More

    ಶಿಕ್ಷಕರ ದಿನ ಸರಳ ಆಚರಣೆಗೆ ನಿರ್ಧಾರ

    ಲಕ್ಷ್ಮೇಶ್ವರ: ಕೋವಿಡ್-19 ಹಿನ್ನೆಲೆಯಲ್ಲಿ ಈ ವರ್ಷ ಶಿಕ್ಷಕರ ದಿನಾಚರಣೆಯನ್ನು ಸರ್ಕಾರದ ಮಾರ್ಗಸೂಚಿಯಂತೆ ಸರಳವಾಗಿ, ಅರ್ಥಪೂರ್ಣವಾಗಿ ಆಚರಿಸುವ ಮೂಲಕ ಗುರುವೃಂದಕ್ಕೆ ಗೌರವ ಸಲ್ಲಿಸೋಣ ಎಂದು ಶಾಸಕ ರಾಮಣ್ಣ ಲಮಾಣಿ ಹೇಳಿದರು.

    ಪಟ್ಟಣದ ತಾಪಂ ಸಾಮರ್ಥ್ಯಸೌಧದ ಸಭಾಂಗಣದಲ್ಲಿ ಶಿಕ್ಷಕರ ದಿನಾಚರಣೆ ಪ್ರಯುಕ್ತ ನಡೆದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ, ‘ತಾಲೂಕು ಮಟ್ಟದಲ್ಲಿ ಆಯ್ದ 50 ಮಂದಿ ಆಹ್ವಾನಿತರನ್ನೊಳಗೊಂಡು ಕೇವಲ 41 ನಿಮಿಷಗಳ ಸಂಕ್ಷಿಪ್ತ ಕಾರ್ಯಕ್ರಮ ನಡೆಸಬೇಕು. ಕರೊನಾ ಹಿನ್ನೆಲೆಯಲ್ಲಿ ಇರುವ ನಿಬಂಧನೆಗಳನ್ನು ಎಲ್ಲರೂ ಕಟ್ಟುನಿಟ್ಟಾಗಿ ಅನುಸರಿಸುವ ಮೂಲಕ ಎಲ್ಲರ ಆರೋಗ್ಯ ಕಾಪಾಡಿಕೊಳ್ಳಬೇಕು’ ಎಂದರು.

    ಕ್ಷೇತ್ರ ಶಿಕ್ಷಣಾಧಿಕಾರಿ ಆರ್.ಎಸ್. ಬುರಡಿ, ತಾ.ಪಂ. ಕಾರ್ಯ ನಿರ್ವಹಣಾಧಿಕಾರಿ ಆರ್.ವೈ. ಗುರಿಕಾರ ಮಾತನಾಡಿ, ಸರ್ಕಾರ ನೀಡಿರುವ ಮಾರ್ಗಸೂಚಿಗಳನ್ನು ಪಾಲಿಸುವ ಮೂಲಕ ಸರಳವಾಗಿ ಕಾರ್ಯಕ್ರಮ ನಡೆಸಲಾಗುವುದು. ಶಾಸಕರು, ತಾಪಂ ಅಧ್ಯಕ್ಷರು, ಕಾರ್ಯ ನಿರ್ವಹಣಾಧಿಕಾರಿ, ಕ್ಷೇತ್ರ ಶಿಕ್ಷಣಾಧಿಕಾರಿ, ತಹಸೀಲ್ದಾರರು ಮಾತ್ರ ವೇದಿಕೆಯಲ್ಲಿರುವರು. ತಾಲೂಕು ಮಟ್ಟದ ಅಧಿಕಾರಿಗಳು ಸೇರಿ ಒಟ್ಟು 50 ಜನರಿಗೆ ಮಾತ್ರ ಆಹ್ವಾನ ನೀಡಲಾಗುವುದು ಎಂದರು. ತಾಪಂ ಅಧ್ಯಕ್ಷ ಪರಶುರಾಮ ಇಮ್ಮಡಿ, ಉಪಾಧ್ಯಕ್ಷೆ ಹುಸೇನಭಿ ಅತ್ತಿಗೇರಿ, ಎಪಿಎಂಸಿ ಅಧ್ಯಕ್ಷ ನೀಲಪ್ಪ ಹತ್ತಿ, ತಹಸೀಲ್ದಾರ್ ಭ್ರಮರಾಂಬ ಗುಬ್ಬಿಶೆಟ್ಟಿ, ಪುರಸಭೆ ಮುಖ್ಯಾಧಿಕಾರಿ ಶಂಕರ ಹುಲ್ಲಮ್ಮನವರ, ಸಮನ್ವಯಾಧಿಕಾರಿ ವೈ.ಎಚ್. ನದಾಫ್, ನೌಕರರ ಸಂಘದ ತಾಲೂಕು ಅಧ್ಯಕ್ಷ ಡಿ.ಎಚ್. ಪಾಟೀಲ, ಶಿಕ್ಷಕರ ಸಂಘದ ಜಿಲ್ಲಾ ಉಪಾಧ್ಯಕ್ಷ ಬಿ.ಎಸ್. ಹರ್ಲಾಪೂರ, ಸಿಆರ್​ಸಿಗಳಾದ ಸತೀಶ ಬೋಮಲೆ, ಬಿ.ಆರ್.ಪಿಗಳಾದ ಎನ್.ಎನ್. ಶಿಗ್ಲಿ, ಬಿ.ಎಂ. ಯರಗುಪ್ಪಿ, ಎಂ.ಎನ್. ಭರಮನಗೌಡ್ರ ಇತರರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts