More

    ಶರಾವತಿ ಅಭಯಾರಣ್ಯಕ್ಕೆ ಸೇರ್ಪಡೆ ಬೇಡ

    ಕುಮಟಾ: ಶರಾವತಿ ಅಭಯಾರಣ್ಯಕ್ಕೆ ಕುಮಟಾ ತಾಲೂಕಿನ ಅರಣ್ಯವಾಸಿಗಳ ಪ್ರದೇಶ ಸೇರ್ಪಡೆ ರದ್ದು ಮಾಡಬೇಕು ಎಂದು ರಾಜ್ಯಪಾಲರಿಗೆ ಮತ್ತು ಅರಣ್ಯ ಹಕ್ಕು ಮಂಜೂರಿ ಪ್ರಕ್ರಿಯೆ ಶೀಘ್ರ ನಡೆಸುವಂತೆ ಜಿಲ್ಲಾಧಿಕಾರಿಗೆ ವಿನಂತಿಸಿ ಉಪವಿಭಾಗಾಧಿಕಾರಿ ಮೂಲಕ ಮನವಿ ಸಲ್ಲಿಸಿದರು.

    ಅರಣ್ಯ ಅತಿಕ್ರಮಣದಾರರ ಹೋರಾಟ ವೇದಿಕೆ ಜಿಲ್ಲಾಧ್ಯಕ್ಷ ರವೀಂದ್ರ ನಾಯ್ಕ ನೇತೃತ್ವದಲ್ಲಿ ಅತಿಕ್ರಮಣದಾರರು ಪಟ್ಟಣದ ಮಾಸ್ತಿಕಟ್ಟೆ ದೇವಾಲಯ ಆವರಣದಿಂದ ಹೊರಟು ಪಟ್ಟಣದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ಮೂಲಕ ಸಾಗಿ ಉಪವಿಭಾಗಾಧಿಕಾರಿಗಳ ಕಚೇರಿ ಬಳಿ ಜಮಾಯಿಸಿದರು.

    ಮನವಿ: ಶಿವಮೊಗ್ಗ ಜಿಲ್ಲೆಯ ಶರಾವತಿ ಅಭಯಾರಣ್ಯಕ್ಕೆ ಕುಮಟಾ ತಾಲೂಕಿನ ಸೊಪ್ಪಿನಹೊಸಳ್ಳಿ, ಮೇದಿನಿ, ಹೆಕ್ಕಳಿ, ಮೂರ್ಸೆ, ಬಂಗಣಿ, ಮುದ್ದಿನಹೊಸಳ್ಳಿ, ಹುಳ್ಳೂರು ಗ್ರಾಮಗಳ ಪ್ರದೇಶವನ್ನು ಸೇರಿಸಲ್ಪಟ್ಟು ಸುಮಾರು 1000ಕ್ಕಿಂತ ಹೆಚ್ಚು ಕುಟುಂಬಗಳಿಗೆ ಆತಂಕವಿದೆ. ಆದ್ದರಿಂದ ಈ ಆದೇಶವನ್ನು ರದ್ದುಪಡಿಸಿ ಅಭಯಾರಣ್ಯದ ವ್ಯಾಪ್ತಿಯಲ್ಲಿ ಬರುವ ಅರಣ್ಯ ಪ್ರದೇಶವನ್ನು ರದ್ದುಗೊಳಿಸಲು ರಾಜ್ಯ ಸರ್ಕಾರಕ್ಕೆ ಸೂಕ್ತ ನಿರ್ದೇಶನ ನೀಡಬೇಕೆಂದು ರಾಜ್ಯಪಾಲರಿಗೆ ಮನವಿಯಲ್ಲಿ ಕೋರಲಾಯಿತು.

    ಅತಿಕ್ರಮಣದಾರರು ಜಿಲ್ಲಾಧಿಕಾರಿಗಳಿಗೆ ವೈಯಕ್ತಿಕ ಮನವಿ ಸಲ್ಲಿಸಿದರು. ಈ ವೇಳೆ ಸಾಕಷ್ಟು ನೂಕುನುಗ್ಗಲು ಉಂಟಾಗಿ ಜನರನ್ನು ನಿಯಂತ್ರಿಸಲು ಪೊಲೀಸರು ಹರಸಾಹಸಪಟ್ಟರು.

    ತಾಲೂಕಾಧ್ಯಕ್ಷ ಮಂಜುನಾಥ ತಿಮ್ಮಾ ಮರಾಠಿ, ಸೀತಾರಾಮ ನಾಯ್ಕ ಬೊಗ್ರಿಬೈಲ್, ಜಿಲ್ಲಾ ಸಂಚಾಲಕ ಜಿ.ಎಂ. ಶೆಟ್ಟಿ, ಅಂಕೋಲಾ ತಾಲೂಕಾಧ್ಯಕ್ಷ ರಮಾನಂದ ನಾಯಕ, ಜಿಲ್ಲಾ ಸಂಚಾಲಕ ದೇವರಾಜ ಗೊಂಡ, ಭಟ್ಕಳದ ರಾಮಾ ಮೊಗೇರ, ಇನ್ನಿತರರು ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts