More

    ಶಾಲಾ ಅಂಗಳದಲ್ಲಿ ಮಕ್ಕಳ ಕಲರವ

    ಬೆಳಗಾವಿ: ಕೋವಿಡ್-19 ಆತಂಕದ ಮಧ್ಯೆಯೂ ಬೆಳಗಾವಿ ಶೈಕ್ಷಣಿಕ ಜಿಲ್ಲೆಯಲ್ಲಿ ಸೋಮವಾರದಿಂದ 6ರಿಂದ 8ನೇ ಭೌತಿಕ ತರಗತಿ ಆರಂಭಗೊಂಡಿದ್ದು, ಮೊದಲ ದಿನವೇ ಶಾಲಾ ಅಂಗಳದಲ್ಲಿ ಮಕ್ಕಳ ಕಲರವ ಕಂಡುಬಂತು.

    ತಳಿರು- ತೋರಣಗಳಿಂದ ಸಿಂಗಾರಗೊಂಡಿದ್ದ ಶಾಲೆಗಳಲ್ಲಿ ಹಬ್ಬದ ವಾತಾವಾರಣ ನಿರ್ಮಾಣವಾಗಿತ್ತು. ಶಿಕ್ಷಕರು ಹೂವು ನೀಡಿ ವಿದ್ಯಾರ್ಥಿಗಳಿಗೆ ಸ್ವಾಗತ ಕೋರಿದರು.

    ಬೆಳಗಾವಿ ಶೈಕ್ಷಣಿಕ ಜಿಲ್ಲೆಯ 487 ಪ್ರೌಢಶಾಲೆಗಳು, 141 ಕಾಲೇಜ್‌ಗಳಲ್ಲಿ ಎರಡು ವಾರಗಳ ಹಿಂದಷ್ಟೇ 9ರಿಂದ 12ನೇ ತರಗತಿವರೆಗಿನ ಭೌತಿಕ ತರಗತಿ ಆರಂಭಗೊಂಡಿದ್ದು, ವಿದ್ಯಾರ್ಥಿಗಳು ಉತ್ಸಾಹದಿಂದ ಶಾಲೆಗಳತ್ತ ಹೆಜ್ಜೆ ಹಾಕುತ್ತಿದ್ದಾರೆ. ಸದ್ಯ 1,272 ಹಿರಿಯ ಪ್ರಾಥಮಿಕ ಶಾಲೆಗಳಲ್ಲೂ 6ರಿಂದ 8ನೇ ಭೌತಿಕ ತರಗತಿ ಆರಂಭಿಸಿರುವುದು ಮಕ್ಕಳಲ್ಲಿ ಸಂತಸ ಮೂಡಿಸಿದೆ. ಶಾಲಾ ಆರಂಭದಲ್ಲಿ ಹೊಸ ಸ್ವರೂಪ ನಿರ್ಮಾಣವಾಗಿತ್ತು.

    ಸುರಕ್ಷತೆಗೆ ಕ್ರಮ

    ಸುರಕ್ಷತೆ ದೃಷ್ಟಿಯಿಂದ ಎಲ್ಲ ಶಾಲೆಗಳಲ್ಲೂ ಅಗತ್ಯ ಕ್ರಮ ಕೈಗೊಳ್ಳಲಾಗಿದ್ದು, ವಿದ್ಯಾರ್ಥಿಗಳನ್ನು ಥರ್ಮಲ್ ಸ್ಕ್ರೀನಿಂಗ್‌ಗೆ
    ಒಳಪಡಿಸಲಾಯಿತು. ಕೆಲ ಶಾಲೆಗಳಲ್ಲಿ ಮಕ್ಕಳಿಗೆ ಬಿಸಿ ನೀರು ಹಾಗೂ ಸ್ಯಾನಿಟೈಸರ್ ವ್ಯವಸ್ಥೆ ಮಾಡಲಾಗಿತ್ತು. ಎಲ್ಲ ಶಾಲೆಗಳಲ್ಲಿ ಕೋವಿಡ್-19 ನಿಯಂತ್ರಣ ಮಾರ್ಗಸೂಚಿ ಕಟ್ಟುನಿಟ್ಟಾಗಿ ಪಾಲಿಸಲಾಗುತ್ತಿದೆ. ಮೊದಲ ದಿನದಿಂದಲೇ ವಿದ್ಯಾರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಶಾಲೆಗೆ ಬರುತ್ತಿದ್ದು, ದೈಹಿಕ ಅಂತರ ಕಾಯ್ದುಕೊಂಡು ಭೌತಿಕ ತರಗತಿ ನಡೆಸುವಂತೆ ಶಿಕ್ಷಕರಿಗೆ ಸೂಚಿಸಲಾಗಿದೆ. ವಿದ್ಯಾರ್ಥಿಗಳು ಭಯ ಬಿಟ್ಟು ಶಾಲೆಗೆ ಬರಬೇಕು ಎಂದು ಬೆಳಗಾವಿ ಡಿಡಿಪಿಐ ಡಾ.ಆನಂದ ಪುಂಡಲೀಕ ತಿಳಿಸಿದ್ದಾರೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts