More

    ವೈಯಕ್ತಿಕ ಕಾಮಗಾರಿ ಸದುಪಯೋಗ ಪಡೆಯಿರಿ

    ಬೈಲಹೊಂಗಲ, ಬೆಳಗಾವಿ: ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಲ್ಲಿ ವೈಯಕ್ತಿಕ ಕಾಮಗಾರಿ ಪಡೆದುಕೊಳ್ಳಲು ಅವಕಾಶ ಕಲ್ಪಿಸಲಾಗಿದ್ದು, ಮಹಿಳೆಯರು ಇದರ ಲಾಭ ಪಡೆದು ಸಮಾಜದ ಮುಖ್ಯವಾಹಿನಿಗೆ ಬರಬೇಕು ಎಂದು ತಾಪಂ ಇಒ ಸುಭಾಷ ಸಂಪಗಾಂವಿ ಹೇಳಿದರು.

    ಇಲ್ಲಿನ ತಾಪಂ ಸಭಾಂಗಣದಲ್ಲಿ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿಯಲ್ಲಿ ಬುಧವಾರ ಹಮ್ಮಿಕೊಂಡಿದ್ದ ಮಹಿಳಾ ಉದ್ಯೋಗ ಸಬಲೀಕರಣ ಅಭಿಯಾನಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

    ತಾಲೂಕಿನ ಎಲ್ಲ ಗ್ರಾಪಂ ವ್ಯಾಪ್ತಿಯಲ್ಲಿ ನವೆಂಬರ-2022 ಮಾಸದಲ್ಲಿ ಮಹಿಳಾ ಉದ್ಯೋಗ ಸಬಲೀಕರಣ ಅಭಿಯಾನ ಹಾಗೂ ಮಹಿಳಾ ವಿಶೇಷ ಗ್ರಾಮ ಸಭೆಗಳನ್ನು ಹಮ್ಮಿಕೊಂಡು ಉದ್ಯೋಗ ಖಾತ್ರಿ ಯೋಜನೆಯಲ್ಲಿ ಮಹಿಳೆಯರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಪ್ರೋತ್ಸಾಹಿಸಲಾಗುತ್ತಿದೆ. ಈ ಯೋಜನೆಯಲ್ಲಿ ಸಮಾನ ಕೆಲಸಕ್ಕೆ ಸಮಾನ ಕೂಲಿಯನ್ನು ನೀಡಲಾಗುತ್ತಿದೆ ಎಂದರು.

    ಸಹಾಯಕ ನಿರ್ದೇಶಕ ವಿಜಯ ಪಾಟೀಲ ಮಾತನಾಡಿ, ವಿಶೇಷ ಮಹಿಳಾ ಗ್ರಾಮ ಸಭೆಯ ಮೂಲಕ ಮಹಿಳೆಯರ ಅವಶ್ಯಕ ಬೇಡಿಕೆಗಾಗಿ ಬೇಡಿಕೆ ಪಟ್ಟಿಯಲ್ಲಿ ವೈಯಕ್ತಿಕ ಕಾಮಗಾರಿಗಳ ಪಟ್ಟಿ ಸಲ್ಲಿಸಿ, ಮಹಿಳೆಯರ ಆರೋಗ್ಯದ ದೃಷ್ಟಿಯಿಂದ ನರೇಗಾ ಕಾಮಗಾರಿ ಸ್ಥಳದಲ್ಲಿ ಆರೋಗ್ಯ ಶಿಬಿರವನ್ನು ಹಮ್ಮಿಕೊಳ್ಳಲಾಗುವುದು. ಜತೆಗೆ ಪ್ರತಿ ಮನೆ ಮನೆಗೆ ಭೇಟಿ ನೀಡಿ, ಮಹಿಳೆಯರು ಕೆಲಸಕ್ಕೆ ಬರುವಂತೆ ನೋಡಿಕೊಳ್ಳಲಾಗುವುದು ಎಂದರು.

    ಸಹಾಯಕ ನಿರ್ದೇಶಕ ರಘು.ಬಿ. ಎನ್, ತಾಲೂಕು ಯೋಜನಾಧಿಕಾರಿ ಪ್ರಶಾಂತ ಮುನವಳ್ಳಿ, ವ್ಯವಸ್ಥಾಪಕ ಎಂ.ಎ. ಇಂಚಲಮಠ ಪಿಡಿಒ ಆಸೀಫ್, ಲತೀಫ್, ವಿಶ್ವನಾಥ ಎಚ್, ಉಸಮಾನ ನದ್ಾ, ಗಂಗಪ್ಪ ಹಾದಿಮನಿ, ಗೋಪಾಲ ಹುಬಳಿಕರ, ಮೇಘನಾ ಶೆಟ್ಟಿ, ಕಾವೇರಿ ಬಡಿಗೇರ, ವನಜಾಕ್ಷಿ ಪಾಟೀಲ, ಈರಮ್ಮ ಅಂಗಡಿ ಇತರರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts