More

    ಶಿರಾಳಕೊಪ್ಪ ಕಾಲೇಜು ಅಭಿವೃದ್ಧಿಗೆ 5 ಕೋಟಿ ರೂ. ಖರ್ಚು: ಬಿ.ವೈ.ರಾಘವೇಂದ್ರ

    ಶಿರಾಳಕೊಪ್ಪ: ಇಲ್ಲಿನ ಸರ್ಕಾರಿ ಪದವಿ ಕಾಲೇಜನ್ನು ವಿಶ್ವವಿದ್ಯಾಲಯದಂತೆ ಅಭಿವೃದ್ಧಿಪಡಿಸಲಾಗಿದೆ ಎಂದು ಲೋಕಸಭಾ ಸದಸ್ಯ ಬಿ.ವೈ.ರಾಘವೇಂದ್ರ ಹೇಳಿದರು.
    ಶುಕ್ರವಾರ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಕ್ರೀಡಾ ಮತ್ತು ಸಾಂಸ್ಕ್ರತಿಕ ರಾಷ್ಟ್ರೀಯ ಸೇವಾ ಯೋಜನೆ, ಯುವ ರೆಡ್ ಕ್ರಾಸ್ ಹಾಗೂ ಇತರ ಚಟುವಟಿಕೆಗಳ ಸಮಾರೋಪ ಸಮಾರಂಭ ಉದ್ಘಾಟಿಸಿ ಮಾತನಾಡಿ, ಕಾಲೇಜಿ ಅಭಿವೃದ್ಧಿಗೆ ಈಗಾಗಲೇ 5 ಕೋಟಿ ರೂ.ಗೂ ಹೆಚ್ಚು ಹಣವನ್ನು ಖರ್ಚು ಮಾಡಲಾಗುತ್ತಿದೆ. ಶೀಘ್ರದಲ್ಲಿ ನ್ಯಾಕ್ ಸಮಿತಿ ಬರಲಿದೆ. ಇಲ್ಲಿಯ ಮೂಲ ಸೌಕರ್ಯಕ್ಕೆ ತೊಂದರೆ ಇಲ್ಲ ಎಂಬುದು ಕಾಣುತ್ತದೆ. ಅವರು ಬರುವ ಮೊದಲು ಇಡೀ ಕಾಲೇಜಿಗೆ ಬಣ್ಣ ಹೊಡಿಸಲಾಗುವುದು. ಇಲ್ಲಿಯ ಕಾಲೇಜು ಜಿಲ್ಲೆಯ ಕಾಲೇಜುಗಳ ಪಟ್ಟಿಯಲ್ಲಿ ಮೂರನೇ ಸ್ಥಾನದಲ್ಲಿದ್ದು ಪ್ರಸಕ್ತ ವಷರ್ ಪ್ರಥಮ ಪದವಿಗೆ 250ಕ್ಕೂ ಹೆಚ್ಚು ವಿದ್ಯಾರ್ಥಿಗಳು ದಾಖಲಾಗಿದ್ದಾರೆ ಎಂದರು.
    ಬಿ.ಎಸ್.ಯಡಿಯೂರಪ್ಪ ಅವರು ಸೈಕಲ್ ಕೊಡುವ ವ್ಯವಸ್ಥೆ ರೂಪಿಸಿದ ಸಮಯದಿಂದ ವಿಶೇಷವಾಗಿ ಯುವಜನಾಂಗ ಶಿಕ್ಷಣಕ್ಕೆ ಹೆಚ್ಚಿನ ಆಸಕ್ತಿ ತೋರಿಸುತ್ತಿದೆ. ಯುವಕರ ಅಟೋಟಕ್ಕೆ ಸ್ಟೇಡಿಯಂನ್ನು ಕೋಟ್ಯಂತರ ರೂ.ವೆಚ್ಚದಲ್ಲಿ ನಿರ್ಮಿಸಲಾಗುತ್ತಿದೆ. ಕಾಲೇಜಿನ ಪ್ರಾಚಾರ್ಯರು ವಿಶೇಷ ಆಸಕ್ತಿ ವಹಿಸಿ ತಮ್ಮ ಸಿಬ್ಬಂದಿಯೊಂದಿಗೆ ಉತ್ತಮ ಕೆಲಸ ಮಾಡುತ್ತಿದ್ದಾರೆ ಎಂದು ಹೇಳಿದರು.
    ವಿದ್ಯಾರ್ಥಿ ಜೀವನದಲ್ಲಿ ನಾನು ವಿಶ್ವವಿದ್ಯಾಲಯದ ಸಿಂಡಿಕೇಟ್ ಸದಸ್ಯನಾಗಿ ಕೆಲಸ ಮಾಡಿದ್ದೇನೆ. ವಿದ್ಯಾರ್ಥಿ ಜೀವನದಲ್ಲಿ ನಾವು ಸಾಕಷ್ಟು ತಪ್ಪುಗಳನ್ನು ಮಾಡುತ್ತೇವೆ. ಆದರೆ ಅವುಗಳನ್ನು ಮುಂದುವರಿಸಿಕೊಂಡು ಹೋಗದೆ ಉತ್ತಮ ಜೀವನಕ್ಕೆ ಕಾಲಿಡಬೇಕು. ಮುಂಬರುವ ದಿನಗಳಲ್ಲಿ ಈ ಕಾಲೇಜಿನ ವಿದ್ಯಾರ್ಥಿಗಳಿಗೆ ಹಾಸ್ಟೆಲ್ ವ್ಯವಸ್ಥೆ ಮಾಡಲಾಗುವುದು. ಜಿಲ್ಲೆಯಲ್ಲಿ ಶಿಕ್ಷಣಕ್ಕೆ ಸಂಬಂಧಿಸಿದಂತೆ ಮೆಡಿಕಲ್ ಕಾಲೇಜು, ಇಂಜಿನಿಯರಿಂಗ್ ಕಾಲೇಜು, ಕೃಷಿ, ತೋಟಗಾರಿಕೆ ಕಾಲೇಜು ಆರಂಭಿಸಲಾಗಿದೆ ಎಂದು ತಿಳಿಸಿದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts