More

    ಶಿಕ್ಷಕರ ಶ್ರಮದಿಂದ ಮಕ್ಕಳ ಶೈಕ್ಷಣಿಕ ಅಭಿವೃದ್ಧಿ

    ರಾವಂದೂರು: ಶಿಕ್ಷಕರು ಸಂಪೂರ್ಣವಾಗಿ ತಮ್ಮ ಕಾರ್ಯಚಟುವಟಿಕೆಯಲ್ಲಿ ತೊಡಗಿಸಿಕೊಂಡಾಗ ಮಾತ್ರ ಮಕ್ಕಳ ಶೈಕ್ಷಣಿಕ ಅಭಿವೃದ್ಧಿ ಸಾಧ್ಯ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಬಸವರಾಜು ತಿಳಿಸಿದರು.


    ಪಿರಿಯಾಪಟ್ಟಣ ತಾಲೂಕು ಕಿತ್ತೂರು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯುಲ್ಲಿ ನೂತನ ವರ್ಷದ ದಿನದರ್ಶಿಕೆ ಬಿಡುಗಡೆಗೊಳಿಸಿ ಮಾತನಾಡಿ, ಪಿರಿಯಾಪಟ್ಟಣ ತಾಲೂಕಿನಲ್ಲಿಯೇ ಪ್ರಥಮ ಬಾರಿಗೆ ವಿನೂತನ ಕಾರ್ಯಕ್ರಮ ಹಮ್ಮಿಕೊಳ್ಳುವ ಮೂಲಕ ಸರ್ಕಾರಿ ಶಾಲೆಗಳಿಗೆ ಮಕ್ಕಳ ದಾಖಲಾತಿ ಸಂಖ್ಯೆ ಹೆಚ್ಚಿಸಲು ಕ್ರಮ ಕೈಗೊಳ್ಳಲಾಗಿದೆ. ಸರ್ಕಾರಿ ಶಾಲೆಗಳ ಅಭಿವೃದ್ಧಿಗೆ ಶಿಕ್ಷಕರ ಪಾತ್ರ ಬಹಳ ಮುಖ್ಯವಾಗಿದ್ದು, ಎಲ್ಲಿ ಶಿಕ್ಷಕರು ಕ್ರಿಯಾಶೀಲರಾಗಿರುತ್ತಾರೋ ಅಂತಹ ಶಾಲೆಗಳಲ್ಲಿ ಉತ್ತಮ ಫಲಿತಾಂಶದ ಜತೆಗೆ ದಾಖಲಾತಿ ಸಂಖ್ಯೆಯೂ ಹೆಚ್ಚಾಗಿರುತ್ತದೆ ಎಂದು ತಿಳಿಸಿದರು.


    ಅಕ್ಷರ ದಾಸೋಹ ಸಹಾಯಕ ನಿರ್ದೇಶಕ ಎಂ.ಸಿ.ಪ್ರಶಾಂತ್ ಮಾತನಾಡಿ, ಶಾಲೆಯೇ ದೇವಾಲಯ ಮಕ್ಕಳೇ ದೇವರು. ಶಿಕ್ಷಕರೇ ಅರ್ಚಕರು ಎನ್ನುವ ಭಾವನೆಯನ್ನು ಅರಿತಾಗ ಮಾತ್ರ ಶೈಕ್ಷಣಿಕ ಪ್ರಗತಿ ಸಾಧ್ಯವಾಗುತ್ತದೆ. ಸರ್ಕಾರವು ಸರ್ಕಾರಿ ಶಾಲೆಗಳ ಅಭಿವೃದ್ಧಿಗೆ ಹಲವು ಯೋಜನೆಗಳನ್ನು ರೂಪಿಸಲಾಗಿದೆ. ಇದನ್ನು ಗ್ರಾಮೀಣ ವಿದ್ಯಾರ್ಥಿಗಳು ಸದುಪಯೋಗ ಪಡಿಸಿಕೊಂಡು ಉತ್ತಮ ವಿದ್ಯಾರ್ಥಿಗಳಾಗುವ ಜತೆಗೆ ಭವ್ಯಭಾರತದ ನಿರ್ಮಾಣಕ್ಕೆ ಸಹಕರಿಸಬೇಕು ಎಂದು ತಿಳಿಸಿದರು.
    ರಾಜ್ಯದಲ್ಲೇ ಪ್ರಥಮ ಬಾರಿಗೆ ಸರ್ಕಾರಿ ಶಾಲೆಯ ಮುಖ್ಯಶಿಕ್ಷಕರು ಸ್ವಂತ ಹಣದಿಂದ ದಿನದರ್ಶಿಕೆ ಬಿಡುಗಡೆ ಮಾಡುವ ಮೂಲಕ ಶೈಕ್ಷಣಿಕ ಪ್ರಗತಿಗೆ ಹೆಚ್ಚಿನ ಆದ್ಯತೆ ನೀಡುವ ಆದರ್ಶ ಶಿಕ್ಷಕರಾಗಿದ್ದಾರೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.


    ಬಿಆರ್‌ಸಿ ಶಿವರಾಜು, ಶಿಕ್ಷಕರ ಸಂಘದ ಅಧ್ಯಕ್ಷ ರಾಮಚಂದ್ರ, ಉಪಾಧ್ಯಕ್ಷ ಅಶೋಕ, ಎಸ್‌ಡಿಎಂಸಿ ಅಧ್ಯಕ್ಷ ಚಲುವರಾಜು, ಉಪಾಧ್ಯಕ್ಷೆ ಕಲಾವತಿ ವೆಂಕಟೇಶ್, ಸದಸ್ಯರಾದ ಸೋಮಶೇಖರ್, ಶಿಕ್ಷಣ ಸಂಯೋಜಕರಾದ ಸತೀಶ್‌ಕುಮಾರ್, ಗಣೇಶ್, ಬಿಆರ್‌ಪಿ ಶ್ರೀನಿಧಿ, ಸಿಆರ್‌ಪಿ ಕವಿತಾ, ಮುಖ್ಯಶಿಕ್ಷಕ ರಾಜೇಂದ್ರ, ಶಿಕ್ಷಕರಾದ ಎಚ್.ಕೆ.ದೇವೇಂದ್ರ, ಅನಿಲ್‌ಕುಮಾರ್, ಚನ್ನಕೇಶವ, ಆಶಾ ಇತರರು ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts