More

    ಶಾಲೆಗಳ ಅಭಿವೃದ್ಧಿಗೆ ಚಿಂತನೆ

    ಪಾಂಡವಪುರ: ಸರ್ಕಾರಿ ಶಾಲೆಗಳ ಸುಧಾರಣೆಗೆ ಹಲವು ಕಾರ್ಯಕ್ರಮ ರೂಪಿಸಲಾಗಿದ್ದು, ಶಿಕ್ಷಣ ಇಲಾಖೆ ಅಧಿಕಾರಿಗಳ ಜತೆ ಚರ್ಚಿಸಿ ಪ್ರಾಯೋಗಿಕವಾಗಿ ಒಂದು ಶಾಲೆಯನ್ನು ಅಭಿವೃದ್ಧಿಪಡಿಸಿ, ಬಳಿಕ ತಾಲೂಕಿನ ಎಲ್ಲ ಶಾಲೆೆಗಳಿಗೂ ಅಳವಡಿಸಿಕೊಳ್ಳಲು ಚಿಂತನೆ ನಡೆಸಲಾಗಿದೆ ಎಂದು ಶಾಸಕ ದರ್ಶನ್ ಪುಟ್ಟಣ್ಣಯ್ಯ ಹೇಳಿದರು.

    ಪಟ್ಟಣದ ಕನ್ನಡ ಸಾಹಿತ್ಯ ಪರಿಷತ್ ಭವನದಲ್ಲಿ ರಾಜ್ಯ ಪ್ರತಿಭಾ ಪರಿಷತ್ ಹಾಗೂ ಪ್ರಾಥಮಿಕ ಶಾಲೆ ಪದವೀಧರ ಶಿಕ್ಷಕರ ಸಂಘದಿಂದ ಭಾನುವಾರ ಆಯೋಜಿಸಿದ್ದ ಗುರು ಶ್ರೇಷ್ಠ ಪ್ರಶಸ್ತಿ ಸಮಾರಂಭದಲ್ಲಿ ಶಿಕ್ಷಕರಿಗೆ ಪ್ರಶಸ್ತಿ ಪ್ರದಾನ ಮಾಡಿ ಮಾತನಾಡಿದರು. ಒಂದು ಪೆನ್ನಿಗೆ ಒಂದು ಸಮಾಜವನ್ನು ಹಾಗೂ ಒಂದು ದೇಶವನ್ನು ಬದಲಾಯಿಸುವ ಶಕ್ತಿ ಇದೆ. ಇದನ್ನು ಅರ್ಥ ಮಾಡಿಕೊಂಡು ಶಿಕ್ಷಕರು ಮಕ್ಕಳಿಗೆ ಗುಣಾತ್ಮಕ ಶಿಕ್ಷಣ ನೀಡಿ ಅವರ ಭವಿಷ್ಯವನ್ನು ಉಜ್ವಲಗೊಳಿಸಬೇಕು ಎಂದು ಸಲಹೆ ನೀಡಿದರು

    ಇದೊಂದು ಅರ್ಥಪೂರ್ಣ ಕಾರ್ಯಕ್ರಮವಾಗಿದೆ. ನಾನು ಭಾಗಿಯಾಗಿದ್ದು ವೈಯಕ್ತಿಕವಾಗಿ ಬಹಳ ಸಂತೋಷ ಉಂಟು ಮಾಡಿದೆ. ಪ್ರಸಕ್ತ ವರ್ಗಾವಣೆಯಾದ ಹಾಗೂ ಹೊಸದಾಗಿ ನೇಮಕಗೊಂಡಿರುವ ಶಿಕ್ಷಕರನ್ನು ಒಂದು ಕಡೆ ಕರೆದು ಅವರ ಪರಿಚಯ ಹಾಗೂ ಅವರನ್ನು ಗೌರವಿಸುವ ಕೆಲಸ ಮಾಡಿದ ಎರಡು ಸಂಘಟನೆಯ ಪದಾಧಿಕಾರಿಗಳಿಗೆ ಧನ್ಯವಾದಗಳು ಎಂದು ಹೇಳಿದರು.
    ತಾಲೂಕಿಗೆ ಬಂದಿರುವ ಹೊಸ ಶಿಕ್ಷಕರನ್ನು ಹಾಗೂ ಗುರು ಶ್ರೇಷ್ಠ ಪ್ರಶಸ್ತಿ ಪಡೆದ ಶಿಕ್ಷಕರನ್ನು ಇದೇ ವೇಳೆ ಶಾಸಕರು ಅಭಿನಂದಿಸಿ ನಿಮ್ಮ ಜವಾಬ್ದಾರಿಯನ್ನು ಶ್ರದ್ಧೆ ಹಾಗೂ ಪ್ರಾಮಾಣಿಕತೆಯಿಂದ ನಿರ್ವಹಿಸಿ ಎಂದು ಸಲಹೆ ನೀಡಿದರು.

    ಜಿಪಂ ಸದಸ್ಯ ಎಚ್.ತ್ಯಾಗರಾಜು ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಶಾಲೆಗಳಲ್ಲಿ ಎಲೆಮರೆ ಕಾಯಿಯಂತೆ ಕರ್ತವ್ಯ ನಿರ್ವಹಿಸುತ್ತಿರುವ ಶಿಕ್ಷಕರನ್ನು ಗುರುತಿಸಿ ಅವರನ್ನು ಗೌರವಿಸುವ ಕೆಲಸ ಮಾಡಿರುವ ಸಂಘಟನೆಗಳಿಗೆ ಅಭಿನಂದನೆಗಳು. ನಮ್ಮ ಕರ್ತವ್ಯವನ್ನು ನಾವು ಪ್ರಾಮಾಣಿಕತೆ ಹಾಗೂ ಶ್ರದ್ಧೆಯಿಂದ ಮಾಡಿದರೆ ಫಲ ಖಂಡಿತ ಸಿಗುತ್ತದೆ ಎಂದು ತಿಳಿಸಿದರು.

    ಇದೇ ವೇಳೆ ತಮ್ಮ ತಂದೆ, ಮಾಜಿ ಶಾಸಕ ಡಿ.ಹಲಗೆಗೌಡರ ಹೆಸರಿನಲ್ಲಿ ವಿಶಿಷ್ಟ ಸೇವಾ ಪ್ರಶಸ್ತಿ ಪಡೆದಿರುವ ಪ್ರಭಾಮಣಿ ಅವರನ್ನು ಅಭಿನಂದಿಸಿದರು.
    ಕ್ಷೇತ್ರ ಶಿಕ್ಷಣಾಧಿಕಾರಿ ಬಿ.ಚಂದ್ರಶೇಖರ್ ಮಾತನಾಡಿ, ಮುಗ್ಧ ಮನಸ್ಸಿನ ಮಕ್ಕಳ ಭವಿಷ್ಯ ತರಗತಿ ಕೋಣೆಯಲ್ಲಿ ಉಜ್ವಲಗೊಳ್ಳಬೇಕಾದರೆ ಶಿಕ್ಷಕರು ಪ್ರಾಮಾಣಿಕತೆ ಮತ್ತು ಶ್ರದ್ಧೆಯಿಂದ ಕೆಲಸ ಮಾಡಬೇಕೆಂದು ತಿಳಿಸಿದರು.

    ಕ್ಷೇತ್ರ ಸಮನ್ವಯಾಧಿಕಾರಿ ಕೆ.ಎನ್.ಪ್ರಕಾಶ್, ಅಕ್ಷರ ದಾಸೋಹ ಯೋಜನಾಧಿಕಾರಿ ರಂಗಸ್ವಾಮಿ, ತಾಲೂಕು ಕಸಾಪ ಮಾಜಿ ಅಧ್ಯಕ್ಷ ಎನ್.ಚಲುವೆಗೌಡ, ಪ್ರಾಥಮಿಕ ಶಾಲಾ ಪದವೀಧರ ಶಿಕ್ಷಕರ ಸಂಘದ ಜಿಲ್ಲಾಧ್ಯಕ್ಷ ಎಂ.ಕೆ.ವಿಜಯಕುಮಾರ್, ಪ್ರತಿಭಾ ಪರಿಷತ್ ಜಿಲ್ಲಾಧ್ಯಕ್ಷ ಎಚ್.ಆರ್.ಸುರೇಂದ್ರಕುಮಾರ್, ತಾಲೂಕು ಅಧ್ಯಕ್ಷ ಸೋಮಶೇಖರ್, ಪದವೀಧರ ಶಿಕ್ಷಕರ ಸಂಘದ ತಾಲೂಕು ಅಧ್ಯಕ್ಷ ಡಿ.ಎಸ್.ವೆಂಕಟೇಶ್, ಪ್ರೌಢಶಾಲೆ ಸಹ ಶಿಕ್ಷಕರ ಸಂಘದ ಅಧ್ಯಕ್ಷ ಎಲ್.ಎಸ್.ಕೇಶವಮೂರ್ತಿ, ಬಡ್ತಿ ಮುಖ್ಯ ಶಿಕ್ಷಕರ ಸಂಘದ ಅಧ್ಯಕ್ಷೆ ಜಿ ಮಂಜುಳಾ, ಸಾವಿತ್ರಿಬಾಯಿ ಫುಲೆ ಸಂಘದ ಅಧ್ಯಕ್ಷೆ ಲತಾ, ಕೆ.ಯುವರಾಜ, ಹುಲಿ ಕೆಂಪೇಗೌಡ, ಎಂ.ಬಿ.ಕರುಣಕುಮಾರ್, ಶಂಭೂನಹಳ್ಳಿ ರವಿ, ಸದಾನಂದ, ಎನ್.ಮಹದೇವಪ್ಪ, ಹರೀಶ್, ಮನ್‌ಮುಲ್ ನಿರ್ದೇಶಕ ಕಾಡೇನಹಳ್ಳಿ ರಾಮಚಂದ್ರು ಮತ್ತಿತರರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts