More

    ಶಾಂತಿಯುತ ಶೇ.೮೮ ಮತದಾನ

    ಕೊಡೇಕಲ್: ರಾಜನಕೋಳೂರ ಗ್ರಾಮ ಪಂಚಾಯಿತಿಯಲ್ಲಿ ತೆರವಾಗಿದ್ದ ಒಂದು ಸದಸ್ಯ ಸ್ಥಾನಕ್ಕೆ ಭಾನುವಾರ ಉಪ ಚುನಾವಣೆ ಮತದಾನ ಶಾಂತಿಯುತವಾಗಿ ನಡೆದಿದೆ.

    ವಲಯದಲ್ಲಿ ಮೂರು ದಿನಗಳಿಂದ ಸುರಿದ ಮಳೆಯಿಂದಾಗಿ ಕೃಷಿ ಚಟುವಟಿಕೆಗಳಲ್ಲಿ ತೊಡಗಿರುವ ಕಾರಣ ಬೆಳಗ್ಗೆಯೇ ಮತಗಟ್ಟೆಗೆ ಆಗಮಿಸಿದ ಮತದಾರರು ತಮ್ಮ ಹಕ್ಕು ಚಲಾಯಿಸಿದರು. ಅದರಲ್ಲೂ ಮಹಿಳೆಯರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿದ್ದರು. ೭೮೭ ಮತಗಳಲ್ಲಿ ೨೮೦ ಪುರುಷರು ಮತ್ತು ೨೯೯ ಮಹಿಳೆ ಸೇರಿ ೫೭೯ ಜನ ಮತ ಚಲಾಯಿಸಿದ್ದು, ಶೇ.೮೮ ಮತದಾನವಾಗಿದೆ ಎಂದು ಚುನಾವಣಾಧಿಕಾರಿ ಮಾಳಿಂಗರಾಯ ತಿಳಿಸಿದರು.

    ಮತ ಕೇಂದ್ರಕ್ಕೆ ಸಿಪಿಐ ಎಂ.ಬಿ.ಚಿಕ್ಕಣ್ಣನವರ, ಉಪ ತಹಸೀಲ್ದಾರ್ ಕಲ್ಲಪ್ಪ ಜಂಜಿಗಡ್ಡಿ, ಕಂದಾಯ ನಿರೀಕ್ಷಕ ಶಾಂತಗೌಡ ಭೇಟಿ ನೀಡಿದರು. ಪಿಎಸ್‌ಐ ಶ್ರೀಶೈಲ್ ಅಂಬಾಟೆ ಮತ್ತು ಸಿಬ್ಬಂದಿ ಸೂಕ್ತ ಬಂದೋಬಸ್ತ್ ಒದಗಿಸಿದ್ದರು. ಅಮರೇಗೌಡ ಪೊಲೀಸ್ ಪಾಟೀಲ್ ಹಾಗೂ ಎಂ.ಆರ್. ಪಾಟೀಲ್ ಕಣದಲ್ಲಿದ್ದು, ಬುಧವಾರ ಮತ ಎಣಿಕೆ ನಡೆಯಲಿದೆ.

    ಹಗರಟಗಿ ವರದಿ: ಹಗರಟಗಿ ಗ್ರಾಪಂನ ವಾರ್ಡ್ ೨ರ ಸದಸ್ಯ ಸ್ಥಾನಕ್ಕೆ ರಾಯಣ್ಣಗೌಡ ಮಾಲಿಪಾಟೀಲ್ ಮಾತ್ರ ನಾಮಪತ್ರ ಸಲ್ಲಿಸಿದ್ದರಿಂದ ಅವಿರೋಧ ಆಯ್ಕೆ ಖಚಿತವಾಗಿದ್ದು, ಅಧಿಕೃತ ಘೋಷಣೆ ಮಾತ್ರ ಬಾಕಿಯಿದೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts