More

    ಶಾಲೆ-ಆಸ್ಪತ್ರೆಗಳಿಗೆ ಸೌಕರ್ಯ ಒದಗಿಸಿ -ಸರ್ಕಾರಕ್ಕೆ ಆಮ್‌ಆದ್ಮಿ ಒತ್ತಾಯ 

    ದಾವಣಗೆರೆ: ಜಿಲ್ಲೆಯ ಸರ್ಕಾರಿ ಶಾಲೆಗಳು ಮತ್ತು ಆಸ್ಪತ್ರೆಗಳಿಗೆ ಕೊರತೆ ಇರುವ ಅಗತ್ಯ ಮೂಲ ಸೌಕರ್ಯಗಳನ್ನು ಸರ್ಕಾರ ಒದಗಿಸಬೇಕೆಂದು ಆಮ್‌ಆದ್ಮಿ ಪಕ್ಷದ ಜಿಲ್ಲಾಧ್ಯಕ್ಷ ಕೆ.ಎಸ್. ಶಿವಕುಮಾರಪ್ಪ ಒತ್ತಾಯಿಸಿದರು.
    ಜಿಲ್ಲೆಯ 693 ಸರ್ಕಾರಿ ಕಿ.ಪ್ರಾ. ಶಾಲೆಗಳು, 702 ಸರ್ಕಾರಿ ಹಿ. ಪ್ರಾ. ಶಾಲೆಗಳು, 99 ಖಾಸಗಿ ಹಾಗೂ ಸರ್ಕಾರಿ ಕಾಲೇಜುಗಳು ಹಾಗೂ ಇತರೆ ವಿದ್ಯಾಸಂಸ್ಥೆಗಳಲ್ಲಿ ಕೊಠಡಿಗಳ ಕೊರತೆ ಇದೆ. ಕೆಲವೆಡೆ ಮೇಲ್ಛಾವಣಿ ಸೋರುತ್ತಿವೆ. ಕೆಲವೆಡೆ ಮರದ ಕೆಳಗೆ ಶಾಲಾ ತರಗತಿಗಳನ್ನು ನಡೆಸಲಾಗುತ್ತಿದೆ. ಜಿಲ್ಲಾ ಉಸ್ತುವಾರಿ ಸಚಿವರು ಕೊರತೆ ನೀಗಿಸುವತ್ತ ಗಮನ ಹರಿಸಬೇಕು ಎಂದು ಭಾನುವಾರ ಸುದ್ದಿಗೋಷ್ಠಿಯಲ್ಲಿ ಆಗ್ರಹಿಸಿದರು.
    ಸರ್ಕಾರಿ ಶಾಲೆಗಳಲ್ಲಿ ಬಡ, ಮಧ್ಯಮ ವರ್ಗದ ಮಕ್ಕಳು ಓದುತ್ತಿದ್ದಾರೆ. ಅವರಿಗೆ ಮೂಲ ಸೌಲಭ್ಯ, ಉತ್ತಮ ಶಿಕ್ಷಣ ಕೊಡುವುದು ಸರ್ಕಾರದ ಕರ್ತವ್ಯವಾಗಿದೆ. ಉತ್ತಮ ಕಟ್ಟಡ, ಕೊಠಡಿ, ಶೌಚಗೃಹ, ಆಟದ ಮೈದಾನ, ಪ್ರಯೋಗಾಲಯ, ಗ್ರಂಥಾಲಯ ಶಿಕ್ಷಕರು, ವಿದ್ಯುತ್, ನೀರು ಮೊದಲಾದ ಸೌಕರ್ಯ ಒದಗಿಸಬೇಕು ಎಂದರು.
    ದಾವಣಗೆರೆ ದಕ್ಷಿಣ ಕ್ಷೇತ್ರದ ಶಾಸಕರು ಒಂದರೆಡು ಸರ್ಕಾರಿ ಶಾಲೆಗಳಲ್ಲಿ ಮೂಲ ಸೌಲಭ್ಯ ಒದಗಿಸುವ ಮೂಲಕ ಮಾದರಿ ಶಾಲೆಗಳನ್ನಾಗಿ ನಿರ್ಮಾಣ ಮಾಡಬೇಕು ಎಂದು ಒತ್ತಾಯಿಸಿದರು.
    ಹರಿಹರ ತಾಲೂಕು ಅಧ್ಯಕ್ಷ ಜಿ.ಎಚ್.ಬಸವರಾಜ್ ಮಾತನಾಡಿ, ಜಿಲ್ಲೆಯ ಸರ್ಕಾರಿ ಆಸ್ಪತ್ರೆಗಳಲ್ಲೂ ಅಗತ್ಯತೆಗಳನ್ನು ಪೂರೈಸಲು ಜನಪ್ರತಿನಿಧಿಗಳು, ಅಧಿಕಾರಿಗಳು ಮುಂದಾಗಲಿ ಎಂದರು.
    ಜಿಲ್ಲಾ ಸಂಘಟನಾ ಕಾರ್ಯದರ್ಶಿ ಗಣೇಶ್ ಕೆ.ದುರ್ಗದ, ಮಹಮ್ಮದ್ ಯೂಸುಫ್, ಬಿ.ಮಲ್ಲೇಶ್ ಸುದ್ದಿಗೋಷ್ಠಿಯಲ್ಲಿದ್ದರು.
    …….

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts