More

    ಶಿಕ್ಷಣ, ಸಂಘಟನೆಗೆ ಒತ್ತು ನೀಡಿ

    ಚಿತ್ರದುರ್ಗ: ರಾಜ್ಯದಲ್ಲಿ ಭಾವಸಾರ ಕ್ಷತ್ರೀಯ ಸಮಾಜ ಆರ್ಥಿಕ, ಸಾಮಾಜಿಕ ಸೇರಿ ವಿವಿಧ ಕ್ಷೇತ್ರಗಳಲ್ಲಿ ಹಿಂದುಳಿದಿದ್ದು, ಅಗತ್ಯ ಸ್ಥಾನಮಾನ ಪಡೆಯಲು ಶಿಕ್ಷಣ ಮತ್ತು ಸಂಘಟನೆಗೆ ಹೆಚ್ಚು ಒತ್ತು ನೀಡಬೇಕಿದೆ ಎಂದು ಅಖಿಲ ಭಾರತ ಭಾವಸಾರ ಕ್ಷತ್ರೀಯ ಮಹಾಸಭಾದ ರಾಜ್ಯ ಅಧ್ಯಕ್ಷ ಶ್ರೀನಿವಾಸ ಪಿಸ್ಸೆ ಸಲಹೆ ನೀಡಿದರು.

    ಭಾವಸಾರ ಕ್ಷತ್ರೀಯ ಕಲ್ಯಾಣ ಮಂಟಪದಲ್ಲಿ ಭಾನುವಾರ ಸಮಾಜದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ, ಗಣ್ಯರಿಗೆ ಸನ್ಮಾನ ಕಾರ್ಯಕ್ರಮದ ಉದ್ಘಾಟಿಸಿ ಮಾತನಾಡಿದರು.

    ನಮ್ಮ ಸಮಾಜ ರಾಜ್ಯದಲ್ಲಿ ಹೆಚ್ಚಿನ ಜನಸಂಖ್ಯೆ ಹೊಂದಿದ್ದರೂ ರಾಜಕೀಯದಲ್ಲಿ ಸೂಕ್ತ ಸ್ಥಾನಮಾನ ಲಭಿಸಿಲ್ಲ. ಬಟ್ಟೆ ಹೊಲಿಯುವ ವೃತ್ತಿಯನ್ನೇ ಅವಲಂಬಿಸಿ, ಶಿಕ್ಷಣ ಕ್ಷೇತ್ರ ನಿರ್ಲಕ್ಷಿಸಿದ ಪರಿಣಾಮ ಹಿಂದುಳಿದಿದ್ದೇವೆ. ಆದ್ದರಿಂದ ಬದಲಾದ ಕಾಲಘಟ್ಟದಲ್ಲಿ ವಿದ್ಯೆಗೆ ಪ್ರಾಧಾನ್ಯತೆ ನೀಡಿ, ಸಮುದಾಯದ ಕೈಂಕರ್ಯಗಳಲ್ಲಿ ಪಾಲ್ಗೊಳ್ಳಬೇಕು. ಪರಸ್ಪರ ಬೆಂಬಲ ನೀಡುವ ಮೂಲಕ ಸರ್ಕಾರದ ಗಮನ ಸೆಳೆಯುವ ನಿಟ್ಟಿನಲ್ಲಿ ಒಗ್ಗಟ್ಟು ಪ್ರದರ್ಶಿಸಿದಾಗ ಮಾತ್ರ ಸ್ಥಾನಮಾನ ಪಡೆಯಲು ಸಾಧ್ಯ ಎಂದರು.

    ಮಹಾಸಭಾ ವಿವಿಧ ಕಾರ್ಯಕ್ರಮ ನಾಡಿನಾದ್ಯಂತ ಹಮ್ಮಿಕೊಂಡು ಜಾಗೃತಿ ಮೂಡಿಸುವ ಕೆಲಸ ಮಾಡುತ್ತಿದೆ. ಹಿಂದುಳಿದ ವರ್ಗಗಳ ಅಭಿವೃದ್ಧಿಗಾಗಿ ಸರ್ಕಾರದ ಹಲವು ಯೋಜನೆಗಳು ಜಾರಿಯಲ್ಲಿದ್ದು, ಸಮಾಜದವರು ಅದರ ಕುರಿತು ಮಾಹಿತಿ ಪಡೆದು ಸೌಲಭ್ಯ ಪಡೆಯಲು ಮುಂದಾದಾಗ ಆರ್ಥಿಕವಾಗಿ ಸಬಲರಾಗಲು ಸಾಧ್ಯವಿದೆ ಎಂದು ಕಿವಿಮಾತು ಹೇಳಿದರು.

    ಜಿಲ್ಲೆಯಲ್ಲಿ ಸಮಾಜದ ಸಾವಿರಾರು ಪದವೀಧರರಿದ್ದು, ಈ ಕ್ಷೇತ್ರದ ಚುನಾವಣೆಯಲ್ಲಿ ಮತ ಚಲಾಯಿಸುವ ಹಕ್ಕು ಪಡೆಯಲು ನೋಂದಣಿ ಮಾಡಿಸಿಕೊಳ್ಳಬೇಕು. ಆಗ ಸಮಾಜ ಗುರುತಿಸಲು ಮುಂದಾಗುತ್ತಾರೆ ಎಂದರು.

    ಇದೇ ವೇಳೆ ಎಸ್ಸೆಸ್ಸೆಲ್ಸಿ, ಪಿಯುಸಿ, ಪದವಿ ಪರೀಕ್ಷೆಗಳಲ್ಲಿ ಅತೀ ಹೆಚ್ಚು ಅಂಕಗಳಿಸಿದ ಸಮಾಜದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ, ವಿವಿಧ ಕ್ಷೇತ್ರಗಳಲ್ಲಿ ಸೇವೆ ಸಲ್ಲಿಸಿರುವ ಸಮಾಜದ ಸಿ.ಟಿ.ವಾಸುದೇವರಾವ್ ಮುಸಳೆ, ಪರಮೇಶ್ವರ ರಾವ್ ನಾಜರೆ, ಗಣೇಶ್ ಮೂರ್ತಿ ಅಂಬೇಕರ್, ಬಿ.ವಿ.ತುಕಾರಾಂರಾವ್, ಎಂ.ವಿ.ವಿನಾಯಕ ಮುಸಳೆ ಅವರನ್ನು ಸನ್ಮಾನಿಸಲಾಯಿತು.

    ಭಾವಸಾರ ಕ್ಷತ್ರೀಯ ಸಮಾಜದ ಅಧ್ಯಕ್ಷ ಶ್ಯಾಮರಾವ್ ಮುಸಳೆ, ಮಮತಾ ಬೇದ್ರೆ, ನಾಗರಾಜ್ ಬೇದ್ರೆ, ಶ್ರೀನಾಥ್ ಬೇದ್ರೆ ಇತರರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts