More

    ಶಿಕ್ಷಣ ಸಂಸ್ಥೆಗಳಿಗೆ ನೀಡುವ ದಾನವೇ ಶ್ರೇಷ್ಠ

    ಶನಿವಾರಸಂತೆ: ಶಿಕ್ಷಣ ಸಂಸ್ಥೆಗಳಿಗೆ ನೀಡುವ ದಾನ ಸಾವಿರಾರು ದೇವಸ್ಥಾನಗಳಿಗೆ ಕೊಡುವ ದಾನಗಳಿಗಿಂತ ಮಿಗಿಲಾದದ್ದು ಎಂದು ಶನಿವಾರಸಂತೆ ಪದವಿ ಪೂರ್ವ ಕಾಲೇಜು ಉಪನ್ಯಾಸಕ ಡಿ.ಟಿ.ಸೋಮಶೇಖರ್ ಅಭಿಪ್ರಾಯಪಟ್ಟರು.

    ಸಮೀಪದ ಆಲೂರುಸಿದ್ದಾಪುರ ಜಾನಕಿ ಕಾಳಪ್ಪ ಆಂಗ್ಲ ಮಾಧ್ಯಮ ವಿದ್ಯಾಸಂಸ್ಥೆಯ 17ನೇ ವಾರ್ಷಿಕೋತ್ಸವ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಶಿಕ್ಷಣದಿಂದ ಜ್ಞಾನ ವೃದ್ಧಿಸುತ್ತದೆ. ಶಿಕ್ಷಣ ಸಂಸ್ಥೆಗಳು ಜ್ಞಾನದ ದೇಗುಲಗಳಾಗಿದ್ದು, ಇವುಗಳ ಬೆಳವಣಿಗೆಗೆ ಪಾಲಕರು ಮತ್ತು ದಾನಿಗಳು ಸಹಕಾರ ನೀಡುತ್ತಿರುವುದು ಶ್ಲಾಘನೀಯ ಎಂದರು.

    ಪಾಲಕರು ತಮ್ಮ ಮಕ್ಕಳ ಮೇಲೆ ಒತ್ತಡ ಹಾಕುವುದು, ಬೇರೆ ಮಕ್ಕಳೊಂದಿಗೆ ಹೋಲಿಕೆ ಮಾಡುವುದನ್ನು ಬಿಡಬೇಕು. ಮಕ್ಕಳ ಆಸಕ್ತಿ ಗುರುತಿಸಿ ಪ್ರೋತ್ಸಾಹಿಸಬೇಕು. ಶಿಕ್ಷಣದ ಪ್ರಗತಿಯಲ್ಲಿ ವಿದ್ಯಾರ್ಥಿ, ಪಾಲಕರು, ಶಿಕ್ಷಕರ ಪಾತ್ರ ಬಹುಮುಖ್ಯ. ವಿದ್ಯಾರ್ಥಿಗಳು ಮೊಬೈಲ್ ಬಳಕೆಯಿಂದ ದೂರವಿದ್ದು, ಕ್ರೀಡಾ ಮತ್ತು ಸಾಂಸ್ಕೃತಿಕ ಚಟುವಟಿಕೆಯತ್ತ ಆಸಕ್ತಿ ವಹಿಸುವಂತೆ ಸಲಹೆ ನೀಡಿದರು.

    ಬೆಂಗಳೂರು ಬೋಯನ್ಸಿ ಟ್ರೈನರ್ ಸಂಸ್ಥೆಯ ನಿರ್ದೇಶಕ ಅಜಿತ್ ಕಾಯ್ಕಿಣಿ ಮಾತನಾಡಿ, ಶಿಕ್ಷಣದಿಂದ ಬುದ್ಧಿವಂತಿಕೆ ಜತೆಗೆ ವ್ಯಕ್ತಿತ್ವ ವಿಕಾಸನ, ಮಾನವೀಯ ಮೌಲ್ಯಗಳನ್ನು ಅರಿತುಕೊಳ್ಳಬಹುದು ಎಂದರು.

    ಆಲೂರುಸಿದ್ದಾಪುರ ಅರೆಭಾಷೆ ಗೌಡ ಸಮಾಜದ ಅಧ್ಯಕ್ಷ ದೇವಾಯಿರ ಗಿರೀಶ್ ಮಾತನಾಡಿ, ವಿದ್ಯಾರ್ಥಿಗಳು ಶಿಕ್ಷಣಕ್ಕಿಂತ ಮೊಬೈಲ್, ಸಾಮಾಜಿಕ ಜಾಲತಾಣಗಳಿಗೆ ಆದ್ಯತೆ ನೀಡುತ್ತಿರುವುದು ಕಳವಳಕಾರಿ. ಈ ನಿಟ್ಟಿನಲ್ಲಿ ಪಾಲಕರು ತಮ್ಮ ಮಕ್ಕಳ ಮೇಲೆ ನಿಗಾವಹಿಸುವಂತೆ ಸಲಹೆ ನೀಡಿದರು.

    ವಿದ್ಯಾಸಂಸ್ಥೆಯ ಟ್ರಸ್ಟಿ ಎಚ್.ಕೆ.ಶಿವಪ್ರಕಾಶ್, ಗ್ರಾಪಂ ಅಧ್ಯಕ್ಷ ಬಿ.ಡಿ.ಮೋಹನ್‌ಕುಮಾರ್, ಉಪಾಧ್ಯಕ್ಷೆ ಪಿ.ಕೆ.ದಮಯಂತಿ, ಆಲೂರುಸಿದ್ದಾಪುರ ಕೃಷಿ ಪತ್ತಿನ ಸಂಘದ ಅಧ್ಯಕ್ಷ ಎಸ್.ಜೆ.ಪ್ರಸನ್ನಕುಮಾರ್, ಗೋಣಿಮರೂರು ಕ್ಲಸ್ಟರ್ ಸಿಆರ್‌ಪಿ ಆಶಾ, ಗ್ರಾಪಂ ಸದಸ್ಯ ಸತೀಶ್‌ಕುಮಾರ್, ರೋಟರಿ ಮಲ್ಲೇಶ್ವರ ಕ್ಲಬ್ ಅಧ್ಯಕ್ಷ ಎಂ.ಟಿ.ಬೇಬಿ, ಪಿಡಿಒ ಹರೀಶ್, ಪ್ರಮುಖರಾದ ಎಂ.ಎನ್.ರಾಜು, ವೀಣಾ, ಸಾಯಿ ಎಜುಕೇಷನ್ ಟ್ರಸ್ಟ್ ಕಾರ್ಯದರ್ಶಿ ಟಿ.ಪಿ.ಜೀವನ್ ಇತರರು ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts