More

    ಶಿಕ್ಷಣ, ಆರೋಗ್ಯ ಕ್ಷೇತ್ರಕ್ಕೆ ಹೆಚ್ಚಿನ ಒತ್ತು

    ಯಾದಗಿರಿ: ಗ್ರಾಮೀಣ ಭಾಗದಲ್ಲಿನ ಸರಕಾರಿ ಶಾಲೆಗಳಿಗೆ ಮೂಲಸೌಕರ್ಯ ಒದಗಿಸುವ ನಿಟ್ಟಿನಲ್ಲಿ ಕೆಕೆಆರ್ಡಿಬಿಯಿಂದ ಅಕ್ಷರ ಆವಿಷ್ಕಾರ ಯೋಜನೆ ಜಾರಿಗೆ ತರಲಾಗಿದೆ ಎಂದು ಗುರುಮಠಕಲ್ ಶಾಸಕ ಶರಣಗೌಡ ಕಂದಕೂರ ತಿಳಿಸಿದರು.

    ಶುಕ್ರವಾರ ತಾಲೂಕಿನ ಅಲ್ಲಿಪುರ ಗ್ರಾಮದಲ್ಲಿನ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿಯ 2021ನೇ ಸಾಲಿನ ಅನುದಾನದಡಿ ನೂತನವಾಗಿ ನಿಮರ್ಿಸಲಾದ 5 ಕೋಣೆಗಳ ಲೋಕಾರ್ಪಣೆಗೊಳಿಸಿ ಮಾತನಾಡಿ, ಮಂಡಳಿ ಅಧ್ಯಕ್ಷ ಡಾ.ಅಜಯ್ಸಿಂಗ್, ಈ ಮಹತ್ವಾಕಾಂಕ್ಷಿ ಯೋಜನೆ ಜಾರಿಗೆ ತಂದಿದ್ದಾರೆ. ಶಾಲೆಗಳಿಗೆ ಕೋಣೆ, ಆಟದ ಮೈದಾನ, ವಿಜ್ಞಾನ ಪ್ರಯೋಗಾಲಯ, ಶೌಚಗೃಹ ಇನ್ನಿತರ ಸೌಕರ್ಯ ಒದಗಿಸಲಾಗುವುದು ಎಂದರು.

    ನನ್ನ ಮುಂದಿನ 5 ವರ್ಷದ ಅವಧಿಯಲ್ಲಿ, ಶಿಕ್ಷಣ ಮತ್ತು ಆರೋಗ್ಯ ಕ್ಷೇತ್ರಕ್ಕೆ ಹೆಚ್ಚಿನ ಅನುದಾನ ನೀಡಲು ತೀರ್ಮಾನಿಸಿದ್ದೇನೆ. ಮತಕ್ಷೇತ್ರದಲ್ಲಿ 250 ಸರಕಾರಿ ಶಾಲೆಗಳಿದ್ದು, ಅಧಿಕಾರಿಗಳ ಮಾರ್ಗದರ್ಶನ, ಸಲಹೆ ಪಡೆದು ಪ್ರತಿ ವರ್ಷ 50 ಶಾಲೆಗಳನ್ನು ಶೈಕ್ಷಣಿಕವಾಗಿ ಅಭಿವೃದ್ಧಿ ಮಾಡಲಾಗುವುದು. ಶಾಸಕನಾಗಿ ಆಯ್ಕೆಯಾದ ನಂತರ ಅಲ್ಲಿಪುರ, ಹೋರುಂವಾ, ಯಡ್ಡಳ್ಳಿ ಗ್ರಾಮಕ್ಕೆ 7 ಕೋಟಿ ವೆಚ್ಚದಲ್ಲಿ ರಸ್ತೆ ನಿರ್ಮಾಣಕ್ಕೆ ಅನುಮತಿ ನೀಡಿದ್ದೇನೆ. ರೈತರಿಗೆ ನಿರಂತರವಾಗಿ 7 ಗಂಟೆ ವಿದ್ಯುತ್ ಸರಬರಾಜು ನೀಡುವಂತೆ ಜಿಲ್ಲಾ ಉಸ್ತುವಾರಿ ಸಚಿವರು ಶಾಸಕರು, ಅಧಿಕಾರಿಗಳಿಗೆ ತಿಳಿಸಿದ್ದಾರೆ. ಒಂದು ವೇಳೆ ವಿದ್ಯುತ್ನಲ್ಲಿ ಸಮಸ್ಯೆಯಾದರೆ ನನಗೆ ಕರೆ ಮಾಡಿ ಎಂದು ಹೇಳಿದರು.

    ಇದೇ ವೇಳೆ ಮಾಜಿ ಶಾಸಕ ನಾಗನಗೌಡ ಕಂದಕೂರ ಅವರು ಅವಧಿಯಲ್ಲಿ 3.5 ಕೋಟಿ ವೆಚ್ಚದಲ್ಲಿ ನಿಮರ್ಾಣವಾಗುತ್ತಿರುವ ಸರಕಾರಿ ಆಸ್ಪತ್ರೆಯಕಾಮಗಾರಿ ಶಾಸಕರು ಪರಿಶೀಲಿಸಿದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts