More

    ಶನಿವಾರಸಂತೆ ಮುಖ್ಯರಸ್ತೆ ಸೀಲ್‌ಡೌನ್

    ವಿವಾಹಿತೆಗೆ ಕರೊನಾ ಸೋಂಕು

    ಶನಿವಾರಸಂತೆ: ಮಹಿಳೆಯೊಬ್ಬರಿಗೆ ಕೋವಿಡ್ ಸೋಂಕು ದೃಢಪಟ್ಟಿರುವ ಹಿನ್ನೆಲೆಯಲ್ಲಿ ಪಟ್ಟಣದ 1ನೇ ವಿಭಾಗದ ಮುಖ್ಯರಸ್ತೆ ಬದಿಯ ನೂರು ಮೀಟರ್ ಪ್ರದೇಶವನ್ನು ಶನಿವಾರ ಸೀಲ್‌ಡೌನ್ ಮಾಡಲಾಗಿದೆ.
    ವಿವಾಹಿತೆಗೆ ಪ್ರಾಥಮಿಕ ಸಂಪರ್ಕದಿಂದ ಕರೊನಾ ಸೋಂಕು ದೃಢಪಟ್ಟಿದೆ. ಈ ಹಿನ್ನೆಲೆಯಲ್ಲಿ ಅವರು ಮಡಿಕೇರಿ ಜಿಲ್ಲಾ ಆಸ್ಪತ್ರೆಗೆ ದಾಖಲಾಗಿದ್ದಾರೆ. ಸೋಂಕಿತೆ ವಾಸವಾಗಿದ್ದ ಮನೆಯ ನೂರು ಮೀಟರ್ ವ್ಯಾಪ್ತಿಯನ್ನು ಆರೋಗ್ಯ ಅಧಿಕಾರಿಗಳು ಕಂಟೇನ್ಮೆಂಟ್ ವಲಯವೆಂದು ಘೋಷಿಸಿ ಸೀಲ್‌ಡೌನ್ ಮಾಡಿದ್ದಾರೆ. ಈ ಸಂದರ್ಭ ಗ್ರಾ.ಪಂ. ಪಿಡಿಒ, ಆರೋಗ್ಯ ಸಹಾಯಕಿಯರು, ಆಶಾ ಕಾರ್ಯಕರ್ತೆಯರು ಮತ್ತು ಪೊಲೀಸ್ ಸಿಬ್ಬಂದಿ ಹಾಜರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts