More

    ಶಕ್ತಿಸೌಧದ ಬಳಿ ಪ್ರತಿಭಟನೆಗಳ ಮಹಾಪೂರ

    ಬೆಳಗಾವಿ: ಬೆಲೆ ಹಾನಿಗೆ ಪರಿಹಾರ ಕಲ್ಪಿಸುವುದು ಹಾಗೂ ಎ್ಆರ್‌ಪಿ ದರ 3,500 ರೂ. ನಿಗದಿಪಡಿಸುವುದು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಅಖಂಡ ಕರ್ನಾಟಕ ರೈತ ಸಂಘ ನೇತೃತ್ವದಲ್ಲಿ ಸುವರ್ಣ ಗಾರ್ಡನ್ ಆವರಣದಲ್ಲಿ ಸೋಮವಾರ ನೂರಾರು ರೈತರು ಪ್ರತಿಭಟನೆ ನಡೆಸಿದರು.

    ಕೇಂದ್ರ ಸರ್ಕಾರ ವಿವಾದಿತ ಮೂರು ಕೃಷಿ ಕಾಯ್ದೆಗಳನ್ನು ಹಿಂಪಡೆದಿದ್ದು, ರಾಜ್ಯ ಸರ್ಕಾರವು ಅವುಗಳನ್ನು ಹಿಂಪಡೆಯಬೇಕು. ಈ ಮೂರು ಕಾನೂನುಗಳಿಗೆ ಪೂರಕವಾಗಿ ರಾಜ್ಯ ಸರ್ಕಾರ ಜಾರಿ ಮಾಡಿರುವ ತಿದ್ದುಪಡಿ ಕಾಯ್ದೆಗಳಾದ ಭೂ ಸುಧಾರಣಾ ಕಾಯ್ದೆ, ಎಪಿಎಂಸಿ ಮತ್ತು ವಿದ್ಯುತ್ ಖಾಸಗೀಕರ ಕಾಯ್ದೆಗಳನ್ನು ತಕ್ಷಣ ಹಿಂಪಡೆಯಬೇಕು ಎಂದು ಆಗ್ರಹಿಸಿದರು.

    ಅಕಾಲಿಕ ಮಳೆಯಿಂದ ರೈತರು ಬೆಳೆದ ವಿವಿಧ ಬೆಳೆಗಳು ಹಾಳಾಗಿದ್ದು, ಪ್ರತಿ ಎಕರೆಗೆ 25 ಸಾವಿರ ರೂ. ಪರಿಹಾರ ಘೋಷಿಸಬೇಕು, ಕಬ್ಬಿನ ಬಾಕಿ ಹಣವನ್ನು ತಕ್ಷಣ ಪಾವತಿಸುವಂತೆ ಕ್ರಮಕೈಗೊಳ್ಳಬೇಕು. ಎ್ಆರ್‌ಪಿ ದರವನ್ನು ಮರುಪರಿಶೀಲಿಸಿ ಪ್ರತಿ ಟನ್ ಕಬ್ಬಿಗೆ 3,500 ರೂ. ದರ ನಿಗದಿಪಡಿಸಬೇಕು, ಸಕ್ಕರೆ ಕಾರ್ಖಾನೆಗಳಲ್ಲಿ ಕಬ್ಬಿನ ತೂಕದಲ್ಲಾಗುವ ಮೋಸವನ್ನು ತಡೆಯಲು ಕಟ್ಟುನಿಟ್ಟಿನ ಕ್ರಮ ತೆಗೆದುಕೊಳ್ಳಬೇಕು ಎಂದು ರೈತರು ಆಗ್ರಹಿಸಿದರು.

    ಬೆಳೆ ವಿಮಾ ಯೋಜನೆ ಖಾಸಗೀಕರಣ ಮಾಡಿದ್ದರಿಂದ ರೈತರಿಗೆ ಪ್ರಯೋಜನ ಸಿಗುತ್ತಿಲ್ಲ. ಆದ್ದರಿಂದ ಇದನ್ನು ಸರ್ಕಾರದ ಅೀನದಲ್ಲಿಯೇ ಜಾರಿಯಾಗುವಂತೆ ಕ್ರಮ ಕೈಗೊಳ್ಳಬೇಕು. ಮತ್ತು ರೈತರ ಎಲ್ಲ ಬೆಳೆಗಳಿಗೂ ಇದರ ಪ್ರಯೋಜನ ಸಿಗುವಂತೆ ಕ್ರಮ ಕೈಗೊಳ್ಳಬೇಕು ಎಂದು ಪ್ರತಿಭಟನಾಕಾರರು ಮನವಿ ಮಾಡಿದರು.
    ರೈತರು ಬ್ಯಾಂಕ್‌ಗಳಲ್ಲಿ ಪಡೆಯುತ್ತಿರುವ ಸಾಲದ ಮೇಲೆ ಹಾಕುತ್ತಿರುವ ಜಿಎಸ್‌ಟಿ ತಡೆಯಬೇಕು. ರೈತರ ಸಂಪೂರ್ಣ ಸಾಲವನ್ನು ಮನ್ನಾ ಮಾಡಬೇಕು. ರೈತರ ನಿರುದ್ಯೋಗಿ ಮಕ್ಕಳಿಗೆ ಉದ್ಯೋಗ ಸೃಷ್ಟಿಸಬೇಕು, ಕೃಷಿ ಪೂರಕವಾದ ಕೈಗಾರಿಕೆಗಳನ್ನು ಸ್ಥಾಪಿಸುವಂತ ಯೋಜನೆ ಜಾರಿ ಮಾಡುವುದು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸಬೇಕು ಎಂದು ಒತ್ತಾಯಿಸಿದರು.

    ರೈತರ ಮುಖಂಡರಾದ ಪಿ.ಎಚ್.ನೀರಲಕೇರಿ, ಭೀಮಪ್ಪ ಕಾಸಾಯಿ, ಮಲ್ಲಿಕಾರ್ಜುನ ವಾಲಿ, ಸಿದ್ದನಗೌಡ ಪಾಟೀಲ, ಸೋಮಬುದ್ದು ರಂಗಸ್ವಾಮಿ, ಶಿವಾನಂದ ಹೊಳೆಹಡಗಲಿ, ಬೈಲಪ್ಪ ದಳವಾಯಿ, ದ್ಯಾಮವ್ವ ವಡ್ಡರ, ಮಂಜುಳಾ ಹುಲಮನಿ, ಕೀರಪ್ಪ ಹಾಗೂ ನೀಲಕಂಠ ಕಲ್ಲೂರ ಸೇರಿದಂತೆ ನೂರಾರು ರೈತರು ಪ್ರತಿಭಟನೆಯಲ್ಲಿದ್ದರು.

    Array

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts