More

    ವೇತನ, ಭತ್ಯೆಯಲ್ಲಿನ ವ್ಯತ್ಯಾಸ ಸರಿಪಡಿಸಿ

    ರೋಣ: ವೇತನ ಹಾಗೂ ಭತ್ಯೆಯಲ್ಲಿನ ವ್ಯತ್ಯಾಸ ಸರಿಪಡಿಸಬೇಕು ಎಂದು ಆಗ್ರಹಿಸಿ ಜ. 12 ರವರೆಗೆ ಕಪ್ಪು ಪಟ್ಟಿ ಧರಿಸಿ ಸೇವೆ ಸಲ್ಲಿಸಲಾಗುವುದು ಎಂದು ಪಂಡಿತ ಭೀಮಸೇನ್ ಜೋಷಿ ಸಾರ್ವಜನಿಕರ ಸರ್ಕಾರಿ ಆಸ್ಪತ್ರೆಯ ಫಾರ್ಮಸಿಸ್ಟ್ ಎಸ್.ಸಿ. ಮುಶಿಗೇರಿ ಹೇಳಿದರು.

    ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಇಲಾಖೆಯಲ್ಲಿ ಸೇವೆ ಸಲ್ಲಿಸುತ್ತಿರುವ ಫಾರ್ಮಸಿಸ್ಟ್​ಗಳ ವೇತನ ಹಾಗೂ ಭತ್ಯೆಯಲ್ಲಿ ಸಾಕಷ್ಟು ವ್ಯತ್ಯಾಸವಿದೆ. ಅದನ್ನು ಸರಿಪಡಿಸುವಂತೆ ಸಂಬಂಧಪಟ್ಟ ಇಲಾಖೆಯ ಸಚಿವರು ಹಾಗೂ ಹಿರಿಯ ಅಧಿಕಾರಿಗಳಿಗೆ ಸಾಕಷ್ಟು ಮನವಿ ಸಲ್ಲಿಸಿದರೂ ಯಾವುದೆ ಪ್ರಯೋಜನವಾಗಿಲ್ಲ ಎಂದು ದೂರಿದರು. ಅಲ್ಲದೆ, ಸಾರ್ವಜನಿಕರಿಗೆ ಯಾವುದೇ ತೊಂದರೆಯಾಗದ ರೀತಿಯಲ್ಲಿ ಕಪ್ಪು ಬಟ್ಟೆ ಧರಿಸಿ ಸೇವೆ ಮಾಡುವ ಮೂಲಕ ಪ್ರತಿಭಟಿಸುತ್ತಿದ್ದೇವೆ ಎಂದರು.

    ಪಿಯು ವಿಜ್ಞಾನ ಮುಗಿಸಿ ಫಾರ್ಮಸಿ ವ್ಯಾಸಂಗ ಮಾಡಿದ ನಮಗೆ ಕಾಲಕಾಲಕ್ಕೆ ಪದೋನ್ನತಿ ನೀಡುತ್ತಿಲ್ಲ. ಜತೆಗೆ ಫಾರ್ಮಸಿಸ್ಟ್ ವ್ಯಾಸಂಗವನ್ನು ಆಲ್ ಇಂಡಿಯಾ ಕೌನ್ಸಿಲ್ ಫಾರ್ ಟೆಕ್ನಿಕಲ್ ಎಜುಕೇಶನ್ ತಾಂತ್ರಿಕ ಕೌಶಲ ವ್ಯಾಸಂಗವೆಂದು ಪರಿಗಣಿಸಿದೆ. ರಾಜ್ಯ ಸರ್ಕಾರವು ಈ ಹುದ್ದೆಯನ್ನು ತಾಂತ್ರಿಕ ಹುದ್ದೆ ಎಂದು ಪರಿಗಣಿಸಿದೆ. ಆದರೆ, ಆರೋಗ್ಯ ಇಲಾಖೆ ತಾಂತ್ರಿಕ ವೇತನ ನೀಡುತ್ತಿಲ್ಲ ಎಂದು ಆರೋಪಿಸಿದರು.

    ಸಂಬಂಧಪಟ್ಟವರು ಇನ್ನಾದರೂ ಎಚ್ಚೆತ್ತು ನಮ್ಮ ಬೇಡಿಕೆಗಳನ್ನು ಈಡೇರಿಸದಿದ್ದರೆ ಫೆ. 12 ರಿಂದ 17 ರವರೆಗೆ ನಡೆಯುವ ರಾಷ್ಟ್ರೀಯ ಆರೋಗ್ಯ ಕಾರ್ಯಕ್ರಮಗಳಲ್ಲಿ ನಾವು ಭಾಗವಹಿಸುವುದಿಲ್ಲ ಎಂದು ಹೇಳಿದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts