More

    ವೈದ್ಯರ ಚೀಟಿ ಇಲ್ಲದೇ ಔಷಧಿ ಕೊಡಬೇಡಿ

    ಯಾದಗಿರಿ: ಜಿಲ್ಲೆಯ ಎಲ್ಲ ಖಾಸಗಿ ವೈದ್ಯರು ತಮ್ಮ ಆಸ್ಪತ್ರೆ (ಕ್ಲಿನಿಕ್)ಗಳಿಗೆ ಬರುವ ತೀವ್ರ ಉಸಿರಾಟದ ಸೋಂಕಿನ ಹಾಗೂ ಶೀತಜ್ವರ ಕಂಡು ಬಂದಲ್ಲಿ ಕೂಡಲೇ ಜಿಲ್ಲಾಸ್ಪತ್ರೆಯಲ್ಲಿ ಆರಂಭಿಸಿರುವ ಕೋವಿಡ್-19 ಆಸ್ಪತ್ರೆ ಬಳಿಯ ಜ್ವರ ತಪಾಸಣಾ ಕೇಂದ್ರಕ್ಕೆ ಕಳುಹಿಸುವಂತೆ ಜಿಲ್ಲಾಧಿಕಾರಿ ಎಂ. ಕೂರ್ಮಾರಾವ್ ಸೂಚಿಸಿದ್ದಾರೆ.

    ಮಂಗಳವಾರ ಸಂಜೆ ಇಲ್ಲಿನ ಜಿಲ್ಲಾಧಿಕಾರಿ ಕಚೇರಿಯಲ್ಲಿ ಕರೆದಿದ್ದ ಸಭೆಯಲ್ಲಿ ಜಿಲ್ಲೆಯ ಖಾಸಗಿ ವೈದ್ಯರು, ಔಷಧಿ ವಿತರಕರು ಹಾಗೂ ಆರ್ಎಂಪಿಗಳೊಂದಿಗೆ ಮಾತನಾಡಿದ ಅವರು, ಜಿಲ್ಲೆಯ ಎಲ್ಲ ಔಷಧಿ ವಿತರಕರು ವೈದ್ಯರ ಔಷಧಿ ಚೀಟಿ ಇಲ್ಲದೇ ಯಾವುದೇ ತರಹದ ಔಷಧಿ ನೀಡಬಾರದು. ಶೀತಜ್ವರ ಪ್ರಕರಣ ಸಂಬಂಧಪಟ್ಟ ತಾಲೂಕಿನ ವೈದ್ಯಾಧಿಕಾರಿಗಳ ಗಮನಕ್ಕೆ ತರಬೇಕು ಎಂದರು.

    ಕೋವಿಡ್-19 ಸಾಂಕ್ರಾಮಿಕ ರೋಗವನ್ನು ಪರಿಣಾಮಕಾರಿಯಾಗಿ ತಡೆಗಟ್ಟುವ ನಿಟ್ಟಿನಲ್ಲಿ ಜಿಲ್ಲಾಡಳಿತ ಎಲ್ಲ ರೀತಿಯ ಮುಂಜಾಗ್ರತಾ ಕ್ರಮ ಕೈಗೊಂಡಿದೆ. ಕರೊನಾ ವೈರಸ್ ಸಾಂಕ್ರಾಮಿಕ ರೋಗಕ್ಕೆ ಯಾವುದೇ ಮದ್ದು ಇಲ್ಲದೇ ಇರುವುದರಿಂದ ಜಿಲ್ಲೆಯ ಆರ್ಎಂಪಿಗಳು ವೈದ್ಯಕೀಯ ತಪಾಸಣೆ ಸ್ಥಗಿತಗೊಳಿಸಬೇಕು ಹಾಗೂ ಯಾವುದೇ ಕಾಯಿಲೆ ಇರುವ ವ್ಯಕ್ತಿ ಕಂಡುಬಂದಲ್ಲಿ ನೇರವಾಗಿ ತಾಲೂಕು ವ್ಯೆದ್ಯಾಧಿಕಾರಿಗಳಿಗೆ ತಿಳಿಸಬೇಕು ಹಾಗೂ ಕರೊನಾ ಬಗ್ಗೆ ಅರಿವು ಮೂಡಿಸಬೇಕು ಎಂದು ಸಲಹೆ ನೀಡಿದರು.

    ಖಾಸಗಿ ವೈದ್ಯರು ಹಾಗೂ ಆರ್ಎಂಪಿಗಳು ಜಿಲ್ಲಾಡಳಿತದ ಸೂಚನೆ ಕಟ್ಟುನಿಟ್ಟಾಗಿ ಪಾಲಿಸತಕ್ಕದ್ದು. ಒಂದು ವೇಳೆ ಸೂಚನೆಗಳನ್ನು ನಿಲ್ರ್ಯಕ್ಷಿಸಿದಲ್ಲಿ ಕನರ್ಾಟಕ ಖಾಸಗಿ ವೈದ್ಯಕೀಯ ಸಂಸ್ಥೆಗಳ ಅಧಿನಿಯದಂತೆ ನಿಯಮಾನುಸಾರ ಕಟ್ಟುನಿಟ್ಟಿನ ಕ್ರಮ ಜರುಗಿಸಲಾಗುವುದು ಎಂದು ಎಚ್ಚರಿಕೆ ನೀಡಿದರು.

    ಜಿಪಂ ಸಿಒಒ ಶಿಲ್ಪಾ ಶರ್ಮಾ, ಜಿಲ್ಲಾ ಆರೋಗ್ಯಾಧಿಕಾರಿ ಡಾ. ಎಂ. ಎಸ್. ಪಾಟೀಲ್, ಜಿಲ್ಲಾ ಶಸ್ತ್ರಚಿಕಿತ್ಸಕ ಡಾ.ನಾರಾಯಣಪ್ಪ, ಡಾ.ಭಗವಂತ ಅನವಾರ, ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ.ವಿವೇಕಾನಂದ ಟೆಂಗೆ ಹಾಗೂ ತಾಲೂಕು ಆರೋಗ್ಯ ಅಧಿಕಾರಿಗಳು ಸಭೆಯಲ್ಲಿ ಹಾಜರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts