More

    ವೇತನ ಹೆಚ್ಚಳಕ್ಕಾಗಿ ಬಿಸಿಯೂಟ ತಯಾರಕರ ಪ್ರತಿಭಟನೆ

    ದಾವಣಗೆರೆ: ರಾಜ್ಯಾದ್ಯಂತ ಶಾಲೆಗಳಲ್ಲಿ ಅಡುಗೆ ಕೆಲಸ ನಿರ್ವಹಿಸುತ್ತಿರುವ ಬಿಸಿಯೂಟ ತಯಾರಕರ ವೇತನವನ್ನು 6 ಸಾವಿರ ರೂ.ಗಳಿಗೆ ಹೆಚ್ಚಿಸಲು ಒತ್ತಾಯಿಸಿ ಬಿಸಿಯೂಟ ತಯಾರಕರ ಫೆಡರೇಷನ್ ರಾಜ್ಯ ಸಮಿತಿಯಿಂದ ನಗರದಲ್ಲಿ ಪ್ರತಿಭಟನೆ ನಡೆಸಲಾಯಿತು.
    ಜಿಲ್ಲಾಧಿಕಾರಿ ಕಚೇರಿ ಬಳಿ ಜಮಾಯಿಸಿದ್ದ ಎಲ್ಲಾ ತಾಲ್ಲೂಕುಗಳ ಬಿಸಿಯೂಟ ತಯಾರಕರು ಜಿಲ್ಲಾಧಿಕಾರಿ ಶಿವಾನಂದ ಕಾಪಶಿ ಅವರ ಮೂಲಕ ಮುಖ್ಯಮಂತ್ರಿ ಹಾಗೂ ಶಿಕ್ಷಣ ಸಚಿವರಿಗೆ ಮನವಿ ಸಲ್ಲಿಸಿದರು.
    ಬಿಸಿಯೂಟ ತಯಾರಕರ ಫೆಡರೇಷನ್ ರಾಜ ಸಮಿತಿ ಪ್ರಧಾನ ಕಾರ್ಯದರ್ಶಿ ಆವರಗೆರೆ ಚಂದ್ರು ಮಾತನಾಡಿ ರಾಜ್ಯ ಸರ್ಕಾರ ಜುಲೈ ತಿಂಗಳಲ್ಲಿ ಮಂಡಿಸಲಿರುವ ಬಜೆಟ್‌ನಲ್ಲಿ ಮಧ್ಯಾಹ್ನ ಉಪಹಾರ ಯೋಜನೆಯಡಿ ಕಾರ್ಯನಿರತ ಬಿಸಿಯೂಟ ತಯಾರಕರ ವೇತನವನ್ನು 6 ಸಾವಿರ ರೂ.ಗಳಿಗೆ ಹೆಚ್ಚಿಸಬೇಕು ಎಂದು ಒತ್ತಾಯಿಸಿದರು.
    ವಿಧಾನಸಭಾ ಚುನಾವಣೆ ಸಂದರ್ಭದಲ್ಲಿ ಎಐಸಿಸಿ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕ ಗಾಂಧಿ, ಬೆಳಗಾವಿ ಜಿಲ್ಲೆಯ ಖಾನಾಪುರದಲ್ಲಿ ಎಐಟಿಯುಸಿ ನಾಯಕರೊಂದಿಗೆ ಚರ್ಚಿಸುವ ಸಂದರ್ಭದಲ್ಲಿ ಕರ್ನಾಟಕದಲ್ಲಿ, ಕಾಂಗ್ರೆಸ್ ಅಧಿಕಾರಕ್ಕೆ ತಂದರೆ ಆರನೇ ಗ್ಯಾರಂಟಿಯಾಗಿ ಬಿಸಿಯೂಟ ತಯಾರಕರ ವೇತನ ಹೆಚ್ಚಿಸುವುದಾಗಿ ವೇದಿಕೆಯಲ್ಲಿ ಘೋಷಿಸಿದ್ದರು. ಅದನ್ನು ಕಾರ್ಯರೂಪಕ್ಕೆ ತರಬೇಕೆಂದು ಆಗ್ರಹಿಸಿದರು.
    ಪ್ರತಿಭಟನೆಯಲ್ಲಿ ಸಮಿತಿ ಪದಾಧಿಕಾರಿಗಳಾದ ಬಿ.ಸಿ.ಮಂಜುಳಾ, ಪಾರ್ವತಮ್ಮ, ನೀಲಮ್ಮ, ಶಾರದಾ, ಹುಲುಗಮ್ಮ, ಗೌರಮ್ಮ, ವಿಜಯಮ್ಮ, ಸರೋಜಾ, ಇಂದ್ರಮ್ಮ, ಶಾರದಮ್ಮ, ಗದಿಗೇಶ ಪಿ. ಪಾಳೇದ, ಸಿ. ರಮೇಶ್ ಇತರರು ಪಾಲ್ಗೊಂಡಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts