More

    ಶಿಕ್ಷಕ ಮತಕ್ಷೇತ್ರಕ್ಕೆ ಸ್ಪರ್ಧಿಸಲು ಅಮಿತ ಕೋರೆ ಚಿಂತನೆ

    ಬೆಳಗಾವಿ: ವಾಯವ್ಯ ಪದವೀಧರ ಮತ್ತು ಶಿಕ್ಷಕ ಮತಕ್ಷೇತ್ರದ ಚುನಾವಣೆಗೆ ಸ್ಪರ್ಧಿಸುವುದಕ್ಕಾಗಿ ಈಗಿನಿಂದಲೇ ತಯಾರಿ ಶುರುವಾಗಿದೆ. ವಾಯವ್ಯ ಪದವೀಧರ ಕ್ಷೇತ್ರಕ್ಕೆ ಬಿಜೆಪಿಯಿಂದ ಹಣಮಂತ ನಿರಾಣಿ ಎರಡನೇ ಅವಧಿಗೆ ಸ್ಪರ್ಧಿಸುವುದು ಬಹುತೇಕ ಖಚಿತವಾಗಿದೆ. ಆದರೆ, ವಾಯವ್ಯ ಶಿಕ್ಷಕ ಮತಕ್ಷೇತ್ರದಿಂದ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸಲು ಉದ್ಯಮಿ ಹಾಗೂ ಕೆಎಲ್‌ಇ ಸಂಸ್ಥೆಯ ನಿರ್ದೇಶಕ ಅಮಿತ ಕೋರೆ ಅವರು ಚಿಂತನೆ ನಡೆಸಿದ್ದಾರೆ ಎಂದು ಬಿಜೆಪಿ ಮೂಲಗಳು ಖಚಿತಪಡಿಸಿವೆ.

    ಕಾಂಗ್ರೆಸ್‌ನಿಂದ ಪದವೀಧರ ಕ್ಷೇತ್ರಕ್ಕೆ ಕಿರಣ ಸಾಧುನವರ ಅವರು ಹೆಸರು ಕೇಳಿ ಬರುತ್ತಿದ್ದು, ವಾಯವ್ಯ ಶಿಕ್ಷಕರ ಮತಕ್ಷೇತ್ರಕ್ಕೆ ಪ್ರಕಾಶ ಹುಕ್ಕೇರಿ ಅಥವಾ ಮಾಜಿ ಸಿಎಂ ಸಿದ್ಧರಾಮಯ್ಯ ಅವರ ಆಪ್ತ ಬಳಗದಲ್ಲಿ ಗುರುತಿಸಿಕೊಂಡಿರುವ ಬಾಗಲಕೋಟೆಯ ಎನ್.ಬಿ. ಬನ್ನೂರ ಅವರ ಹೆಸರು ಕೇಳಿ ಬರುತ್ತಿವೆ. ಆದರೆ, ಬನ್ನೂರ ಅವರು ಕಳೆದ ಬಾರಿ ಎಂಎಲ್‌ಸಿ ಚುನಾವಣೆಯಲ್ಲಿ ಸೋತಿರುವುದರಿಂದ ‘ಕೈ’ ಹೈಕಮಾಂಡ್ ಅವರಿಗೆ ಟಿಕೆಟ್ ನೀಡುವುದು ಇನ್ನೂ ಖಚಿತವಾಗಿಲ್ಲ.

    ಅಮಿತ ಕೋರೆ ಅಥವಾ ಬೆಳಗಾವಿಯ ಕೆಎಲ್‌ಇ ದಂತ ವೈದ್ಯಕೀಯ ಕಾಲೇಜ್‌ನಲ್ಲಿ ಪ್ರಾಧ್ಯಾಪಕರಾಗಿರುವ ಪ್ರೀತಿ ಕೋರೆ ಪಕ್ಷೇತರ ಚುನಾವಣೆಗೆ ಸ್ಪರ್ಧಿಸಲು ಚಿಂತನೆ ನಡೆಸಿದ್ದಾರೆ ಎಂಬ ಮಾತುಗಳು ಪಕ್ಷದ ವಲಯದಲ್ಲಿ ಕೇಳಿ ಬರುತ್ತಿವೆ. ಆರ್‌ಎಸ್‌ಎಸ್‌ನ ಹಿರಿಯ ಮುಖಂಡರು ಈ ಬಾರಿಯೂ ಶಿಕ್ಷಕ ಕ್ಷೇತ್ರಕ್ಕೆ ಅರುಣ ಶಹಾಪುರ ಅವರ ಹೆಸರನ್ನೇ ಬಿಜೆಪಿ ಹೈಕಮಾಂಡ್‌ಗೆ ಶಿಫಾರಸು ಮಾಡಿದ್ದಾರೆ ಎಂದು ಮೂಲಗಳು ತಿಳಿಸಿವೆ.

    ಬೆಳಗಾವಿ ಜಿಲ್ಲೆ ನಿರ್ಣಾಯಕ: ಅತಿ ಹೆಚ್ಚು ಶಿಕ್ಷಣ ಸಂಸ್ಥೆ ಮತ್ತು ಮತದಾರರನ್ನು ಹೊಂದಿರುವ ಬೆಳಗಾವಿ ಜಿಲ್ಲೆಯ ಮತದಾರರು ಅಭ್ಯರ್ಥಿಗಳ ಗೆಲುವಿಗೆ ನಿರ್ಣಾಯಕರಾಗಲಿದ್ದಾರೆ. ಬೆಳಗಾವಿ, ವಿಜಯಪುರ ಮತ್ತು ಬಾಗಲಕೋಟೆ ಜಿಲ್ಲೆಗಳಲ್ಲಿ ತಮ್ಮದೇ ಆದ ಮತ ಬ್ಯಾಂಕ್‌ಗಳಲ್ಲಿ ತಮ್ಮದೇ ಆದ ಮತದಾರ ಬಾಂಧವರನ್ನು ರಜಿಸ್ಟ್ರಾರ್ ಮಾಡಿಕೊಳ್ಳುವುದಕ್ಕಾಗಿ ಕಾಂಗ್ರೆಸ್ ಮತ್ತು ಬಿಜೆಪಿ ಎರಡೂ ಪಕ್ಷಗಳಲ್ಲಿ ಸದ್ದಿಲ್ಲದೆ ತಯಾರಿ ಶುರು=ವಾಗಿದೆ. ಪದವೀಧರ ಮತಕ್ಷೇತ್ರದ ವಿಧಾನ ಪರಿಷತ್ ಸದಸ್ಯ ಹಣಮಂತ ನಿರಾಣಿ ಮತ್ತು ವಾಯವ್ಯ ಶಿಕ್ಷಕ ಮತಕ್ಷೇತ್ರದ ವಿಧಾನ ಪರಿಷತ್ ಸದಸ್ಯ ಅರುಣ ಶಹಾಪುರ ಅವರ ಅವಧಿ ಮುಂಬರುವ 2022ರ ಜೂನ್ 22ಕ್ಕೆ ಪೂರ್ಣಗೊಳ್ಳಲಿದೆ.

    ನನ್ನ ಅಭಿಮಾನಿಗಳು, ಹಿತೈಷಿಗಳು, ಸ್ನೇಹಿತರು ಚುನಾವಣೆಗೆ ಸ್ಪರ್ಧಿಸುವಂತೆ ಸಲಹೆ ನೀಡುತ್ತಿದ್ದಾರೆ. ಆದರೂ ಚುನಾವಣೆಗೆ ಸ್ಪರ್ಧಿಸುವುದಾದರೆ, ಗುರು-ಹಿರಿಯರು, ಮತದಾರ ಬಾಂಧವರ ಜತೆ ಚರ್ಚಿಸಿದ ಬಳಿಕವೇ ಅಂತಿಮ ನಿರ್ಧಾರ ಕೈಗೊಳ್ಳುತ್ತೇನೆ.
    | ಅಮಿತ ಕೋರೆ ನಿರ್ದೇಶಕರು, ಕೆಎಲ್‌ಇ ಸೊಸೈಟಿ ಬೆಳಗಾವಿ

    Array

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts