More

    ಶಾಲೆಗಳು ಅಂಕ ಗಳಿಕೆಗೆ ಒತ್ತು ನೀಡದಿರಲಿ

    ಶಿರಸಿ: ಬಹುಸಂಖ್ಯಾತ ಶಾಲೆಗಳು ಇಂದು ಅಂಕ ಗಳಿಕೆಗೆ ಮಾತ್ರ ಒತ್ತು ನೀಡುತ್ತಿವೆ. ಇದರಿಂದ ಸ್ವಸ್ಥ ಸಮಾಜ ನಿರ್ವಣಕ್ಕೆ ಧಕ್ಕೆಯಾಗುತ್ತಿದೆ ಎಂದು ಜಿಲ್ಲಾ ಸತ್ಯ ನ್ಯಾಯಾಧೀಶ ಶಾಂತವೀರ ಶಿವಪ್ಪ ಹೇಳಿದರು.

    ನಗರದ ಲಯನ್ಸ್ ಶಾಲೆಯಲ್ಲಿ ಸೋಮವಾರ ಆಯೋಜಿಸಿದ್ದ ಸಾಂಸ್ಕೃತಿಕ ಸಂಭ್ರಮ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

    ಶಾಲೆಗಳಿಗೆ ಪ್ರವೇಶವನ್ನು ಕೂಡ ಇಂದು ಅಧಿಕ ಅಂಕ ಪಡೆದ ವಿದ್ಯಾರ್ಥಿಗಳಿಗೆ ನೀಡಿ ಸಾಧಕರೆಂದು ಬೀಗುವ ಸಂಸ್ಥೆಗಳು ಹೆಚ್ಚಿವೆ. ಇಂಥ ಸಂದರ್ಭದಲ್ಲಿ ಪಠ್ಯ- ಪಠ್ಯೇತರ ಚಟುವಟಿಕೆಗಳಿಗೆ ಸಮಾನ ಅವಕಾಶ ನೀಡುವ ಶಿಕ್ಷಣ ಸಂಸ್ಥೆಗಳ ಅಗತ್ಯವಿದೆ ಎಂದರು. ಶಿಕ್ಷಕರಾದ ಸೀತಾ ಭಟ್ಟ, ಕೋಮಲಾ ಸಿರ್ಸಿಕರ್ ಹಾಗೂ ಚೇತನಾ ಪಾವಸ್ಕರ ಅವರಿಗೆ ನಗದು ಬಹುಮಾನ ನೀಡಿ ಸತ್ಕರಿಸಲಾಯಿತು. ಸಂಸ್ಥೆ ಅಧ್ಯಕ್ಷ ಎನ್.ವಿ.ಜಿ. ಭಟ್ಟ ಅಧ್ಯಕ್ಷತೆ ವಹಿಸಿದ್ದರು. ಪ್ರಮುಖ ಎಂ.ಐ. ಹೆಗಡೆ, ವಿನಯ ಹೆಗಡೆ, ತ್ರಿವಿಕ್ರಮ ಪಟವರ್ಧನ, ಶ್ಯಾಮಸುಂದರ ಭಟ್ಟ ಉಪಸ್ಥಿತರಿದ್ದರು. ಆಂಗ್ಲ ಮಾಧ್ಯಮ ಶಾಲೆ ಮುಖ್ಯಶಿಕ್ಷಕ ಮೋಹನ ಹೆಗಡೆ ವರದಿ ವಾಚಿಸಿದರು. ಶಿಕ್ಷಣ ಸಂಸ್ಥೆಯ ಉಪಾಧ್ಯಕ್ಷ ಪ್ರಭಾಕರ ಹೆಗಡೆ ಸ್ವಾಗತಿಸಿದರು. ಎಂ.ಎಂ. ಭಟ್ಟ ಕಾರೇಕೊಪ್ಪ ನಿರೂಪಿಸಿದರು. ಪ್ರಾಥಮಿಕ ಶಾಲೆ ಮುಖ್ಯಶಿಕ್ಷಕ ಗಣಪತಿ ಗೌಡ ವಂದಿಸಿದರು. ನಂತರ ಶಾಲೆಯ ಜಿಲ್ಲೆ ಹಾಗೂ ರಾಜ್ಯಮಟ್ಟದ ಪ್ರಶಸ್ತಿ ವಿಜೇತ ವಿದ್ಯಾರ್ಥಿಗಳು ಹಾಗೂ ಇತರ ಮಕ್ಕಳಿಂದ ವೈವಿಧ್ಯಮಯ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts