More

    ಶಿಗ್ಗಾಂವಿ ತಾಲೂಕಿನ ರಸ್ತೆಗಳ ಅಭಿವೃದ್ಧಿಗೆ ಆದ್ಯತೆ

    ಶಿಗ್ಗಾಂವಿ: ವಿವಿಧ ಯೋಜನೆಯಡಿ ಅಂದಾಜು 100 ಕೋಟಿ ರೂ. ವೆಚ್ಚದಲ್ಲಿ ಶಿಗ್ಗಾಂವಿ-ಸವಣೂರು ತಾಲೂಕಿನಲ್ಲಿ ದೊಡ್ಡ ಮತ್ತು ಸಣ್ಣ ರಸ್ತೆಗಳ ಅಭಿವೃದ್ಧಿ ಕಾಮಗಾರಿ ಕೈಗೊಳ್ಳಲಾಗಿದೆ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ಹೇಳಿದರು.

    ಪಟ್ಟಣದ ಲೋಕೋಪಯೋಗಿ ಕಚೇರಿಯ ನೂತನ ಕಟ್ಟಡ ಉದ್ಘಾಟಿಸಿ ಮಾತನಾಡಿದ ಅವರು, ರಾಜ್ಯದ ಅಭಿವೃದ್ಧಿಯಲ್ಲಿ ಪ್ರಮುಖ ಪಾತ್ರ ವಹಿಸುವ ಪಿಡಬ್ಲ್ಯುಡಿ ಇಲಾಖೆ, ತಾಲೂಕಿನ ಅಭಿವೃದ್ಧಿಗೆ ಪೂರಕವಾಗಿ ಗುಣಮಟ್ಟದ ಕಾಮಗಾರಿಗಳನ್ನು ಕೈಗೊಳ್ಳಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.

    ಒಂದೇ ಸೂರಿನಡಿ ಎಲ್ಲ ಸರ್ಕಾರಿ ಕಚೇರಿಗಳು ಕಾರ್ಯ ನಿರ್ವಹಿಸುವಂತೆ ಪಟ್ಟಣದ ಹಳೇ ತಹಸೀಲ್ದಾರ್ ಕಚೇರಿಯನ್ನು ಬಳಸಿಕೊಂಡು 10 ಕೋಟಿ ರೂ. ವೆಚ್ಚದಲ್ಲಿ ಮಳಿಗೆ ನಿರ್ವಿುಸಲು ಟೆಂಡರ್ ಪ್ರಕ್ರಿಯೆ ಚಾಲನೆಯಲ್ಲಿದೆ. ಶಿಗ್ಗಾಂವಿ, ಸವಣೂರು ರಸ್ತೆ ಅಭಿವೃದ್ಧಿಗೆ 25 ಕೋಟಿ ರೂ. ಅನುದಾನಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದರು.

    ತಡಸ-ಗೊಂದಿ ಹಾಗೂ ಕಾರವಾರ-ಇಳಕಲ್ ರಸ್ತೆಯನ್ನು ರಾಷ್ಟ್ರೀಯ ಹೆದ್ದಾರಿಯನ್ನಾಗಿ ಪರಿವರ್ತಿಸಲು ಪ್ರಸ್ತಾವನೆ ಸಲ್ಲಿಸಲಾಗಿದೆ. ಶಿಗ್ಗಾಂವಿ ಪ್ರವಾಸಿ ಮಂದಿರದಲ್ಲಿ ಹೆಚ್ಚುವರಿಯಾಗಿ ಹೈಟೆಕ್ ನಾಲ್ಕು ಕೊಠಡಿಗಳ ನಿರ್ವಣದ ಪ್ರಸ್ತಾವನೆ ಸರ್ಕಾರದ ಮುಂದಿದೆ ಎಂದರು.

    ಜಿಲ್ಲಾ ಪಿಡಬ್ಲ್ಯುಡಿ ಇಲಾಖೆ ಅಧಿಕಾರಿ ವಿ.ಇ. ಭವನಮೂರ್ತಿ, ವಿ.ಎಂ. ಚಿಕ್ಕಮಠ, ಕೆಸಿಸಿ ಬ್ಯಾಂಕ್ ನಿರ್ದೇಶಕರಾದ ಗಂಗಣ್ಣ ಸಾತಣ್ಣವರ, ನಿಂಗಣ್ಣ ಚಪ್ಪರದಹಳ್ಳಿ, ತಾಪಂ ಸದಸ್ಯೆ ವಿಜಯಲಕ್ಷ್ಮಿ ಮುಂದಿನಮನಿ, ಗುತ್ತಿಗೆದಾರ ಅರ್ಜುನ ಹಂಚಿನಮನಿ, ಬಿಜೆಪಿ ಅಧ್ಯಕ್ಷ ಶಿವಾನಂದ ಮ್ಯಾಗೇರಿ, ರೇಣುಕನಗೌಡ ಪಾಟೀಲ ಇತರರು ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts