More

    ಶಿಕ್ಷಕರ ಕ್ರೀಡಾಕೂಟ, ಸಾಂಸ್ಕೃತಿಕ ಸ್ಪರ್ಧೆ

    ಗೋಣಿಕೊಪ್ಪ: ವಿರಾಜಪೇಟೆ ತಾಲೂಕು ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ವತಿಯಿಂದ ಗೋಣಿಕೊಪ್ಪ ಅನುದಾನಿತ ಪ್ರೌಢಶಾಲಾ ಮೈದಾನದಲ್ಲಿ
    ಶನಿವಾರ ತಾಲೂಕು ಮಟ್ಟದ ಸರ್ಕಾರಿ, ಅನುದಾನಿತ, ಖಾಸಗಿ ಪ್ರಾಥಮಿಕ ಮತ್ತು ಪ್ರೌಢಶಾಲಾ ಕ್ರೀಡಾಕೂಟ ಮತ್ತು ಸಾಂಸ್ಕೃತಿಕ ಸ್ಪರ್ಧೆ ನಡೆಯಿತು.


    ವಾಲಿಬಾಲ್, ಕಬಡ್ಡಿ, ಹಗ್ಗಜಗ್ಗಾಟ, ಶಾಟ್‌ಪುಟ್, ಓಟ, ಥ್ರೋಬಾಲ್, ಪಾಸಿಂಗ್ ಬಾಲ್, ಡಿಸ್ಕಸ್ ಥ್ರೋ, ಸಾಂಸ್ಕೃತಿಕ ಸ್ಪರ್ಧೆ, ರಸ ಪ್ರಶ್ನೆ, ಅಭಿನಯ ಗೀತೆ, ಭಾವಗೀತೆ, ನೆನಪಿನ ಶಕ್ತಿ ಆಟಗಳಲ್ಲಿ 400ಕ್ಕೂ ಹೆಚ್ಚು ಶಿಕ್ಷಕರು ಪಾಲ್ಗೊಂಡು ಸಂಭ್ರಮಿಸಿದರು.


    ಶಿಕ್ಷಣ ಇಲಾಖೆ ನಿವೃತ್ತ ಉಪನಿರ್ದೇಶಕರಾದ ಸಿ.ಕೆ.ಭಾಗ್ಯಲಕ್ಷ್ಮೀ ಮಾತನಾಡಿ, ವಿದ್ಯಾರ್ಥಿಗಳ ಸರ್ವೋತೋಮುಖ ಅಭಿವೃದ್ದಿಗೆ ಶ್ರಮಿಸುವ ಶಿಕ್ಷಕರ ಬೆಳವಣಿಗೆಗೆ ಕ್ರೀಡೆ ಸಹಕಾರಿ. ಶಿಕ್ಷಕರಿಂದ ನ್ಯಾಯ ದೊರೆಯುವ ವಿಶ್ವಾಸ ಸಮಾಜಕ್ಕಿದೆ. ಇದನ್ನು ನಾವು ಉಳಿಸಿಕೊಳ್ಳಬೇಕಿದೆ ಎಂದರು.


    ಶಿಕ್ಷಣ ಇಲಾಖೆ ನಿವೃತ್ತ ಉಪ ನಿರ್ದೇಶಕ ಪೆರಿಗ್ರಿನ್ ಮಚಾಡೋ, ವಿರಾಜಪೇಟೆ ಕ್ಷೇತ್ರ ಶಿಕ್ಷಣಾಧಿಕಾರಿ ಶ್ರೀಶೈಲ ಬೀಳಗಿ ಮಾತನಾಡಿದರು. ಥ್ರೋಬಾಲ್ ಆಟವಾಡುವ ಮೂಲಕ ವಿರಾಜಪೇಟೆ ಕ್ಷೇತ್ರ ಸಂಪನ್ಮೂಲ ಸಮನ್ವಯ ಅಧಿಕಾರಿ ವನಜಾಕ್ಷಿ ಕಾರ್ಯಕ್ರಮ ಉದ್ಘಾಟಿಸಿದರು.


    ತಾಲೂಕು ಪ್ರಾಥಮಿಕ ಶಿಕ್ಷಕರ ಸಂಘದ ಅಧ್ಯಕ್ಷ ಈ.ಸುರೇಂದ್ರ, ಪ್ರೌಢಶಾಲಾ ಶಿಕ್ಷಕರ ಸಂಘದ ತಾಲೂಕು ಅಧ್ಯಕ್ಷ ಬಯವಂಡ ಉತ್ತಪ್ಪ, ದೈಹಿಕ ಶಿಕ್ಷಕರ ಸಂಘದ ಅಧ್ಯಕ್ಷ ಕಾಡ್ಯಮಾಡ ಸುಬ್ಬಯ್ಯ, ಅನುದಾನ ರಹಿತ ಶಾಲೆಗಳ ಸಂಘದ ಜಿಲ್ಲಾ ಕಾರ್ಯದರ್ಶಿ ಕೋಟ್ರಂಗಡ ತಿಮ್ಮಯ್ಯ, ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಗುರುರಾಜ್, ಮುಖ್ಯ ಶಿಕ್ಷಕ ರತೀಶ್‌ರೈ, ಕೈಕೇರಿ ಸರ್ಕಾರಿ ಪ್ರಾಥಮಿಕ ಶಾಲೆ ಮುಖ್ಯ ಶಿಕ್ಷಕಿ ಜಯಂತಿ, ತಾಲೂಕು ಪರಿವೀಕ್ಷಕಿ ಗಾಯಿತ್ರಿ, ನಿವೃತ್ತ ಶಿಕ್ಷಕಿ ಜಯಶ್ರೀ, ಸುಶೀಲ ಮತ್ತಿತರರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts