More

    ಶಿಕ್ಷಕರನ್ನು ಗೌರವದಿಂದ ಕಾಣಿ

    ನರಗುಂದ: ದೇಶದ ಸರ್ವಾಂಗೀಣ ಅಭಿವೃದ್ಧಿ ಶಿಕ್ಷಕರ ಕೈಯಲ್ಲಿದೆ. ನಾಲ್ಕು ಗೋಡೆಗಳ ಮಧ್ಯೆ ಶಿಕ್ಷಕರು ವಿದ್ಯಾರ್ಥಿಗಳಿಗೆ ಬೋಧಿಸಿದ ವಿಷಯ ದೇಶದ ಭವಿಷ್ಯವನ್ನು ರೂಪಿಸುತ್ತದೆ. ಪ್ರಪಂಚವನ್ನೇ ಅರಿಯದ ಮಕ್ಕಳಿಗೆ ಜ್ಞಾನ ತಿಳಿಸುವ ಶಿಕ್ಷಕರನ್ನು ಪ್ರತಿಯೊಬ್ಬರೂ ಗೌರವದಿಂದ ಕಾಣುವಂತಾಗಬೇಕು ಎಂದು ಶಾಂತಲಿಂಗ ಶ್ರೀಗಳು ಹೇಳಿದರು.

    ತಾಲೂಕಿನ ಭೈರನಹಟ್ಟಿ ದೊರೆಸ್ವಾಮಿ ವಿರಕ್ತಮಠದಲ್ಲಿ ಕನ್ನಡ ಸಾಹಿತ್ಯ ಮತ್ತು ಸಾಂಸ್ಕೃತಿಕ ವೇದಿಕೆ ಆಶ್ರಯದಲ್ಲಿ ಹಮ್ಮಿಕೊಂಡಿದ್ದ ಡಾ. ಸರ್ವಪಲ್ಲಿ ರಾಧಾಕೃಷ್ಣ ಅವರ ಜಯಂತಿ ಪ್ರಯುಕ್ತ ಸಾಧಕ ಶಿಕ್ಷಕರಿಗೆ ಸನ್ಮಾನಿಸಿ ಅವರು ಮಾತನಾಡಿದರು. ಶಿಕ್ಷಕರಾದವರು ಉದ್ದೇಶಿತ ವಿಷಯದ ಬಗ್ಗೆ ಆಳವಾದ ಅಧ್ಯಯನ ಮತ್ತು ಚಿಂತನ-ಮಂಥನ ಮಾಡಬೇಕು. ವಿದ್ಯಾರ್ಥಿಗಳ ಮೇಲೆ ಕೆಟ್ಟ ಪರಿಣಾಮ ಬೀರದಂತೆ ಎಚ್ಚರಿಕೆಯಿಂದ ಪರಿಣಾಮಕಾರಿಯಾಗಿ ಬೋಧನೆ ಮಾಡಬೇಕು ಎಂದರು.

    ಪ್ರಭಾರ ಕ್ಷೇತ್ರ ಶಿಕ್ಷಣಾಧಿಕಾರಿ ಬಿ.ಎಫ್. ಮಜ್ಜಗಿ ಮಾತನಾಡಿ, ‘ಗುರು ಎಂದರೆ ವ್ಯಕ್ತಿಯಲ್ಲ ಅದೊಂದು ಅದ್ಭುತ ಶಕ್ತಿ. ಅಜ್ಞಾನದ ಕತ್ತಲೆಯನ್ನು ಕಳೆದು ಸುಜ್ಞಾನದೆಡೆಗೆ ಕರೆದುಕೊಂಡು ಹೋಗುವ ಶಕ್ತಿ ಗುರುವಿಗೆ ಇದೆ. ಅಂತಹ ಪವಿತ್ರ ವೃತ್ತಿಯಲ್ಲಿರುವ ಶಿಕ್ಷಕರು ಅತ್ಯಂತ ಜವಾಬ್ದಾರಿಯಿಂದ ತಮ್ಮ ಕರ್ತವ್ಯವನ್ನು ನಿರ್ವಹಿಸಬೇಕು’ ಎಂದರು.

    ಎಸ್.ಎಸ್. ಉಳ್ಳೇಗಡ್ಡಿ ಮಾತನಾಡಿದರು. ಜಿಲ್ಲಾ ಉತ್ತಮ ಶಿಕ್ಷಕ ಪ್ರಶಸ್ತಿಗೆ ಭಾಜನರಾದ ತಾಲೂಕಿನ ಶಿವಾನಂದ ಮಣ್ಣೂರಮಠ, ಜಗದೀಶ ಬೆಲ್ಲದ, ಎನ್.ಎ. ಗುದಗಾಪೂರ, ಕಲಾಶ್ರೀ ಹಾದಿಮನಿ, ಮುಖ್ಯ ಶಿಕ್ಷಕರಾಗಿ ಬಡ್ತಿ ಹೊಂದಿರುವ ಎಂ.ಡಿ. ಮಾದರ ಹಾಗೂ ನಿವೃತ್ತ ಶಿಕ್ಷಕರಾದ ವೀರಪ್ಪ ನರಗುಂದ, ಪುಂಡಲಿಕ ಸೋಲಾಪುರಿ, ಸುಕನ್ಯಾ ಪಾರ್ವತಿ, ಮಾರುತಿ ಹೊಸಮನಿ, ಅನಸೂಯಾ ಗಣಿ, ನಿಜಲಿಂಗನಗೌಡ ಪಾಟೀಲ ಅವರನ್ನು ಶ್ರೀಮಠದಿಂದ ಸತ್ಕರಿಸಲಾಯಿತು.

    ಬಿ.ಎಚ್. ಕ್ಯಾರಕೊಪ್ಪ, ಅಮರೇಶ ತೆಗ್ಗಿನಮನಿ, ವಿನೋದಾ ತಾರಕೇರಿ ಉಪಸ್ಥಿತರಿದ್ದರು. ಆರ್.ಬಿ. ಚಿನಿವಾಲರ, ಮಹಾಂತೇಶ ಹಿರೇಮಠ ನಿರ್ವಹಿಸಿದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts