More

    ಶಾಲಾ ಪ್ರಾರಂಭೋತ್ಸವಕ್ಕೆ ಜಿಲ್ಲಾಧಿಕಾರಿ ಚಾಲನೆ

    ಕುಶಾಲನಗರ: ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ವತಿಯಿಂದ ಬುಧವಾರ ಕುಶಾಲನಗರ ಸಮೀಪದ ಕೂಡುಮಂಗಳೂರು ಸರ್ಕಾರಿ ಪ್ರೌಢಶಾಲೆ ಹಾಗೂ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ಏರ್ಪಡಿಸಿದ್ದ ದಾಖಲಾತಿ ಆಂದೋಲನ ಮತ್ತು ಶಾಲಾ ಪ್ರಾರಂಭೋತ್ಸವಕ್ಕೆ ಜಿಲ್ಲಾಧಿಕಾರಿ ಡಾ ಬಿ.ಸಿ.ಸತೀಶ ಚಾಲನೆ ನೀಡಿದರು.


    ಕೂಡುಮಂಗಳೂರು ಸರ್ಕಾರಿ ಪ್ರೌಢಶಾಲೆಯಲ್ಲಿ ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ ಮಕ್ಕಳಿಗೆ ಸಿಹಿಯೊಂದಿಗೆ ಉಚಿತ ಪಠ್ಯ ಪುಸ್ತಕ ಹಾಗೂ ಬಟ್ಟೆ ವಿತರಿಸುವ ಮೂಲಕ ಶಾಲಾ ಪ್ರಾರಂಭೋತ್ಸವಕ್ಕೆ ಚಾಲನೆ ನೀಡಿದರು.


    ಸರ್ಕಾರಿ ಶಾಲೆಗಳಲ್ಲಿ ಮಕ್ಕಳಿಗೆ ವಿವಿಧ ಸೌಲಭ್ಯಗಳನ್ನು ಒದಗಿಸುವ ಮೂಲಕ ಗುಣಮಟ್ಟದ ಶಿಕ್ಷಣ ನೀಡಲಾಗುತ್ತಿದೆ. ವಿದ್ಯಾರ್ಥಿಗಳು ಉತ್ತಮ ಸಂಸ್ಕಾರ ಹಾಗೂ ಕಲಿಕೆಯೊಂದಿಗೆ ಪಾಲಕರಿಗೆ ಗೌರವ ಸಲ್ಲಿಸಬೇಕು. ಆಟ-ಪಾಠದೊಂದಿಗೆ ಶಿಕ್ಷಣ ಪಡೆದು ಉತ್ತಮ ಭವಿಷ್ಯ ರೂಪಿಸಿಕೊಳ್ಳಬೇಕು ಎಂದು ಅವರು ಹೇಳಿದರು.


    ಡಿಡಿಪಿಐ ಸಿ.ರಂಗಧಾಮಯ್ಯ ಮಾತನಾಡಿ, ಸರ್ಕಾರ ವಿದ್ಯಾರ್ಥಿಗಳ ಕಲಿಕೆಗೆ ಶಾಲಾ ಪ್ರಾರಂಭದಲ್ಲೇ ಉಚಿತ ಪಠ್ಯ ಪುಸ್ತಕ ಹಾಗೂ ಸಮವಸ್ತ್ರ ನೀಡುತ್ತಿದೆ. ಪಾಲಕರು ತಮ್ಮ ಮಕ್ಕಳನ್ನು ಶಾಲೆಗೆ ದಾಖಲಿಸಿ ಅವರಿಗೆ ಉತ್ತಮ ಶಿಕ್ಷಣ ಕೊಡಿಸಬೇಕು ಎಂದರು.


    ಸೋಮವಾರಪೇಟೆ ಬಿಇಒ ಕೆ.ವಿ.ಸುರೇಶ್ ಮಾತನಾಡಿ, ಸರ್ಕಾರಿ ಶಾಲೆಗಳಲ್ಲಿ ಗುಣಾತ್ಮಕ ಶಿಕ್ಷಣ ನೀಡಲಾಗುತ್ತಿದೆ. ಪ್ರತಿ ಮಗು ಶಿಕ್ಷಣದಿಂದ ವಂಚಿತವಾಗದಂತೆ ಸರ್ಕಾರ ಕಾಳಜಿ ವಹಿಸುತ್ತಿದೆ. ಪ್ರೌಢಶಾಲೆಯಲ್ಲಿ ಉತ್ತಮ ಶಿಕ್ಷಕರ ತಂಡವಿದ್ದು, ಶೈಕ್ಷಣಿಕ ಪ್ರಗತಿಗೆ ಶ್ರಮಿಸುತ್ತಿರುವುದಕ್ಕೆ ಶ್ಲಾಘನೆವ್ಯಕ್ತಪಡಿಸಿದರು.

    ಪ್ರೌಢಶಾಲೆ ಮುಖ್ಯ ಶಿಕ್ಷಕ ಟಿ.ಜಿ.ಪ್ರೇಮಕುಮಾರ್, ಕೂಡುಮಂಗಳೂರು ಗ್ರಾಪಂ ಅಧ್ಯಕ್ಷೆ ಇಂದಿರಾ ರಮೇಶ್, ಎಸ್‌ಡಿಎಂಸಿ ಅಧ್ಯಕ್ಷ ಎಸ್.ಎನ್.ಪುಟ್ಟಸ್ವಾಮಿ, ರಾಷ್ಟ್ರೀಯ ಮಾಧ್ಯಮಿಕ ಶಿಕ್ಷಣ ಅಭಿಯಾನ ಯೋಜನೆಯ ಉಪ ಯೋಜನಾ ಸಮನ್ವಯಾಧಿಕಾರಿ ಸೌಮ್ಯಾ, ವಿಷಯ ಪರಿವೀಕ್ಷಕಿ ಕೆ.ಆರ್.ಬಿಂದು, ಜಿಲ್ಲಾ ದೈಹಿಕ ಶಿಕ್ಷಣ ಶಿಕ್ಷಣಾಧಿಕಾರಿ ಡಾ.ಸದಾಶಿವಯ್ಯ ಎಸ್. ಪಲ್ಲೆದ್, ಸಿಆರ್‌ಪಿ ಕೆ.ಶಾಂತಕುಮಾರ್, ಎಸ್‌ಡಿಎಂಸಿ ಸದಸ್ಯರಾದ ಜವರಯ್ಯ, ನಾಗರಾಜ್, ರವಿಕುಮಾರ್, ಕೆ.ಎಸ್.ರಾಜಾಚಾರಿ, ತಹಸೀಲ್ದಾರ್ ಟಿ.ಎಂ.ಪ್ರಕಾಶ್, ಉಪ ತಹಸೀಲ್ದಾರ್ ಮಧುಸೂದನ್, ಪಿಡಿಒ ಎಂ.ಆರ್.ಸಂತೋಷ್, ಡಿಆರ್‌ಎಫ್‌ಒ ಭವ್ಯಾ, ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕಿ ಎಚ್.ಎಸ್.ಸುಜಾತಾ, ಶಿಕ್ಷಕರಾದ ಬಿ.ಎಸ್.ಅನ್ಸಿಲಾ ರೇಖಾ, ಎಂ.ಟಿ.ದಯಾನಂದ ಪ್ರಕಾಶ್, ಎಸ್‌ಡಿಎಂಸಿ ಅಧ್ಯಕ್ಷ ಪುಟ್ಟಸ್ವಾಮಿ ಇದ್ದರು.

    ಎತ್ತಿನ ಗಾಡಿಯಲ್ಲಿ ಮೆರವಣಿಗೆ
    ಶಾಲಾ ಪ್ರಾರಂಭೋತ್ಸವಕ್ಕೆ ಮುನ್ನ ಕೂಡ್ಲೂರು ಗ್ರಾಮದ ಮುಖ್ಯ ರಸ್ತೆಯಿಂದ ಗ್ರಾಮದ ಬೀದಿಗಳಲ್ಲಿ ಜಿಲ್ಲಾಧಿಕಾರಿ ಡಾ ಬಿ.ಸಿ.ಸತೀಶ ಮಕ್ಕಳೊಂದಿಗೆ ಎತ್ತಿನ ಗಾಡಿಯಲ್ಲಿ ಮೆರವಣಿಗೆ ಮೂಲಕ ಸರ್ಕಾರಿ ಪ್ರೌಢಶಾಲೆಗೆ ಆಗಮಿಸಿದರು. ಮಧ್ಯಾಹ್ನ ಬಿಸಿಯೂಟದೊಂದಿಗೆ ಮಕ್ಕಳಿಗೆ ಪಾಯಸ ವಿತರಿಸಲಾಯಿತು.
    ಮಕ್ಕಳೊಂದಿಗೆ ಸಂವಾದ: ಜಿಲ್ಲಾಧಿಕಾರಿ ಡಾ ಬಿ.ಸಿ.ಸತೀಶ ಅವರು ಶಾಲಾ ಮಕ್ಕಳೊಂದಿಗೆ ಸಂವಾದ ನಡೆಸಿದರು. ತಮ್ಮ ಬಾಲ್ಯದ ಶಾಲಾ ದಿನಗಳನ್ನು ಮೆಲುಕು ಹಾಕಿದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts