More

    ಶಾಲಾ, ಕಾಲೇಜು ಬಳಿ ತಂಬಾಕು ಉತ್ಪನ್ನಕ್ಕೆ ಕಡಿವಾಣ

    ಚಿತ್ರದುರ್ಗ: ಶಾಲಾ, ಕಾಲೇಜು ಬಳಿ ತಂಬಾಕು ಉತ್ಪನ್ನಗಳ ಮಾರಾಟಕ್ಕೆ ಕಡಿವಾಣ ಹಾಕುವಂತೆ ಎಡಿಸಿ ಬಿ.ಟಿ. ಕುಮಾರಸ್ವಾಮಿ ಅಧಿಕಾರಿಗಳಿಗೆ ಸೂಚಿಸಿದರು.
    ಡಿಸಿ ಕಚೇರಿಯಲ್ಲಿ ಬುಧವಾರ ಜಿಲ್ಲಾ ತಂಬಾಕು ನಿಯಂತ್ರಣ ಕೋಶದ ತ್ರೈಮಾಸಿಕ ಸಮನ್ವಯ ಸಮಿತಿ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದರು.
    ಶಾಲಾ, ಕಾಲೇಜುಗಳ ಬಳಿ ತಂಬಾಕು ಉತ್ಪನ್ನಗಳ ಮಾರಾಟ ಕಾನೂನಿನ ಉಲ್ಲಂಘನೆ ಆಗಿದೆ. ಸ್ಥಳೀಯ ಪೊಲೀಸರು, ಶಾಲಾ, ಕಾಲೇಜುಗಳ ಮುಖ್ಯಸ್ಥರು ಗಮನಹರಿಸಿ ಈ ಉತ್ಪನ್ನಗಳ ಮಾರಾಟಕ್ಕೆ ಕಡಿವಾಣ ಹಾಕಬೇಕಿದೆ ಎಂದರು.
    ಹದಿನೆಂಟು ವರ್ಷದ ಒಳಗಿನ ಮಕ್ಕಳಿಗೆ ತಂಬಾಕು ಉತ್ಪನ್ನಗಳ ಮಾರಾಟ ಮಾಡುವುದು ಶಿಕ್ಷಾರ್ಹ ಅಪರಾಧವಾಗಿದೆ. ವಿದ್ಯಾರ್ಥಿ ಗಳು ಈ ಉತ್ಪನ್ನಗಳನ್ನು ಬಳಸದಂತೆ ಹೆಚ್ಚು ಜಾಗೃತಿ ವಹಿಸಬೇಕು. ನಿಯಮಗಳನ್ನು ಮೀರಿ ಮಾರಾಟ ಮಾಡುವ ಅಂಗಡಿಗಳ ಮೇಲೆ ದಾಳಿ ನಡೆಸಿ ದಂಡ ವಿಧಿಸಬೇಕು. ತಂಬಾಕು ಉತ್ಪನ್ನಗಳ ಸೇವನೆಯಿಂದ ಉಂಟಾಗುವ ದುಷ್ಪರಿಣಾಮದ ಕುರಿತು ಜಾಗೃತಿ ಮೂಡಿಸಬೇಕಿದೆ ಎಂದರು.
    ಪ್ರಸಕ್ತ ತ್ರೈಮಾಸಿಕ ಅವಧಿಯಲ್ಲಿ ಶಾಲಾ ಕಾಲೇಜುಗಳಲ್ಲಿ 100 ಜಾಗೃತಿ ಕಾರ್ಯಕ್ರಮ ನಡೆಸಲಾಗಿದೆ. 60 ಶಾಲಾ, ಕಾಲೇಜುಗಳು ತಂಬಾಕು ಮುಕ್ತವೆಂದು ಘೋಷಿಸಲಾಗಿದೆ. 111 ದಾಳಿಗಳನ್ನು ನಡೆಸಲಾಗಿದೆ ಎಂದು ಜಿಲ್ಲಾ ತಂಬಾಕು ನಿಯಂತ್ರಣ ಅಧಿಕಾರಿ ಡಾ.ಚಂದ್ರಶೇಖರ್ ವಿ.ಕಂಬಾಳಿಮಠ ಸಭೆಯಲ್ಲಿ ತಿಳಿಸಿದರು.
    ಡಿಎಚ್‌ಒ ಡಾ.ವಿ.ಟಿ.ರೇಣುಪ್ರಸಾದ್, ಡಿಡಿಪಿಐ ಕೆ.ರವಿಶಂಕರ್‌ರೆಡ್ಡಿ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಉಪನಿರ್ದೇಶಕಿ ಭಾರತಿ ಆರ್.ಬಣಕಾರ್, ಜಿಲ್ಲಾ ಕುಷ್ಠರೋಗ ನಿಯಂತ್ರಣ ಅಧಿಕಾರಿ ಡಾ.ನಾಗರಾಜ, ಪೌರಾಯುಕ್ತೆ ಬಿ.ರೇಣುಕಾ, ತಂಬಾಕು ನಿಯಂತ್ರಣ ಕೋಶದ ಜಿಲ್ಲಾ ಸಲಹೆಗಾರ ವಿ.ಎಂ.ಪ್ರಭುದೇವ್ ಇತರರು ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts