More

    ಶಿಕ್ಷಣ ನೀಡಿ ಮಕ್ಕಳ ಭವಿಷ್ಯ ಉಜ್ವಲಗೊಳಿಸಿ


    ಚಾಮರಾಜನಗರ: ವಿಶ್ವಕರ್ಮ ಜನಾಂಗದವರು ತಮ್ಮ ಮಕ್ಕಳಿಗೆ ಉತ್ತಮ ಶಿಕ್ಷಣ ಕೊಡಿಸುವ ಮೂಲಕ ಅವರ ಭವಿಷ್ಯವನ್ನು ಉಜ್ವಲಗೊಳಿಸಬೇಕು ಎಂದು ಶಾಸಕ ಸಿ.ಎಸ್.ನಿರಂಜನಕುಮಾರ್ ಕರೆ ನೀಡಿದರು.


    ವಿಶ್ವಕರ್ಮ ಜಯಂತಿ ಅಂಗವಾಗಿ ಸೋಮವಾರ ಗುಂಡ್ಲುಪೇಟೆ ಪಟ್ಟಣದ ಗುರುಭವನದಲ್ಲಿ ಆಯೋಜಿಸಿದ್ದ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.


    ಯಾವುದೇ ಮನೆ ಹಾಗೂ ಕಟ್ಟಡ ನಿರ್ಮಾಣ ಸಂದರ್ಭದಲ್ಲಿಯೂ ವಿಶ್ವಕರ್ಮರ ಪಾತ್ರ ದೊಡ್ಡದಾಗಿದೆ. ಕುಲ ಕಸುಬನ್ನೇ ಅವಲಂಬಿಸಿದ ವಿಶ್ವಕರ್ಮರಿಗೆ ಈ ವರೆಗೆ ಸರ್ಕಾರದ ಯಾವುದೇ ಸವಲತ್ತುಗಳು ತಲುಪಿಲ್ಲ ಎಂಬ ಕೊರಗಿದೆ. ನಾನು ಶಾಸಕನಾದ ನಂತರ ಎರಡು ಸ್ಥಾನಗಳಿಗೆ ನಾಮನಿರ್ದೇಶನ ಮಾಡಿದ್ದು ಸಮುದಾಯ ಭವನಕ್ಕೆ 30 ಲಕ್ಷ ರೂ. ಮೀಸಲಿಟ್ಟಿದ್ದೇನೆ ಎಂದರು.


    ಚಿತ್ರನಟಿ ಭವ್ಯ ಮಾತನಾಡಿ, ಜನಾಂಗವು ಒಗ್ಗಟ್ಟಿನ ಕೊರತೆಯಿಂದ ಹಿಂದುಳಿದಿದೆ. ಶೈಕ್ಷಣಿಕವಾಗಿ ಮುಂದುವರೆದರೆ ಮಾತ್ರ ಆರ್ಥಿಕ ಅಭಿವೃದ್ದಿ ಸಾಧ್ಯವಾಗಲಿದೆ. ಸದ್ಯ ಯುವಕರು ಸಂಘಟಿತರಾಗುವ ಮೂಲಕ ತಮ್ಮ ಹಕ್ಕುಗಳನ್ನು ಪಡೆದುಕೊಳ್ಳಲು ಮುಂದಾಗಿರುವುದು ಸ್ವಾಗತಾರ್ಹ ಎಂದರು.
    ಇದಕ್ಕೂ ಮೊದಲು ಪಟ್ಟಣದ ವಡ್ಡರ ಬೀದಿಯ ಕಾಳಿಕಾಂಬಾ ದೇವಾಲಯದಿಂದ ಅಲಂಕೃತ ವಾಹನದಲ್ಲಿ ಮಹರ್ಷಿ ವಿಶ್ವಕರ್ಮರ ಭಾವಚಿತ್ರವನ್ನು ಇರಿಸಿ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ಮಾಡಲಾಯಿತು.


    ಕಾರ್ಯಕ್ರಮದಲ್ಲಿ ಪುರಸಭೆ ಅಧ್ಯಕ್ಷ ಪಿ.ಗಿರೀಶ್, ಚಾಮುಲ್ ನಿರ್ದೇಶಕ ಎಚ್.ಎಸ್.ನಂಜುಂಡಪ್ರಸಾದ್, ಮೈಸೂರು ಚಾಮರಾಜನಗರ ಜಿಲ್ಲಾ ಸಹಕಾರ ಬ್ಯಾಂಕ್ ಉಪಾಧ್ಯಕ್ಷ ಎಂ.ಪಿ.ಸುನಿಲ್, ಕಾಂಗ್ರೆಸ್ ಮುಖಂಡ ಎಚ್.ಎಂ.ಗಣೇಶ್ ಪ್ರಸಾದ್, ಕಾಡಾ ಮಾಜಿ ಅಧ್ಯಕ್ಷ ಎಚ್.ಎಸ್.ನಂಜಪ್ಪ, ವೀರಶೈವ ಮಹಾಸಭಾ ಮಾಜಿ ಜಿಲ್ಲಾಧ್ಯಕ್ಷ ಕೊಡಸೋಗೆ ಶಿವಬಸಪ್ಪ, ಪುಟ್ಟಸ್ವಾಮಿ, ನಂದಕುಮಾರ್ ಸೇರಿದಂತೆ ಹಲವರು ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts