನದಲ್ಲಿ ಹಾಗೂ ಕರ್ತವ್ಯದಲ್ಲಿ ಅಳವಡಿಸಿಕೊಳ್ಳಬೇಕು, ಸಾರ್ವಜನಿಕರ ಕುಂದು ಕೊರತೆಗಳ ನಿವಾರಣೆಗೆ ಜಿಲ್ಲಾದ್ಯಂತ ಜನತಾ ದರ್ಶನ ಹಮ್ಮಿಕೊಂಡು ಸ್ಪಂದಿಸಲಾಗುತ್ತಿದೆ. ಅಧಿಕಾರಿಗಳು ಕೂಡ ತಮ್ಮ ಕೆಳಹಂತದ ಸಿಬ್ಬಂದಿ ಕಾರ್ಯ ವೈಖರಿಯಲ್ಲಿ ಬದಲಾವಣೆ ತಂದುಕೊಳ್ಳಬೇಕು ಎಂದು ಕಿವಿಮಾತು ಹೇಳಿದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts