More

    ಶಿಕ್ಷಣದ ಜತೆ ಬೇಕು ನಾಯಕತ್ವ ಗುಣ -ಎಸ್ಪಿ ಉಮಾ ಪ್ರಶಾಂತ್ ಹೇಳಿಕೆ -ಪೊಲೀಸ್ ಪಬ್ಲಿಕ್ ಶಾಲೆಯಲ್ಲಿ ವಿದ್ಯಾರ್ಥಿ ಮಂಡಳಿಗೆ ಚಾಲನೆ 

    ದಾವಣಗೆರೆ: ಶಾಲೆಯಲ್ಲಿ ಪಠ್ಯ ಚಟುವಟಿಕೆಗಳ ಜತೆಯಲ್ಲೇ ನಾಯಕತ್ವ ಗುಣಗಳಿಗೂ ಆದ್ಯತೆ ನೀಡಬೇಕಿದೆ. ಹೀಗಾಗಿ ವಿದ್ಯಾರ್ಥಿ ಮಂಡಳಿ ಅಥವಾ ಪರಿಷತ್ತುಗಳು ಅವಶ್ಯಕ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಉಮಾ ಪ್ರಶಾಂತ್ ತಿಳಿಸಿದರು.
    ಕೊಂಡಜ್ಜಿಯ ಪೊಲೀಸ್ ಪಬ್ಲಿಕ್ ಶಾಲೆಯಲ್ಲಿ ಶನಿವಾರ ಹಮ್ಮಿಕೊಂಡಿದ್ದ ಶಾಲೆಯ ನೂತನ ವಿದ್ಯಾರ್ಥಿ ಮಂಡಳಿಯ ಪದಗ್ರಹಣ ಕಾರ್ಯಕ್ರಮದಲ್ಲಿ ಚುನಾಯಿತ ವಿದ್ಯಾರ್ಥಿ ನಾಯಕರಿಗೆ ಪದಗ್ರಹಣ ಮಾಡಿ ಮಾತನಾಡಿದರು.
    ವಿದ್ಯಾರ್ಥಿ ಪರಿಷತ್ತು ಮಕ್ಕಳ ಸರ್ವತೋಮುಖ ಅಭಿವೃದ್ದಿಯಲ್ಲಿ ಸ್ವಯಂ ಶಿಸ್ತಿನಿಂದ ಬೆಳೆಸಲು ಮತ್ತು ದೇಶದ ಭವಿಷ್ಯದ ಪ್ರಜೆಗಳನ್ನು ರೂಪಿಸುವಲ್ಲಿ ಪ್ರಮುಖ ಪಾತ್ರವಹಿಸುತ್ತದೆ. ನಾಯಕತ್ವ ಗುಣ ಮತ್ತು 21ನೇ ಶತಮಾನಕ್ಕೆ ಅವಶ್ಯಕವಿರುವ ಸಾಮರ್ಥ್ಯಗಳನ್ನು ರೂಪಿಸುತ್ತದೆ ಎಂದರು.
    ನಗರ ಮತ್ತು ಗ್ರಾಮಾಂತರ ಪ್ರತಿಭೆಗಳಿಗೆ ಪೊಲೀಸ್ ಪಬ್ಲಿಕ್ ಶಾಲೆಯು ಉತ್ತಮ ಅವಕಾಶಗಳನ್ನು ನೀಡಿದ್ದು, ಎರಡು ವರ್ಷಗಳಲ್ಲಿ ಶಾಲೆಯ ತ್ವರಿತಗತಿಯಲ್ಲಿ ಪ್ರತಿ ಸಾಧಿಸಿದೆ ಎಂದು ಶ್ಲಾಘಿಸಿದರು.
    ಜಿಲ್ಲಾ ಸಶಸ್ತ್ರ ಮೀಸಲು ಪಡೆಯ ಉಪಾಧೀಕ್ಷಕ ಪಿ.ಬಿ. ಪ್ರಕಾಶ್ ಮಾತನಾಡಿ ಶಾಲಾ ಚುನಾವಣೆಯಲ್ಲಿ ಆಯ್ಕೆಯಾದ ವಿದ್ಯಾರ್ಥಿಗಳು ತಮ್ಮ ಶಿಸ್ತು-ಜವಾಬ್ದಾರಿ ಅರಿತು ನಡೆಯಬೇಕು. ಎಲ್ಲರಿಗೂ ಮಾದರಿಯಾಗಬೇಕು ಎಂದರು.
    ಶಾಲೆಯ ವಿದ್ಯಾರ್ಥಿಗಳು ಶಿಸ್ತುಬದ್ಧ ಪಥ ಸಂಚಲನದ ಮೂಲಕ ಅತಿಥಿಗಳಿಗೆ ಗೌರವ ಸಲ್ಲಿಸಿದರು. ಶಾಲೆಯ ಮುಖ್ಯ ಶಿಕ್ಷಕ ಯತೀಶ್ ಎಚ್.ವಿ. ಆಚಾರ್ ಚುನಾಯಿತ ವಿದ್ಯಾರ್ಥಿಗಳಿಗೆ ಪ್ರಮಾಣ ವಚನ ಬೋಧಿಸಿದರು.
    ಜಿಲ್ಲಾ ಹೆಚ್ಚುವರಿ ವರಿಷ್ಠಾಧಿಕಾರಿ ರಾಮಗೊಂಡ ಬಸರಗಿ, ಶಾಲೆಯ ಬೋಧಕ, ಬೋಧಕೇತರ ವರ್ಗದವರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts