More

    ಶಿಕ್ಷಣದ ಮೂಲಕ ಬದುಕು ಕಟ್ಟಿಕೊಳ್ಳಿ

    ರಾಯಬಾಗ: ಶಿಕ್ಷಣದಿಂದ ಒಳ್ಳೆಯ ಸಂಸ್ಕೃತಿ, ಜ್ಞಾನ ಪಡೆದು ಸಮಾಜದಲ್ಲಿ ಉತ್ತಮ ಪ್ರಜೆಗಳಾಗಿ ಬದುಕಿದರೆ ಮಾತ್ರ ನಾವು ಪಡೆದ ಶಿಕ್ಷಣಕ್ಕೆ ಮಹತ್ವ ಬರುತ್ತದೆ ಎಂದು ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಯ ಪ.ಪೂ.ಶಿಕ್ಷಣ ಇಲಾಖೆ ಉಪನಿರ್ದೇಶಕ ಪಿ.ಐ.ಭಂಡಾರಿ ಹೇಳಿದರು.

    ಪಟ್ಟಣದ ಬಿ.ಎ.ಚೌಗುಲೆ ಶಿಕ್ಷಣ ಸಂಸ್ಥೆಯ ಸತೀಶ ಚೌಗುಲೆ ಮತ್ತು ಜಿ.ಬಿ.ಚೌಗುಲೆ ಸ್ವತಂತ್ರ ಪಿಯು ಮಹಾವಿದ್ಯಾಲಯದ ಸಂಯುಕ್ತ ಆಶ್ರಯದಲ್ಲಿ ಸೋಮವಾರ ಹಮ್ಮಿಕೊಂಡಿದ್ದ ಪಿಯುಸಿ ಪ್ರಥಮ ವರ್ಷದ ವಿದ್ಯಾರ್ಥಿಗಳ ಸ್ವಾಗತ ಹಾಗೂ ಸಾಂಸ್ಕೃತಿಕ, ಕ್ರೀಡೆ, ಎನ್‌ಎಸ್‌ಎಸ್ ಚಟುವಟಿಕೆಗಳ ಉದ್ಘಾಟನಾ ಸಮಾರಂಭಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

    ಹಾರೂಗೇರಿ ಸಿದ್ಧೇಶ್ವರ ಕಲಾ ಪದವಿ ಮಹಾವಿದ್ಯಾಲಯದ ಪ್ರಾಚಾರ್ಯ ಟಿ.ಎಸ್.ವಂಟಗೂಡಿ ಮಾತನಾಡಿ, ವಿದ್ಯಾರ್ಥಿಗಳು ಗುಣಮಟ್ಟದ ಶಿಕ್ಷಣ ಪಡೆದು ಮಾದರಿ ಬದುಕು ಕಟ್ಟಿಕೊಳ್ಳಬೇಕು. ಸಾಮಾಜಿಕ ಜಾಲತಾಣಗಳಿಂದ ದೂರವಿದ್ದು, ಪುಸ್ತಕ ಓದುವ ಹವ್ಯಾಸ ಬೆಳೆಸಿಕೊಳ್ಳಬೇಕು ಎಂದರು. ರನ್ನಬೆಳಗಲಿಯ ಸಿದ್ಧಾರೂಢ ಮಠದ ಸಿದ್ಧರಾಮ ಶಿವಯೋಗಿಗಳು, ಸಂಸ್ಥೆ ಅಧ್ಯಕ್ಷ ಹಾಗೂ ನ್ಯಾಯವಾದಿ ಎಲ್.ಬಿ.ಚೌಗುಲೆ, ಸಂಸ್ಥೆ ಕಾರ್ಯದರ್ಶಿ ವಿನಯ ಚೌಗುಲೆ, ಪ್ರಾಚಾರ್ಯರಾದ ಶಿವಾನಂದ ನಾಂದನಿ, ಎಸ್.ಎಸ್.ದಿಗ್ಗೇವಾಡಿ ಇತರರಿದ್ದರು. ಆರ್.ಐ.ಯಮಗಾರ ಸ್ವಾಗತಿಸಿ, ನಿರೂಪಿಸಿದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts