More

    ಶನೈಶ್ಚರಸ್ವಾಮಿ ದೇವಸ್ಥಾನದಲ್ಲಿ ವಿಶೇಷ ಪೂಜೆ

    ಮಳವಳ್ಳಿ: ತಾಲೂಕಿನ ತೆಂಕಹಳ್ಳಿ ಸಮೀಪವಿರುವ ಶನೈಶ್ಚರಸ್ವಾಮಿ ದೇವಸ್ಥಾನದಲ್ಲಿ ಅಮಾವಾಸ್ಯೆ ಪ್ರಯುಕ್ತ ಗುರುವಾರ ರಾತ್ರಿ ಪೌರಾಣಿಕ ನಾಟಕ ಪ್ರದರ್ಶನ ಹಮ್ಮಿಕೊಳ್ಳಲಾಗಿತ್ತು. ಬೆಳಗಿನಿಂದಲೇ ಸ್ವಾಮಿಗೆ ಹೋಮ, ಹವನ ಸೇರಿದಂತೆ ವಿಶೇಷ ಪೂಜಾ ಕೈಂಕರ್ಯಗಳನ್ನು ಪ್ರಧಾನ ಅರ್ಚಕ ನಂಜುಂಡಸ್ವಾಮಿ ನೇತೃತ್ವದಲ್ಲಿ ನೆರವೇರಿಸಲಾಯಿರು.


    ತಾಲೂಕು ಸೇರಿದಂತೆ ಹೊರ ಜಿಲ್ಲೆಗಳ ನಗರ ಹಾಗೂ ಗ್ರಾಮೀಣ ಪ್ರದೇಶಗಳಿಂದ ಆಗಮಿಸಿದ ಭಕ್ತ ಸಮೂಹ ದೇವರಿಗೆ ಪೂಜೆ ಸಲ್ಲಿಸಿ ದರ್ಶನ ಪಡೆದು ಪುನೀತರಾದರು. ರಾತ್ರಿ ಒಂಬತ್ತು ಗಂಟೆ ವೇಳೆಗೆ ನಂದಿಕಂಬ, ವೀರಭದ್ರ ಕುಣಿತ ಹಾಗೂ ಮಂಗಳವಾದ್ಯದೊಡನೆ ಶನೈಶ್ಚರಸ್ವಾಮಿ ಉತ್ಸವಕ್ಕೆ ಚಾಲನೆ ದೊರೆಯಿತು.


    ನಂತರ ರಾಜ್ಯ ಪ್ರಶಸ್ತಿ ವಿಜೇತ ಕಲಾವಿದ ಬದನವಾಳು ಶಿವಕುಮಾರ್ ಶಾಸ್ತ್ರಿ ತಂಡದವರಿಂದ ಸತ್ಯಹರಿಶ್ಚಂದ್ರ ಪೌರಾಣಿಕ ನಾಟಕ ಯಶಸ್ವಿಯಾಗಿ ಪ್ರದರ್ಶನಗೊಂಡಿತು. ನಾಟಕದ ಪ್ರಮುಖ ಆಕರ್ಷಣೆಯ ಪಾತ್ರವನ್ನು ಶಿವಕುಮಾರ ಶಾಸ್ತ್ರಿ ನಿರ್ವಹಿಸುವ ಮೂಲಕ ನೆರೆದವರ ಗಮನ ಸೆಳೆದರು. ಆಗಮಿಸಿದ ಭಕ್ತರಿಗೆ ದೇವಸ್ಥಾನದ ಆಡಳಿತ ಸಮಿತಿಯಿಂದ ಅನ್ನಸಂತರ್ಪಣೆ ಮಾಡಲಾಯಿತು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts