More

    ವೋಟರ್ ಲಿಸ್ಟ್ ನಲ್ಲಿ ಹೆಸರು ನೋಂದಾಯಿಸಿ

    ಯಾದಗಿರಿ: ವಿಧಾನಸಭೆ ಚುನಾವಣೆಯಲ್ಲಿ ತಪ್ಪದೇ ಮತದಾನ ಮಾಡಲು ಲಿಂಗತ್ವ ಅಲ್ಪಸಂಖ್ಯಾತರು ಮತದಾರರ ಪಟ್ಟಿಯಲ್ಲಿ ಕಡ್ಡಾಯವಾಗಿ ತಮ್ಮ ಹೆಸರು ನೋಂದಾಯಿಸಿಕೊಳ್ಳಿ ಎಂದು ಜಿಲ್ಲಾಕಾರಿ ಸ್ನೇಹಲ್ ಆರ್., ಸಲಹೆ ನೀಡಿದರು.

    ಸೋಮವಾರ ಇಲ್ಲಿನ ಜಿಲ್ಲಾಕಾರಿ ಕಚೇರಿಯ ಸಭಾಂಗಣದಲ್ಲಿ ಲಿಂಗತ್ವ ಅಲ್ಪಸಂಖ್ಯಾತರಿಗೆ ಮತದಾರರ ಪಟ್ಟಿಗೆ ಸೇರ್ಪಡೆ ಕುರಿತ ಸಭೆಯಲ್ಲಿ ಮಾತನಾಡಿ, ಚುನಾವಣೆಯು ದೊಡ್ಡ ಪ್ರಜಾಪ್ರಭುತ್ವ ರಾಷ್ಟ್ರವಾದ ಭಾರತದಲ್ಲಿ ಹಬ್ಬದಂತಿದ್ದು, ದೇಶದ ಅಭಿವೃದ್ಧಿಗೆ ಪೂರಕವಾಗಿದೆ. ಚುನಾವಣೆ ವ್ಯವಸ್ಥೆಯಲ್ಲಿ ಪ್ರತಿಯೊಬ್ಬರೂ ಪಾಲ್ಗೊಂಡು, ಮತ ಚಲಾವಣೆ ಮಾಡಬೇಕು ಎಂದರು.

    18 ವರ್ಷ ಮೇಲ್ಪಟ್ಟವರು ತಮ್ಮ ಹೆಸರನ್ನು ಮತದಾರರ ಪಟ್ಟಿಯಲ್ಲಿ ಸೇರಿಸಿಕೊಳ್ಳಿ, ಪಟ್ಟಿಯಲ್ಲಿ ಹೆಸರು ಬಿಟ್ಟು ಹೋಗಿದಲ್ಲಿ ಅವರ ಹೆಸರು ಸೇರ್ಪಡೆಗೆ ಕ್ರಮ ತೆಗೆದುಕೊಳ್ಳಲು ಮತದಾರರ ನೋಂದಣಿ ಅಕಾರಿಗಳಿಗೆ ನಿದರ್ೇಶನ ನೀಡಲಾಗಿದೆ. ಜಿಲ್ಲೆಯ ಎಲ್ಲ ಲಿಂಗತ್ವ ಅಲ್ಪ ಸಂಖ್ಯಾತರಿಗೂ ಮತದಾರರ ಚೀಟಿ ಕೊಡಿಸುವ ಉದ್ದೇಶದಿಂದ ಈ ಸಭೆ ಆಯೋಜಿಸಲಾಗಿದೆ. ಈಗಾಗಲೇ ಕೆಲವರು ಮತದಾರರ ಗುರುತಿನ ಚೀಟಿ ಹೊಂದಿದ್ದಾರೆ. ಪಡೆಯದೇ ಇರುವವರು ಮತದಾರರ ಚೀಟಿ ಪಡೆಯುವಂತೆ ಕಿವಿಮಾತು ಹೇಳಿದರು.

    ಇದರಿಂದ ಸೂಕ್ತ ಜನಪ್ರತಿನಿಗಳನ್ನು ಆಯ್ಕೆ ಮಾಡಲು ಅನುಕೂಲವಾಗುತ್ತದೆ. ಹಾಗಾಗಿ ಪ್ರತಿಯೊಬ್ಬರು ಕಡ್ಡಾಯವಾಗಿ ಮತ ಚಲಾಯಿಸಬೇಕು. ಸಮಸ್ಯೆಗಳಿದ್ದಲ್ಲಿ ನಮಗೆ ತಿಳಿಸಿ ಪರಿಶೀಲಿಸಿ ಕ್ರಮ ಕೈಗೊಳ್ಳಲಾಗುವುದು. ಅಲ್ಲದೆ ಈ ಚುನಾವಣೆಯಲ್ಲಿ 80 ವರ್ಷ ಮೇಲ್ಪಟ್ಟವರು ಮತ್ತು ವಿಕಲಚೇತನರಿಗೆ ಮನೆಯಿಂದ ಮತ ಚಲಾುಸುವ ಸೌಲಭ್ಯವನ್ನು ಆಯೋಗವು ಪರಿಚಯಿಸಿದೆ. 80 ವರ್ಷ ಮೇಲ್ಪಟ್ಟವರನ್ನು ಮತಗಟ್ಟೆಗೆ ಬರುವಂತೆ ನಾವು ಪ್ರೋತ್ಸಾಹಿಸುತ್ತೇವೆಯಾದರೂ, ಸಾಧ್ಯವಾಗದವರು ಈ ಸೌಲಭ್ಯವನ್ನು ಪಡೆಯಬಹುದು ಎಂದು ಮಾಹಿತಿ ನೀಡಿದರು.

    ಅಪರ ಜಿಲ್ಲಾಕಾರಿ ಶರಣಬಸಪ್ಪ ಕೋಟೆಪ್ಪಗೊಳ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿದರ್ೇಶಕ ರವೀಂದ್ರ ರತ್ನಾಕರ್,ನಿಗಮದ ಜಿಲ್ಲಾ ನಿರೀಕ್ಷಕಿ ಶಿವಮಂಗಳ ಪ್ರಸನ್ನ, ಲೈಂಗಿಕ ಅಲ್ಪಸಂಖ್ಯಾತರ ಒಕ್ಕೂಟದ ಅಧ್ಯಕ್ಷೆ ಮಾಯಾ ನಾಯಕ, ಆಶಾಕಿರಣ ಸಾಮಾಜಿಕ ಸೇವಾ ಸಂಸ್ಥೆಯ ಅಧ್ಯಕ್ಷ ಬಸವರಾಜ, ಉಪಾಧ್ಯಕ್ಷೆ ಅಂಕಿತ ದೊಡ್ಮನಿ, ಪ್ರಿಯಾಂಕ, ವಿಧ್ಯಾಶ್ರೀ, ಕಿರಣ್ ಕೋಳಿ ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts