More

    ವೈದ್ಯಕೀಯ ಕ್ಷೇತ್ರದಲ್ಲಿ ಅವಕಾಶಗಳು ವಿಫುಲ

    ಬಾಗಲಕೋಟೆ: ವೈದ್ಯಕೀಯ ಕ್ಷೇತ್ರವು ಬಹಳಷ್ಟು ಬದಲಾವಣೆ ಕಾಣುತ್ತಿದೆ. ತಂತ್ರಜ್ಞಾನ, ವಿನೂತನ ಮಾದರಿ ಸಂಶೋಧನೆಗಳು ಹೊರ ಬರುತ್ತೀವೆ. ನಾನಾ ವಿಭಾಗದಲ್ಲಿ ವಿಫುಲ ಅವಕಾಶಗಳು ಲಭ್ಯವಾಗುತ್ತಿವೆ ಎಂದು ಧಾರವಾಡದ ಕರ್ನಾಟಕ ವಿಶ್ವ ವಿದ್ಯಾಲಯದ ಉಪಕುಲಪತಿ ಡಾ. ಕೆ.ಬಿ.ಗುಡಸಿ ಹೇಳಿದರು.

    ನಗರದ ಬಾಗಲಕೋಟೆ ಇನ್ಸಿಟ್ಯೂಟ್ ಆಫ್ ಪ್ಯಾರಾಮೆಡಿಕಲ್, ನರ್ಸಿಂಗ್ ಸೈನ್ಸ್ ಮತ್ತು ಶಾಂತಿ ಇನ್ಸಿಟ್ಯೂಟ್ ಆಫ್ ನರ್ಸಿಂಗ್ ಸೈನ್ಸ್ನ ಕಾಲೇಜಿನಲ್ಲಿ ಈಚೆಗೆ ಹಮ್ಮಿಕೊಂಡಿದ್ದ ಪ್ರಥಮ ವರ್ಷದ ವಿದ್ಯಾರ್ಥಿಗಳ ಪ್ರತಿಜ್ಞಾವಿಽ ಸ್ವೀಕಾರ ಸಮಾರಂಭ ಉದ್ಘಾಟಿಸಿ ಅವರು ಮಾತನಾಡಿದರು.
    ನರ್ಸಿಂಗ್ ಕ್ಷೇತ್ರದಲ್ಲಿ ಸೇವಾ ಮನೋಭಾವ ಅಡಗಿದೆ. ವಿದೇಶದಲ್ಲಿ ಈ ವೃತ್ತಿಗೆ ದೊಡ್ಡಮಟ್ಟದಲ್ಲಿ ಅವಕಾಶಗಳಿವೆ. ನಮ್ಮಲ್ಲಿಯೂ ಕೋರ್ಸ ಪೂರ್ಣಗೊಳಿಸಿದವರಿಗೆ ಅನುಕೂಲಗಳಿವೆ. ವೈದ್ಯಕೀಯ ಕ್ಷೇತ್ರದಲ್ಲಿ ಸೇವೆ ಸಲ್ಲಿಸುವವರನ್ನು ದೇವರಂತೆ ಕಾಣಲಾಗುತ್ತದೆ. ಅದಕ್ಕೆ ಚ್ಯುತಿ ಬಾರದಂತೆ ಕರ್ತವ್ಯ ನಿಭಾಯಿಸಬೇಕಿರುವುದು ನಮ್ಮೆಲ್ಲರ ಜವಾಬ್ದಾರಿ ಎಂದ ಅವರು, ಡಾ. ಆರ್.ಟಿ.ಪಾಟೀಲ ಅವರಿಂದ ಸಂಸ್ಕೃತಿ ಮತ್ತು ಸಂಸ್ಕಾರವನ್ನು ಕಲಿಯಬೇಕು. ಪ್ರತಿಜ್ಞಾವಿಧಿ ಸ್ವೀಕರಿಸಿದ ಎಲ್ಲ ವಿದ್ಯಾರ್ಥಿಗಳ ಭವಿಷ್ಯ ಉಜ್ವಲವಾಗಲಿ ಎಂದು ಆಶಿಸಿದರು.

    ಬೆಂಗಳೂರಿನ ಕೆಎಸ್‌ಡಿಎನ್‌ಇಬಿಯ ಕಾರ್ಯದರ್ಶಿ ಮಡಿವಾಳಪ್ಪ ನಾಗರಳ್ಳಿ ಮಾತನಾಡಿ, ಬಾಗಲಕೋಟ ಶಿಕ್ಷಣ ಸಂಸ್ಥೆ ವಿದ್ಯಾರ್ಥಿಗಳಿಗೆ ಗುಣಾತ್ಮಕ ಶಿಕ್ಷಣ ನೀಡುವಲ್ಲಿ ಹೆಸರುವಾಸಿಯಾಗಿದೆ. ಇಂಗ್ಲೀಷ್‌ನಲ್ಲಿರುವ ಪ್ಲಾರೆನ್ಸ್ ನೈಟಿಂಗೆಲ್ ಅವರ ಪ್ರತಿಜ್ಞಾವಿಯನ್ನು ಕನ್ನಡ ಭಾಷೆಗೆ ಭಾಷಾಂತರಿಸಿ ಎಲ್ಲರಿಗೂ ಸರಳವಾಗಿ ಅರ್ಥವಾಗುವಂತೆ ಕನ್ನಡದಲ್ಲಿಯೇ ಬೋಧಿಸಿದ ಹೆಗ್ಗಳಿಕೆಗೆ ಈ ಸಂಸ್ಥೆ ಪಾತ್ರವಾಗಿದೆ ಎಂದರು.

    ನವನಗರದಲ್ಲಿ ನೂತನವಾಗಿ ಉದ್ಘಾಟನೆಗೊಂಡ ೧೫೦ ಹಾಸಿಗೆಗಳುಳ್ಳ ಸುಸಜ್ಜಿತವಾದ ಶಾಂತಿ ಆಸ್ಪತ್ರೆಯು ನರ್ಸಿಂಗ್ ವಿದ್ಯಾರ್ಥಿಗಳಿಗೆ ಉತ್ತಮವಾದ ತರಬೇತಿ ನೀಡಲು ಸಜ್ಜಾಗಿ ನಿಂತಿದೆ. ಇದರ ಸದುಪಯೋಗ ಈ ಸಂಸ್ಥೆಯ ವಿದ್ಯಾರ್ಥಿಗಳು ಪಡೆದುಕೊಳ್ಳಬೇಕು ಎಂದು ಹೇಳಿದರು.

    ಬಾಗಲಕೋಟೆ ಶಿಕ್ಷಣ ಸಂಸ್ಥೆಯ ಉಪಾಧ್ಯಕ್ಷೆ ಸುನಂದಾ ಪಾಟೀಲ ಮಾತನಾಡಿ, ವಿದ್ಯಾರ್ಥಿಗಳ ಉನ್ನತ ಶಿಕ್ಷಣಕ್ಕಾಗಿ ಮತ್ತು ಉಜ್ವಲ ಭವಿಷ್ಯಕ್ಕಾಗಿ ಮುಂಬರುವ ದಿನಗಳಲ್ಲಿ ನಮ್ಮ ಸಂಸ್ಥೆ ತನ್ನದೇ ಆದ ವಿಶೇಷ ಯೋಜನೆಗಳನ್ನು ಹೊಂದಿದೆ. ವಿದ್ಯಾರ್ಥಿಗಳ ಉತ್ಕೃಷ್ಟ ಯಶಸ್ಸಿಗೆ ಶ್ರಮಿಸಲು ನಮ್ಮ ಸಂಸ್ಥೆ ಸದಾ ಸಿದ್ಧ ಎಂದರು.

    ಹುಬ್ಬಳ್ಳಿಯ ಕಿಮ್ಸ್ ಸರಕಾರಿ ನರ್ಸಿಂಗ್ ಕಾಲೇಜಿನ ನಿವೃತ್ತ ಪ್ರಾಚಾರ್ಯೆ ಭಾರತಿ ಕೊಂಗೂನಳ್ಳಿ, ಬಾಗಲಕೋಟೆ ಶಿಕ್ಷಣ ಸಂಸ್ಥೆ ಕಾರ್ಯದರ್ಶಿ ಡಾ. ಸುನೀಲ ಪಾಟೀಲ, ಸಂಸ್ಥೆಯ ಪ್ರಾಚಾರ್ಯ ಡಾ. ಉತಲಭಾಷಾ ದಂಧರಗಿ, ಮೊಹನ ದೇಶಪಾಂಡೆ, ಸುರೇಶಗೌಡ ಪಾಟೀಲ, ರಾಜೇಶ್ವರಿ ನಿಂಬರಗಿ ಇತರರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts