More

    ವೈದ್ಯಕೀಯ ಸೀಟು ಬ್ಲಾಕಿಂಗ್ ದಂಧೆ ವಿರುದ್ಧ ಆಕ್ರೋಶ

    ಹುಬ್ಬಳ್ಳಿ: ವೈದ್ಯಕೀಯ ಸೀಟುಗಳ ಬ್ಲಾಕಿಂಗ್ ದಂಧೆಯಲ್ಲಿ ತೊಡಗಿರುವವರ ವಿರುದ್ಧ ಕಠಿಣ ಕ್ರಮಕ್ಕೆ ಆಗ್ರಹಿಸಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ (ಎಬಿವಿಪಿ) ವತಿಯಿಂದ ನಗರದಲ್ಲಿ ಬುಧವಾರ ಪ್ರತಿಭಟನೆ ನಡೆಸಲಾಯಿತು.

    ವಿದ್ಯಾನಗರದ ಸುಶ್ರೂತ ಆಸ್ಪತ್ರೆಯಿಂದ ಕಿಮ್್ಸ ಗಾಂಧಿ ಪ್ರತಿಮೆವರೆಗೆ ಪ್ರತಿಭಟನಾ ರ‍್ಯಾಲಿ ನಡೆಯಿತು. ಶಿಕ್ಷಣ ಕ್ಷೇತ್ರದಲ್ಲಿ ದೇಶದಲ್ಲೇ ಕರ್ನಾಟಕ ಮುಂಚೂಣಿ ಯಲ್ಲಿರುವ ರಾಜ್ಯ ಎಂದು ಹೆಸರುವಾಸಿಯಾಗಿದೆ. ಬಡ ಮತ್ತು ಪ್ರತಿಭಾವಂತ ವಿದ್ಯಾರ್ಥಿಗಳಿಗೆ ನ್ಯಾಯಯುತವಾಗಿ ವೈದ್ಯಕೀಯ, ಇಂಜಿನಿಯರಿಂಗ್ ಪ್ರವೇಶ ಸಿಗಲೆಂದು ಸಿಇಟಿ ಪರೀಕ್ಷೆ ಆಯೋಜಿಸಲಾಗುತ್ತಿದೆ. ಆದರೆ, ರಾಜ್ಯದ ಪ್ರತಿಷ್ಠಿತ ಮೆಡಿಕಲ್ ಕಾಲೇಜುಗಳ ಸೀಟ್ ಬ್ಲಾಕಿಂಗ್ ದಂಧೆಯನ್ನು ಆದಾಯ ತೆರಿಗೆ ಇಲಾಖೆ ಸಾಕ್ಷಿ ಸಮೇತ ಬಯಲಿಗೆ ಎಳೆದಿದೆ. ಹಾಗಾಗಿ, ಸರ್ಕಾರ ಯಾವುದೇ ಒತ್ತಡಗಳಿಗೆ ಮಣಿಯದೆ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು. ಕಾರ್ಯದರ್ಶಿ ಪ್ರತೀಕ ಮಾಳಿ, ಸಹ ಕಾರ್ಯದರ್ಶಿ ಕಾವ್ಯಾ ಜೋಶಿ, ರಾಜ್ಯ ಸಹ ಸಂಘಟನಾ ಕಾರ್ಯದರ್ಶಿ ಪೃಥ್ವಿಕುಮಾರ, ನಗರ ಕಾರ್ಯದರ್ಶಿ ಅರುಣ ಶಾಮನೂರು, ಸೋಮು ಪಾಟೀಲ, ರಮೇಶ ಲೋಂಡೆ, ನಿಷಾ ಕಾಮಟೆ, ರಾಕೇಶ ಕರ್ಜಗಿಮಠ, ಪುಷ್ಪಾ ಗಾಡರೆಡ್ಡಿ, ಅಜಯ ನಂದಿಹಾಳ, ಸುಶೀಲ ಇಟಗಿ, ಮತ್ತಿತರರು ಪಾಲ್ಗೊಂಡಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts