More

    ಶಾಸಕ ಡಾ.ಮಂತರ್ ಗೌಡ ಭರವಸೆ

    • ಕೊಡಗು : ಕ್ರೀಡೆಗಳ ಮೂಲಕ ಮನಸ್ಸುಗಳು ಒಂದಾಗಲು ಸಾಧ್ಯ ಎಂದು ಮಡಿಕೇರಿ ಶಾಸಕ ಡಾ. ಮಂತರ್‌ಗೌಡ ಹೇಳಿದರು.
    • ಕುಶಾಲನಗರದ ಗುಂಡೂರಾವ್ ಬಡಾವಣೆಯ ಜಾತ್ರಾ ಮೈದಾನದಲ್ಲಿ ಅಕುಲ್ ಟೂರಿಸಂ ವತಿಯಿಂದ ನಡೆಯುತ್ತಿರುವ ಮೊದಲನೇ ವರ್ಷದ ಕೂರ್ಗ್ ಕ್ರಿಕೆಟ್ ಟೂರ್ನಮೆಂಟ್ ವೀಕ್ಷಣೆ ಸಂದರ್ಭ ಭಾನುವಾರ ಮಾತನಾಡಿದರು.
    • ದೇಹ ಮತ್ತು ಮನಸ್ಸಿನ ಆರೋಗ್ಯಕ್ಕೆ ಕ್ರೀಡೆ ಸಹಕಾರಿಯಾಗಿದೆ. ಹಾಕಿ ಕ್ರೀಡೆಗೆ ಕೊಡಗು ಪ್ರಸಿದ್ಧವಾಗಿದ್ದು, ಎಲ್ಲ ತಾಲೂಕುಗಳಲ್ಲೂ ಸುಸಜ್ಜಿತ ಕ್ರೀಡಾಂಗಣವಿದೆ. ನೂತನ ತಾಲೂಕು ಕೇಂದ್ರ ಕುಶಾಲನಗರದಲ್ಲಿ ಒಳಾಂಗಣ ಕ್ರೀಡಾಂಗಣ ಸೇರಿ ಹೈಟೆಕ್ ಸ್ಟೇಡಿಯಂ ವ್ಯವಸ್ಥೆ ಕಲ್ಪಿಸಲಾಗುವುದು ಎಂದರು.
    • ಈಚೆಗೆ ನಡೆದ 17ರ ವಯೋಮಾನದ ಬಾಲಕಿಯರ ರಾಷ್ಟ್ರಮಟ್ಟದ ಹಾಕಿ ಪಂದ್ಯಾವಳಿಯಲ್ಲಿ ಕರ್ನಾಟಕ ತಂಡ ಉತ್ತಮ ಆಟ ಪ್ರದರ್ಶಿಸಿದೆ. ಇನ್ನೂ ಹೆಚ್ಚಿನ ಪ್ರೋತ್ಸಾಹ ಅಗತ್ಯವಿದೆ ಎಂದು ಅಭಿಪ್ರಾಯಪಟ್ಟರು.
    • ಮುಖ್ಯಮಂತ್ರಿ ಆದ ನಂತರ ಸಿದ್ದರಾಮಯ್ಯ ಅವರು ಜ.25ರಂದು ಪ್ರಥಮ ಬಾರಿಗೆ ಕೊಡಗಿಗೆ ಬರುತ್ತಿದ್ದಾರೆ. ಮಡಿಕೇರಿ ಮತ್ತು ವಿರಾಜಪೇಟೆಯಲ್ಲಿ ಕಾರ್ಯಕ್ರಮ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಅಧಿಕಾರಿಗಳು ಸಿದ್ಧತೆ ನಡೆಸುತ್ತಿದ್ದಾರೆ. ಕಾರ್ಯಕರ್ತರು ಮತ್ತು ಸರ್ಕಾರದ ಗ್ಯಾರಂಟಿ ಯೋಜನೆಗಳ ಫಲಾನುಭವಿಗಳನ್ನು ಹೆಚ್ಚಿನ ಸಂಖ್ಯೆಯಲ್ಲಿ ಸೇರಿಸಲಾಗುವುದು ಎಂದು ಹೇಳಿದರು.
    • ಅಕುಲ್ ಟೂರಿಸಂನ ಅಕುಲ್, ಪುರಸಭೆ ಸದಸ್ಯ ಪ್ರಮೋದ್ ಮುತ್ತಪ್ಪ, ಶೇಕ್ ಕಲೀಮುಲ್ಲ, ಗ್ರಾಮ ಪಂಚಾಯಿತಿ ಸದಸ್ಯ ಜಗದೀಶ್ ಮತ್ತಿತರರು ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts