More

    ಶಿಕ್ಷಣ-ಆರೋಗ್ಯ ಸುಧಾರಣೆಗೆ ಒತ್ತು

    ಬಾಗಲಕೋಟೆ: ಆಂಧ್ರಪ್ರದೇಶದಲ್ಲಿ ಶಿಕ್ಷಣ-ಆರೋಗ್ಯ ಕ್ಷೇತ್ರದಲ್ಲಿ ಗುಣಮಟ್ಟ ಹೆಚ್ಚಿಸಲು ಸಾಕಷ್ಟು ಸುಧಾರಣೆ ಕೈಗೊಳ್ಳಲಾಗಿದೆ. ರಾಜ್ಯದ ಪ್ರತಿಯೊಂದು ಜಿಲ್ಲೆಗೆ ವೈದ್ಯಕೀಯ ಕಾಲೇಜು-ಅತ್ಯಾಧುನಿಕ ಆಸ್ಪತ್ರೆ ಸ್ಥಾಪಿಸಲಾಗುತ್ತಿದೆ ಎಂದು ಆಂಧ್ರಪ್ರದೇಶದ ಹಣಕಾಸು ಸಚಿವ ಭುಗನ್ ರಾಜೇಂದ್ರನಾಥ ರೆಡ್ಡಿ ಹೇಳಿದರು.
    ನಗರದ ವಿದ್ಯಾಗಿರಿ ಬಡಾವಣೆಯಲ್ಲಿರುವ ಬಿವಿವಿ ಸಂಘದ ಇಂಜಿನಿರಿಂಗ್ ಕಾಲೇಜಿ ಆವರಣದಲ್ಲಿ ಸೋಮವಾರ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಬಿಇಟಿ ಸಭಾಭವನ ಉದ್ಘಾಟಿಸಿ ಹಾಗೂ ತಿರುಪಲ ತಿರುಪತಿ ದೇವಸ್ಥಾನದ ಜಾಗೆ ಹಸ್ತಾಂತರ ಮಾಡಿ ಅವರು ಮಾತನಾಡಿದರು.
    ೫ ಸಾವಿರ ಕೋಟಿ ರೂ.ವೆಚ್ಚದಲ್ಲಿ ಆಸ್ಪತ್ರೆಗಳಿಗೆ ಅಗತ್ಯವಿರುವ ಸೌಲಭ್ಯ ಒದಗಿಸಲಾಗುತ್ತಿದೆ. ೩೭೦೦ ಕೋಟಿ ರೂ.ವೆಚ್ಚದಲ್ಲಿ ಶಿಕ್ಷಣ ಕ್ಷೇತ್ರ ಸುಧಾರಣೆಗೆ ನಾಡು-ನೇಡು ಯೋಜನೆ ಅನುಷ್ಠಾನಗೊಳಿಸಿ ೧೫೭೦೦ ಸರ್ಕಾರಿ ಶಾಲೆಗಳನ್ನು ಅಭಿವೃದ್ಧಿ ಪಡಿಸಲಾಗುತ್ತಿದೆ. ಮಹಿಳಾ ಶಿಕ್ಷಣಕ್ಕೆ ಆದ್ಯತೆ ನೀಡಲಾಗಿದೆ ಎಂದ ಅವರು, ಕಳೆದ ಎರಡು ದರ್ಶಕಗಳಿಂದ ಬಾಗಲಕೋಟೆ ಅಭಿವೃದ್ಧಿ ಗಮನಿಸಿದ್ದೇನೆ. ಶಾಸಕ ವೀರಣ್ಣ ಚರಂತಿಮಠ ನೇತೃತ್ವದಲ್ಲಿ ಬಿವಿವಿ ಸಂಘದ ಆಘಾತ ಸಾಧನೆ, ಬೆಳವಣಿಗೆ ಕಂಡಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.
    ತಿರುಮಲ ತಿರುಪತಿ ದೇವಸ್ಥಾನಂ ಅಧ್ಯಕ್ಷ ವೈ.ವಿ. ಸುಬ್ಬಾರೆಡ್ಡಿ ಮಾತನಾಡಿ, ಸಾಮಾನ್ಯರಿಗೂ ತಿರುಪತಿ ತಿಮ್ಮಪ್ಪನ ದರ್ಶನ ದೊರೆಯುವ ವ್ಯವಸ್ಥೆ ಕಲ್ಪಿಸಲಾಗಿದೆ. ಉಚಿತವಾಗಿ ಅನ್ನದಾಸೋಹ ಮಾಡಲಾಗಿದೆ. ಮುಖ್ಯಮಂತ್ರಿಯಾಗಿದ್ದ ಬಿ.ಎಸ್. ಯಡಿಯೂರಪ್ಪ ಅವರು ಯಾತ್ರಿ ನಿವಾಸ ನಿರ್ಮಾಣಕ್ಕೆ ೨೦೦ ಕೋಟಿ ರೂ. ಅನುದಾನ ಬಿಡುಗಡೆ ಮಾಡಿದ್ದರು. ಎರಡುಮೂರು ತಿಂಗಳಲ್ಲಿ ಯಾತ್ರಿ ನಿವಾಸ ಉದ್ಘಾಟನೆಯಾಗಲಿದೆ ಎಂದರು.
    ಮತಾಂತರ ತಡೆಯಲು ಹಿಂದೂ ಧರ್ಮ ಪ್ರಚಾರ ಪರಿಷತ್ ವತಿಯಿಂದ ಅನೇಕ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಮೂರು ವರ್ಷಗಳಲ್ಲಿ ಪರಿಶಿಷ್ಟರು, ಬುಡಕಟ್ಟು ಜನಾಂಗ ವಾಸಿಸುವ ಸ್ಥಳಗಳಲ್ಲಿ ೫೭೦ ದೇವಸ್ಥಾನಗಳ ನಿರ್ಮಾಣ ಮಾಡಿ ಅಭಿವೃದ್ಧಿ ಪಡಿಸಲಾಗುತ್ತಿದೆ. ಮುಂದಿನ ಎರಡು ವರ್ಷಗಳಲ್ಲಿ ೨ ಸಾವಿರ ದೇವಸ್ಥಾನಗಳನ್ನು ನಿರ್ಮಿಸುವ ಗುರಿ ಹೊಂದಲಾಗಿದೆ. ಕನ್ಯಾಕುಮಾರಿಯಿಂದ ಜಮ್ಮುಕಾಶ್ಮೀರದವರೆಗೂ ದೇವಸ್ಥಾನ ನಿರ್ಮಾಣ ಮಾಡಲಾಗುವುದು ಎಂದು ಹೇಳಿದರು.
    ಸುಪ್ರೀಂ ಕೋರ್ಟ ಗ್ರೀನ್ ಕಾರಿಡಾರ್ ಘೋಷಣೆ ಮಾಡಿದ ಹಿನ್ನಲೆಯಲ್ಲಿ ತಿರುಮಲದಲ್ಲಿ ಕಳೆದ ೨೫ ವರ್ಷಗಳಿಂದ ಯಾರಿಗೂ ಜಾಗ ನೀಡಿಲ್ಲ. ಮಾಜಿ ಮುಖ್ಯಮಂತ್ರಿ ಬಿಎಸ್‌ವೈ ಹಾಗೂ ಶಾಸಕ ವೀರಣ್ಣ ಚರಂತಿಮಠ ಅವರ ಸತತ ಪ್ರಯತ್ನ ಹಾಗೂ ಆಂಧ್ರಪ್ರದೇಶ ಮುಖ್ಯಮಂತ್ರಿ ಜಗನ್ ಮೋಹನ್ ರೆಡ್ಡಿ ಅವರ ನಿರ್ಧಾರದಿಂದಾಗಿ ಬಿವಿವಿ ಸಂಘಕ್ಕೆ ಜಾಗೆ ನೀಡಲು ಸಾಧ್ಯವಾಯಿತು ಎಂದು ತಿಳಿಸಿದರು.
    ಜಲ ಸಂಪನ್ಮೂಲ ಸಚಿವ ಗೋವಿಂದ ಕಾರಜೋಳ ಮಾತನಾಡಿ, ಬಿವಿವಿ ಸಂಘದ ಶೈಕ್ಷಣಿಕ, ಆರೋಗ್ಯ, ಸಾಮಾಜಿಕ ಕ್ಷೇತ್ರದಲ್ಲಿ ಬೆಳೆಯಲು ಶಾಸಕ ವೀರಣ್ಣ ಚರಂತಿಮಠ ಕಾರಣ. ತಮ್ಮ ತಂದೆಯ ಸ್ವಂತ ಉದ್ಯೋಗ ಮಾಡಿದ್ದರೇ ಸಾವಿರಾರು ಕೋಟಿ ರೂ.ಒಡೆಯರಾಗುತ್ತಿದ್ದರು. ಸಂಘದ ಬೆಳವಣಿಗೆ ಸಾಕಷ್ಟು ಶ್ರಮಿಸಿದ್ದಾರೆ. ಬಡ ಮಕ್ಕಳು ಶಿಕ್ಷಣದಿಂದ ವಂಚಿತರಾಗಬಾರದು ಎನ್ನುವ ಉದ್ದೇಶದಿಂದ ಡೀಮ್ಡ್ ವಿಶ್ವವಿದ್ಯಾಲಯ ಬೇಡ ಅಂತ ಸರ್ಕಾರಕ್ಕೆ ಸ್ಪಷ್ಟಪಡಿಸಿದರು. ವೀರಣ್ಣ ಚರಂತಿಮಠ ೨೧ ನೇ ಶತಮಾನದ ಶ್ರೇಷ್ಠ ಸಂತ, ಶರಣರಾಗಿದ್ದಾರೆ ಎಂದು ಬಣ್ಣಿಸಿದರು.
    ಸಂಘದ ಕಾರ್ಯಾಧ್ಯಕ್ಷ, ಶಾಸಕ ವೀರಣ್ಣ ಚರಂತಿಮಠ ಮಾತನಾಡಿ, ನಮ್ಮ ಭಾಗದ ಜನ ಶ್ರೀಶೈಲ, ತಿರುಪತಿ ತಿಮ್ಮಪ್ಪನ ದರ್ಶನಕ್ಕೆ ಅಽಕ ಸಂಖ್ಯೆಯಲ್ಲಿ ಹೋಗುತ್ತಾರೆ. ಅವರಿಗೆ ಅಲ್ಲಿ ಉಳಿದುಕೊಳ್ಳಲು ವ್ಯವಸ್ಥೆ ಇರದಿರುವುದು ನಾನು ಕಣ್ಣಾರೆ ಕಂಡಿದ್ದೆ. ಪ್ರಥಮ ಹಂತದಲ್ಲಿ ಶ್ರೀಶೈಲದಲ್ಲಿ ಯಾತ್ರಿ ನಿವಾಸ ನಿರ್ಮಾಣ ಕೈಗೊಳ್ಳಲಾಗಿದೆ. ಡಿಸೆಂಬರ್‌ನಲ್ಲಿ ಲೋಕಾರ್ಪಣೆಗೊಳ್ಳಲಿದೆ. ತಿರುಮಲದಲ್ಲಿ ೯ ಸಾವಿರ ಚದುರು ಅಡಿ ಕಡಿಮೆ ಮೊತ್ತಕ್ಕೆ ಇದೀಗ ಜಾಗೆ ಸಿಕ್ಕಿದೆ. ಒಂದು ವರ್ಷದಲ್ಲಿ ಬೃಹತ್ ಪ್ರಮಾಣದ ಯಾತ್ರಿ ನಿವಾಸ ಸಂಘದಿಂದ ನಿರ್ಮಿಸಲಾಗುವುದು ಎಂದರು.
    ಟಿಟಿಡಿಯ ಕಾರ್ಯ ನಿರ್ವಾಹಕ ಅಧಿಕಾರಿ ಎ.ವಿ. ಧರ್ಮರೆಡ್ಡಿ, ಬಿವಿವಿ ಸಂಘದ
    ಗೌರವ ಕಾರ್ಯದರ್ಶಿ ಮಹೇಶ ಅಥಣಿ ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts