More

    ಶಾಲೆಗಳಿಗೆ ಸಂಗೀತ ಶಿಕ್ಷಕರನ್ನು ನೇಮಿಸಿ

    ರಾಯಚೂರು: ರಾಜ್ಯದಲ್ಲಿನ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ ಖಾಲಿಯಿರುವ ಸಂಗೀತ ಶಿಕ್ಷಕರ ಹುದ್ದೆಗಳಿಗೆ ನೇಮಕಾತಿ ಮಾಡುವಂತೆ ನವ ಕರ್ನಾಟಕ ಸಂಗೀತ ಪದವೀಧರರ ಸಂಘ ಒತ್ತಾಯಿಸಿದೆ.
    ಸಂಘದ ನಿಯೋಗ ಸ್ಥಳೀಯ ಜಿಲ್ಲಾಕಾರಿ ಕಚೇರಿ ಕೇಂದ್ರ ಸ್ಥಾನಿಕ ಅಕಾರಿ ಶ್ರೀನಿವಾಸಗೆ ಶುಕ್ರವಾರ ಮನವಿ ಸಲ್ಲಿಸಿ, ಸಂಗೀತ ಶಿಕ್ಷಣದ ಅವಿಭಾಜ್ಯ ಅಂಗವಾಗಿದ್ದು, ಸಂಗೀತ ಕಲಿಕೆ ಮಕ್ಕಳ ಸರ್ವತೋಮುಖ ಬೆಳವಣಿಗೆಗೆ ಸಹಾಯ ಮಾಡುತ್ತದೆ ಎಂದರು.
    ಶಿಕ್ಷಣ ಇಲಾಖೆಯಿಂದ 2006ರಲ್ಲಿ ಪ್ರಾಥಮಿಕ ಶಾಲೆಗಳಿಗೆ ಹಾಗೂ 2009ರಲ್ಲಿ ಪ್ರೌಢಶಾಲೆಗಳಿಗೆ ಸಂಗೀತ ಶಿಕ್ಷಕರ ನೇಮಕಾತಿ ನಡೆದಿದ್ದು, ನಂತರದಲ್ಲಿ ನೇಮಕಾತಿ ಪ್ರಕ್ರಿಯೆ ನಡೆಸಲಾಗಿಲ್ಲ. ಸಮಾಜ ಕಲ್ಯಾಣ ಇಲಾಖೆಯ ಮೊರಾರ್ಜಿ ದೇಸಾಯಿ ವಸತಿ ಶಾಲೆಗಳಿಗೆ 2011ರ ನಂತರ ನೇಮಕಾತಿ ನಡೆಸಲಾಗಿಲ್ಲ.
    ಸುಮಾರು 400ಕ್ಕೂ ಹೆಚ್ಚು ಸಂಗೀತ ಶಿಕ್ಷಕರ ಹುದ್ದೆಗಳು ಖಾಲಿಯಿದ್ದು, ಕಳೆದ 10 ವರ್ಷದಿಂದ ನೇಮಕಾತಿ ನಡೆಸುವಂತೆ ಹೋರಾಟ ನಡೆಸುತ್ತಾ ಬರಲಾಗುತ್ತಿದೆ. ಕೂಡಲೇ ಶಾಲೆಗಳಲ್ಲಿನ ಸಂಗೀತ ಶಿಕ್ಷಕರ ಹುದ್ದೆಗಳನ್ನು ಭರ್ತಿ ಮಾಡಬೇಕು ಎಂದು ಒತ್ತಾಯಿಸಿದರು.
    ನಿಯೋಗದಲ್ಲಿ ಸಂಘದ ಪದಾಕಾರಿಗಳಾದ ನರಸಿಂಹಲು, ಮಲ್ಲೇಶ, ರಾಘವೇಂದ್ರ, ಬ್ರಹ್ಮೇಂದ್ರ ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts