More

    ಶಾಂತಿ ಸ್ಥಾಪನೆಗೆ ನಾಗರಿಕ ಸಹಕಾರ ಅಗತ್ಯ


    ಯಾದಗಿರಿ: ರಾಷ್ಟ್ರ ಮತ್ತು ಸಮಾಜ ಸೇವೆಗಾಗಿ ತಮ್ಮ ಪ್ರಾಣದ ಹಂಗನ್ನು ತೊರೆದು ಕೊನೆ ಉಸಿರಿನವರೆಗೂ ಹೋರಾಡಿ ಹುತಾತ್ಮರಾದ ಪೊಲೀಸ್, ಯೋಧರ ಹಾಗೂ ಅವರ ಕುಟುಂಬಗಳಿಗೆ ಕೃತಜ್ಞತೆ ಸಲ್ಲಿಸುವುದಾಗಿ ಜಿಲ್ಲಾಧಿಕಾರಿ ಡಾ.ಸುಶೀಲಾ ಬಿ., ಹೇಳಿದರು.

    ನಗರದ ಪೊಲೀಸ್ ಪರೇಡ್ ಮೈದಾನದಲ್ಲಿ ಶನಿವಾರ ಆಯೋಜಿಸಿದ್ದ ಪೊಲೀಸ್ ಹುತಾತ್ಮ ದಿನ ಕಾರ್ಯಕ್ರಮದಲ್ಲಿ ಹುತಾತ್ಮರ ಸ್ಮಾರಕಕ್ಕೆ ಪುಷ್ಪ ನಮನ ಸಲ್ಲಿಸಿ ಮಾತನಾಡಿ, ದೇಶದ ಗಡಿ ರಕ್ಷಣೆ ಹಾಗೂ ಆಂತರಿಕ ರಕ್ಷಣೆಯಲ್ಲಿ ಧೀರತನದಿಂದ ಹೋರಾಡಿ ಪ್ರಾಣವನ್ನು ಸಮಪರ್ಿಸಿದ ಪೊಲೀಸ್ರ ತ್ಯಾಗ ನಾಗರಿಕ ಸಮಾಜ ಮರೆಯಲು ಸಾಧ್ಯವಿಲ್ಲ. ಸಮಾಜದ ಶಾಂತಿ ಸ್ಥಾಪನೆಗೆ ನಿಮ್ಮಗಳ ಕೊಡುಗೆ ಅಪಾರವಾಗಿದೆ ಎಂದು ಬಣ್ಣಿಸಿದರು.

    ಪೊಲೀಸರು ಎಂಥ ಕಠಿಣ ಪ್ರಕರಣವನ್ನೂ ಭೇದಿಸುತ್ತಾರೆ. ಸಮಾಜದಲ್ಲಿ ಶಾಂತಿ ನೆಲೆಸಲು ಕಾರಣರಾಗಿರುವ ಪೊಲೀಸರನ್ನು ರಾಷ್ಟ್ರ ಲಾಂಛನದಲ್ಲಿರುವ ಕಣ್ಣಿಗೆ ಕಾಣಿಸದ ನಾಲ್ಕನೇ ಸಿಂಹಕ್ಕೆ ಹೋಲಿಸಲಾಗುತ್ತದೆ. ಕರ್ತವ್ಯ ಪಾಲನೆಯಲ್ಲಿ ಹುತಾತ್ಮರಾದ ಪೊಲೀಸರ ಆತ್ಮಕ್ಕೆ ಶಾಂತಿ ಸಿಗಲಿ ಮತ್ತು ಅವರ ಕುಟುಂಬದವರಿಗೆ ಆಯುಷ್ಯ, ಆರೋಗ್ಯ ನೀಡಲೆಂದು ಪ್ರಾಥರ್ಿಸಿದರು.

    ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜಿ.ಸಂಗೀತಾ ಮಾತನಾಡಿ, 1959ರ ಅ. 21ರಂದು ಚೀನಾ-ಭಾರತ ಗಡಿ ಭಾಗದ ಹಾಟ್ ಸ್ಟ್ರೀಗ್ ಪೋಸ್ಟ್ ಹತ್ತಿರ ಸಿಆರ್ಪಿಎಫ್ ಡಿಎಸ್ಪಿ ಕರಣಸಿಂಗ್ ನೇತೃತ್ವದಲ್ಲಿ ಪೊಲೀಸ್ ದಳವು ಪಹರೆ ಕರ್ತವ್ಯ ನಿರ್ವಹಿಸುತ್ತಿದ್ದಾಗ ಆಧುನಿಕ ಶಸ್ತ್ರಾಸ್ತ್ರ ಹೊಂದಿರುವ ಚೀನಾ ಸೈನಿಕರಿಂದ ಏಕಾಏಕಿ ದಾಳಿ ನಡೆಸಲಾಗುತ್ತದೆ. ಆ ಸಂದರ್ಭದಲ್ಲಿ ವೈರಿಗಳ ದಾಳಿಗೆ ವಿಚಲಿತರಾಗದೆ ತಮ್ಮ ಪ್ರಾಣದ ಹಂಗು ತೊರೆದು ಕೊನೆಯುಸಿರಿನವರೆಗೂ ಧೈರ್ಯದಿಂದ ಹೋರಾಡಿ ಪ್ರಾಣ ತೆತ್ತ 10 ಭಾರತೀಯ ಪೊಲೀಸ್ ಯೋಧರ ಬಲಿದಾನದ ಸ್ಮರಣೆ ಪ್ರತೀಕವಾಗಿ ಪ್ರತಿ ವರ್ಷ ಅ.21ರಂದು ದೇಶಾದ್ಯಂತ ಎಲ್ಲ ಜಿಲ್ಲಾ ಪೊಲೀಸ್ ಕೇಂದ್ರ ಸ್ಥಾನಗಳಲ್ಲಿಪೊಲೀಸ್ ಹುತಾತ್ಮರ ದಿನ ಆಚರಿಸಲಾಗುತ್ತದೆ ಎಂದು ವಿವರಿಸಿದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts