More

    ವ್ಯವಸ್ಥಿತ ಚುನಾವಣೆಗೆ ಪ್ರಾಮಾಣಿಕವಾಗಿ ಕರ್ತವ್ಯ ನಿರ್ವಹಿಸಿ

    ಕೆ.ಆರ್.ನಗರ: ವಿಧಾನಸಭಾ ಚುನಾವಣೆ ವ್ಯವಸ್ಥಿತವಾಗಿ ನಡೆಯಬೇಕಿರುವ ಹಿನ್ನೆಲೆಯಲ್ಲಿ ಅಧಿಕಾರಿಗಳು ಮತ್ತು ಸಿಬ್ಬಂದಿ ಪ್ರಾಮಾಣಿಕ ಮತ್ತು ಸಕ್ರಿಯವಾಗಿ ಕಾರ್ಯನಿರ್ವಹಿಸಬೇಕು ಎಂದು ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ ಸೂಚನೆ ನೀಡಿದರು.

    ಚುನಾವಣಾ ನೀತಿ ಸಂಹಿತೆ ಕುರಿತಂತೆ ಪಟ್ಟಣದ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ಬುಧವಾರ ಆಯೋಜಿಸಿದ್ದ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿದ ಅವರು ಹಣ ಸಾಗಣೆ, ಅಭ್ಯರ್ಥಿಗಳ ವೆಚ್ಚ ಹಾಗೂ ವಾಹನಗಳ ಓಡಾಟದ ಬಗ್ಗೆ ಹೆಚ್ಚಿನ ನಿಗಾ ವಹಿಸುವಂತೆ ತಿಳಿಸಿದರು.

    ಅಂಗವಿಕಲರನ್ನು ಮತದಾನದ ಕೇಂದ್ರಕ್ಕೆ ಕರೆತರಲು ಸರ್ಕಾರದಿಂದಲೇ ಎಲ್ಲ ವ್ಯವಸ್ಥೆ ಮಾಡಲಾಗುತ್ತಿದ್ದು, ರಾಜಕೀಯ ವ್ಯಕ್ತಿಯಾಗಲಿ, ಅಭ್ಯರ್ಥಿಯ ಕಡೆಯವರಾಗಲಿ ಅಥವಾ ಇತರ ವಾಹನದಲ್ಲಿ ಅವರನ್ನು ಕರೆತರಲು ಅವಕಾಶ ನೀಡಬಾರದು. ಈ ಬಗ್ಗೆ ಎಚ್ಚರಿಕೆ ವಜಿಸಬೇಕು ಎಂದು ತಾಕೀತು ಮಾಡಿದರು.

    ದಾಖಲೆ ಇಲ್ಲದೆ 50 ಸಾವಿರ ರೂ.ಗಿಂತ ಹೆಚ್ಚು ಹಣ ಸಿಕ್ಕಲ್ಲಿ ಚೆಕ್‌ಪೋಸ್ಟ್‌ಗಳಲ್ಲಿ ಕರ್ತವ್ಯ ನಿರ್ವಹಿಸುವ ಅಧಿಕಾರಿಗಳು ಮತ್ತು ಸಿಬ್ಬಂದಿ ಸ್ಥಳದಲ್ಲಿ ಅದನ್ನು ಸೀಜ್ ಮಾಡಬಹುದು. ಸತ್ಯಾಸತ್ಯತೆ ತಿಳಿದು ನಂತರ ವಾಪಸ್ ನೀಡುವ ಬಗ್ಗೆ ಸಂಬಂಧಪಟ್ಟ ವ್ಯಕ್ತಿಗಳಿಗೆ ಮಾಹಿತಿ ನೀಡಬೇಕು ಎಂದು ಹೇಳಿದರು.

    ಪತ್ರಿಕೆಗಳು ಹಾಗೂ ಮಾಧ್ಯಮಗಳಲ್ಲಿ ಬರುವ ಜಾಹೀರಾತು ಮತ್ತು ಪೇಯ್ಡ ನ್ಯೂಸ್‌ಗಳ ಬಗ್ಗೆ ನಿಗಾ ವಹಿಸಬೇಕು. ಯಾವುದೇ ಕಾರಣಕ್ಕೂ ಈ ವಿಚಾರದಲ್ಲಿ ಚುನಾವಣಾ ನೀತಿ ಸಂಹಿತಿ ಮೀರದಂತೆ ಮುನ್ನೆಚ್ಚರಿಕೆ ತೆಗೆದುಕೊಳ್ಳಬೇಕು ಎಂದರು.

    ಜಿಲ್ಲಾ ಮಾದರಿ ನೀತಿ ಸಂಹಿತೆ ನೋಡಲ್ ಅಧಿಕಾರಿ ಕೆ.ಎಂ.ಗಾಯತ್ರಿ, ಪ್ರಾಚ್ಯವಸ್ತು ಸಂಗ್ರಹಾಲಯದ ಆಯುಕ್ತ ದೇವರಾಜ್ ಚುನಾವಣೆ ನೀತಿ ಸಂಹಿತೆ ಕುರಿತಂತೆ ಮಾಹಿತಿ ಹಂಚಿಕೊಂಡರು. ಕ್ಷೇತ್ರ ಚುನಾವಣಾಧಿಕಾರಿ ಬಿ.ಸುಪ್ರಿಯಬಣಗಾರ್, ತಹಸೀಲ್ದಾರ್ ಬಿ.ಜಿ.ಸಂತೋಷಕುಮಾರ್, ತಾಪಂ ಇಒ ಎಚ್.ಕೆ.ಸತೀಶ್, ಸಹಾಯಕ ಯೋಜನಾಧಿಕಾರಿ ಸುಬ್ರಹ್ಮಣ್ಯಶರ್ಮ ಮತ್ತಿತರ ಅಧಕಾರಿಗಳು ಸಭೆಯಲ್ಲಿ ಪಾಲ್ಗೊಂಡಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts