More

    ಶರಾವತಿ ಮುಳುಗಡೆ ಸಂತ್ರಸ್ತರ ಪರ ಕಾಂಗ್ರೆಸ್ ಹೋರಾಟ; ಆಯನೂರಿನಿಂದ ಶಿವಮೊಗ್ಗದ ತನಕ ಪಾದಯಾತ್ರೆ

    ಆಯನೂರು: ಶರಾವತಿ ಮುಳುಗಡೆ ಸಂತ್ರಸ್ತರ ಸಮಸ್ಯೆ ಪರಿಹರಿಸದ ಸರ್ಕಾರಕ್ಕೆ ಎಚ್ಚರಿಕೆ ನೀಡಲು ಹಾಗೂ ಮುಳುಗಡೆ ಜನರ ಪರವಾಗಿ ಪ್ರತಿಭಟನೆ ಹಮ್ಮಿಕೊಂಡಿದ್ದೇವೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಧ್ರುವನಾರಾಯಣ ಹೇಳಿದರು.
    ಸೋಮವಾರ ಕಾಂಗ್ರೆಸ್ ಪಕ್ಷದಿಂದ ಹಮ್ಮಿಕೊಂಡಿದ್ದ ಆಯನೂರಿನಿಂದ ಶಿವಮೊಗ್ಗದ ವರೆಗಿನ ಜನಾಕ್ರೋಶ ಪಾದಯಾತ್ರೆಯಲ್ಲಿ ಅವರು ಮಾತನಾಡಿದರು.
    ಡಿನೋಟಿಕೇಷನ್ ವಜಾ ಮಾಡಿರುವುದನ್ನು ಪ್ರಶ್ನಿಸಿ ಮೇಲ್ಮನವಿ ಸಲ್ಲಿಸಿ, ಉಳಿದವರ ಜತೆ ನಿಲ್ಲುವುದು ಕಾಂಗ್ರೆಸ್‌ನ ಹಕ್ಕೋತ್ತಾಯವಾಗಿದೆ. ವಿಶೇಷವಾಗಿ ಮಲೆನಾಡು ಭಾಗದ ವಾಣಿಜ್ಯ ಬೆಳೆಯಾದ ಅಡಕೆಗೆ ಎಲೆಚುಕ್ಕೆ ರೋಗ ಬಂದು ರೈತರು ಆತಂಕದಲ್ಲಿದ್ದಾರೆ. ಕೂಡಲೇ ರೋಗ ನಿವಾರಣೆಗೆ ಸೂಕ್ತ ಕ್ರಮಕೈಗೊಳ್ಳಬೇಕು ಎಂದು ಆಗ್ರಹಿಸಿದರು.
    ತೀರ್ಥಹಳ್ಳಿಯಲ್ಲಿ ಸಂಶೋಧನಾ ಕೇಂದ್ರ ಆರಂಭಿಸಲಾಗುವುದು ಎಂಧು ಕೇಂದ್ರ ಸಚಿವ ಅಮಿತ್ ಷಾ ಚುನಾವಣೆ ಸಂದರ್ಭದಲ್ಲಿ ಭರವಸೆ ನೀಡಿದ್ದರು. ಇದುವರೆಗೂ ಸಂಶೋಧನಾ ಕೇಂದ್ರದ ಬಗ್ಗೆ ಯಾವುದೇ ಪ್ರಸ್ತಾಪ ಇಲ್ಲ ಎಂದು ಟೀಕಿಸಿದರು.
    ತಮಟೆ ಬಾರಿಸಿ ಕಾಗೋಡು ಚಾಲನೆ: ಆಯನೂರಿನ ಎಪಿಎಂಸಿ ಆವರಣದಿಂದ ಹೋರಾಟ ಮಲೆನಾಡ ಜನಾಕ್ರೋಶ ಪಾದಯಾತ್ರೆಯಲ್ಲಿ ಸಾವಿರಾರು ಕಾಂಗ್ರೆಸ್ ಕಾರ್ಯಕರ್ತರು ಭಾಗವಹಿಸಿದ್ದರು. ಮಾಚಿ ಸಚಿವ ಕಾಗೋಡು ತಿಮ್ಮಪ್ಪ ತಮಟೆ ಬಾರಿಸುವ ಮೂಲಕ ಪಾದಯಾತ್ರೆಗೆ ಚಾಲನೆ ನೀಡಿದರು. ಜೆಸಿಬಿಗಳಿಂದ ಕಾರ್ಯಕರ್ತರ ಮೇಲೆ ಹೂವಿನ ಸುರಿಮಳೆ ಸುರಿಸಲಾಯಿತು. ಗ್ರಾಮದ ತುಂಬ ಕಾಂಗ್ರೆಸ್ ಮುಖಂಡರ ಪ್ಲೆಕ್ಸ್‌ಗಳು ರಾರಾಜಿಸಿದವು. ಸರ್ಕಾರದ ವಿರುದ್ಧ ಘೋಷಣೆಗಳು ಮೊಳಗಿದವು.
    ಮಾಜಿ ಶಾಸಕರಾದ ಮಧು ಬಂಗಾರಪ್ಪ, ಬೇಳೂರು ಗೋಪಾಲಕೃಷ್ಣ, ಎಂಎಲ್ಸಿ ಪ್ರಸನ್ನ ಕುಮಾರ್, ಕಾಂಗ್ರೆಸ್ ಜಿಲ್ಲಾಧ್ಯಕ್ಷ ಸುಂದರೇಶ್, ಪ್ರಮುಖರಾದ ಮಂಜುನಾಥಗೌಡ, ಕಲಗೋಡು ರತ್ನಾಕರ, ಡಾ. ಶ್ರೀನಿವಾಸ್ ಕರಿಯಣ್ಣ, ನಾರಾಯಣಸ್ವಾಮಿ ಪಾದಯಾತ್ರೆಯಲ್ಲಿ ಪಾಲ್ಗೊಂಡಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts