More

    ವ್ಯಕ್ತಿತ್ವದ ಪರಿಪೂರ್ಣ ಬೆಳವಣಿಗೆಗೆ ಕ್ರೀಡೆ ಸಹಕಾರಿ

    ಹುಣಸೂರು: ವಿದ್ಯಾರ್ಥಿಗಳ ವ್ಯಕ್ತಿತ್ವದ ಪರಿಪೂರ್ಣ ಬೆಳವಣಿಗೆಗೆ ಕ್ರೀಡೆ ಉತ್ತಮ ವೇದಿಕೆಯಾಗಿದೆ ಎಂದು ಮಾದಳ್ಳಿ ಉಕ್ಕಿನಕಂತೆ ಮಠದ ಶ್ರೀ ಸಾಂಬಸದಾಶಿವ ಸ್ವಾಮೀಜಿ ಅಭಿಪ್ರಾಯಪಟ್ಟರು.


    ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಮತ್ತು ಮಾದಳ್ಳಿಯ ಎಸ್‌ಜಿಬಿಎಸ್ ವಿದ್ಯಾಸಂಸ್ಥೆಯ ಸಹಯೋಗದಲ್ಲಿ ಸೋಮವಾರ ನಗರದ ಮುನೇಶ್ವರ ಕಾವಲ್ ಮೈದಾನದಲ್ಲಿ ಆಯೋಜಿಸಿದ್ದ 2022-23ನೇ ಸಾಲಿನ ಪ್ರಾಥಮಿಕ ಮತ್ತು ಪ್ರೌಢಶಾಲಾ ಮಟ್ಟದ ಕ್ರೀಡಾಕೂಟ ಉದ್ಘಾಟಿಸಿ ಅವರು ಮಾತನಾಡಿದರು.
    ಪಠ್ಯ ಪುಸ್ತಕಗಳೊಂದಿಗೆ ಪಠ್ಯೇತರ ಚಟುವಟಿಕೆಗಳು ವಿದ್ಯಾರ್ಥಿಗಳ ವ್ಯಕ್ತಿತ್ವವನ್ನು ವಿಕಸನಗೊಳಿಸುತ್ತವೆ. ಮಾನಸಿಕ ಮತ್ತು ದೈಹಿಕ ಆರೋಗ್ಯ ನೀಡುತ್ತವೆ. ಕ್ರೀಡೆಯಲ್ಲಿ ಸೋಲು-ಗೆಲುವು ಮುಖ್ಯವಾಗಬಾರದು. ಭಾಗವಹಿಸುವ ಮನೋಭಾವ ನಿಮ್ಮಲ್ಲಿ ಮೂಡಲಿ ಎಂದರು.


    ಕ್ಷೇತ್ರ ಶಿಕ್ಷಣಾಧಿಕಾರಿ ಎಸ್.ರೇವಣ್ಣ ಮಾತನಾಡಿ, ಮಾದಳ್ಳಿಯ ಎಸ್‌ಜಿಬಿಎಸ್ ವಿದ್ಯಾಸಂಸ್ಥೆ ಈ ಬಾರಿ ತಾಲೂಕು ಮಟ್ಟದ ಕ್ರೀಡಾಕೂಟವನ್ನು ಇಲಾಖೆಯೊಂದಿಗೆ ಕೈಜೋಡಿಸಿ ಉತ್ತಮವಾಗಿ ಆಯೋಜಿಸಿದೆ ಎಂದು ಶ್ಲಾಘಿಸಿದರು. ಟೆನಿಸ್ ಆಟಗಾರ ಎಂ.ಜೆ.ಚರಣ್ ಕ್ರೀಡಾ ಜ್ಯೋತಿಯನ್ನು ತಂದರು. ನಗರಸಭೆ ಅಧ್ಯಕ್ಷೆ ಗೀತಾ ನಿಂಗರಾಜು ಕ್ರೀಡಾಕೂಟಕ್ಕೆ ಚಾಲನೆ ನೀಡಿದರು. ನಗರಸಭೆ ಉಪಾಧ್ಯಕ್ಷೆ ಆಶಾ, ಸ್ಥಾಯಿ ಸಮಿತಿ ಅಧ್ಯಕ್ಷೆ ಶ್ವೇತಾ ಮಂಜುನಾಥ್, ಪೌರಾಯುಕ್ತ ಖಲೀಲ್ ಸಾಬ್, ತಹಸೀಲ್ದಾರ್ ಡಾ.ಎಸ್.ಯು.ಅಶೋಕ್, ತಾಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಬಿ.ಕೆ.ಮನು ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts