More

    ಶಿವಮೊಗ್ಗದಲ್ಲಿ ಎಫ್​ಎಂ ಸ್ಥಾಪನೆಗೆ ಮನವಿ

    ಶಿವಮೊಗ್ಗ: ಲೋಕಸಭಾ ಸದಸ್ಯ ಬಿ.ವೈ.ರಾಘವೇಂದ್ರ ಗುರುವಾರ ದೆಹಲಿಯಲ್ಲಿ ಕೇಂದ್ರ ಮಾಹಿತಿ ಮತ್ತು ಪ್ರಸಾರ ಖಾತೆ ಸಚಿವ ಪ್ರಕಾಶ್ ಜಾವ್ಡೇಕರ್ ಅವರನ್ನು ಭೇಟಿಯಾಗಿ ಶಿವಮೊಗ್ಗದಲ್ಲಿ ಎಫ್​ಎಂ ಕೇಂದ್ರ ಸ್ಥಾಪನೆಗೆ ಹಾಗೂ ಭದ್ರಾವತಿ ಆಕಾಶವಾಣಿ ಕೇಂದ್ರವನ್ನು ಮೇಲ್ದರ್ಜೆಗೇರಿಸುವ ಸಂಬಂಧ ಮನವಿ ಸಲ್ಲಿಸಿದರು.

    ಭದ್ರಾವತಿ ಆಕಾಶವಾಣಿ ಕೇಂದ್ರ 50 ವರ್ಷಗಳಿಂದ ಕಾರ್ಯನಿರ್ವಹಿಸುತ್ತಿದೆ. ಉತ್ತಮ ಕಾರ್ಯಕ್ರಮ ಪ್ರಸಾರ ಮಾಡಿದರೂ ಕಡಿಮೆ ಶಕ್ತಿಯ ಟ್ರಾನ್ಸ್​ಮೀಟರ್​ನಿಂದಾಗಿ ಕೇವಲ 25 ಕಿ.ಮೀ. ದೂರದಲ್ಲಿರುವ ಜಿಲ್ಲಾ ಕೇಂದ್ರವಾದ ಶಿವಮೊಗ್ಗಕ್ಕೂ ಅದು ಸರಿಯಾಗಿ ತಲುಪುತ್ತಿಲ್ಲ ಎಂದು ಕೇಂದ್ರ ಸಚಿವರ ಗಮನ ಸೆಳೆದರು.

    ಶಿವಮೊಗ್ಗದಲ್ಲಿ ಕಾರ್ಯನಿರ್ವಹಿಸುತ್ತಿರುವ ಕಡಿಮೆ ಶಕ್ತಿಯ ದೂರದರ್ಶನ ಕೇಂದ್ರವನ್ನು ಹೆಚ್ಚಿನ ಶಕ್ತಿಯ ಟ್ರಾನ್ಸ್​ಮೀಟರ್​ಗೆ ಉನ್ನತಿಕರಿಸಬೇಕು. ಈಗಿರುವ ಟ್ರಾನ್ಸ್​ಮೀಟರ್​ನ್ನು 10 ಕೆ.ವಿ.ಗೆ ಹೆಚ್ಚಿಸಿ, ಎಫ್​ಎಂ ಕೇಂದ್ರವನ್ನು ಮಂಜೂರು ಮಾಡಿದಲ್ಲಿ ಜಿಲ್ಲೆಯ ಕಲಾವಿದರಿಗೆ ಅವಕಾಶ ಸಿಕ್ಕಂತಾಗುತ್ತದೆ ಎಂದರು.

    ಆಕಾಶವಾಣಿ ಕೇಂದ್ರ ಶಿವಮೊಗ್ಗದಿಂದ 20 ಕಿ.ಮೀ. ದೂರದಲ್ಲಿರುವ ಭದ್ರಾವತಿಯಲ್ಲಿದೆ. ಅಲ್ಲಿಯೂ ನಗರ ವ್ಯಾಪ್ತಿಯಿಂದ 5 ಕಿ.ಮೀ. ದೂರದಲ್ಲಿದೆ. ಇಲ್ಲಿಗೆ ಕಲಾವಿದರು ತೆರಳಿ ಕಾರ್ಯಕ್ರಮ ನೀಡುವುದು ಕಷ್ಟವಾಗಿದೆ. ಮೇಲಾಗಿ ಭದ್ರಾವತಿ ಆಕಾಶವಾಣಿ ಕೇಂದ್ರಕ್ಕೆ ಜಿಲ್ಲಾ ಮಟ್ಟದ ಅಧಿಕಾರಿಯೂ ಇಲ್ಲ. ಕೂಡಲೇ ಅಧಿಕಾರಿಯೊಬ್ಬರನ್ನು ನೇಮಕ ಮಾಡಬೇಕೆಂದು ಒತ್ತಾಯಿಸಿದರು.

    ಸರ್ಕಾರದಿಂದಲೇ ಎಫ್​ಎಂ ಕೇಂದ್ರ ಸ್ಥಾಪನೆಯಾದರೆ, ಕೇಂದ್ರ ಮತ್ತು ರಾಜ್ಯ ಸರ್ಕಾರದ ಜನಪರ ಕಾರ್ಯಕ್ರಮಗಳ ಬಗ್ಗೆ, ಅವುಗಳ ಉಪಯುಕ್ತತೆ ಬಗ್ಗೆ ಜನರಲ್ಲಿ ಜಾಗೃತಿ ಉಂಟುಮಾಡಲು ಅನುಕೂಲವಾಗುತ್ತದೆ ಎಂದು ಮನವರಿಕೆ ಮಾಡಿಕೊಟ್ಟರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts