More

    ಶಿವಮೊಗ್ಗ ಜಿಲ್ಲಾ ಮೋಚಿಗಾರ ಮಹಿಳಾ ಘಟಕ ಉದ್ಘಾಟನೆ

    ಭದ್ರಾವತಿ: ಹಿಂದುಳಿದ ಸಮಾಜದ ಮಹಿಳೆಯರು ಸಂಘಟಿತರಾಗಿ ಹಕ್ಕುಗಳನ್ನು ಪಡೆಯಲು ಮುಂದಾಗಿರುವುದು ಉತ್ತಮ ಬೆಳವಣಿಗೆಯಾಗಿದೆ ಎಂದು ಶಾಸಕ ಬಿ.ಕೆ.ಸಂಗಮೇಶ್ವರ್ ಹೇಳಿದರು.
    ಹಳೇನಗರದ ಬಸವೇಶ್ವರ ವೃತ್ತದಲ್ಲಿರುವ ಬಲಿಜ ಸಮುದಾಯ ಭವನದಲ್ಲಿ ಭಾನುವಾರ ಜಿಲ್ಲಾ ಮೋಚಿಗಾರ ಮಹಿಳಾ ಘಟಕ ಉದ್ಘಾಟಿಸಿ ಮಾತನಾಡಿ, ಮಹಿಳೆಯರು ಇಂದು ಎಲ್ಲ ಕ್ಷೇತ್ರಗಳಲ್ಲಿಯೂ ತಮ್ಮ ಇರುವಿಕೆಯನ್ನು ತೋರ್ಪಡಿಸಿಕೊಂಡಿದ್ದಾರೆ. ನಗರದಲ್ಲಿ ಮೋಚಿ ಸಮುದಾಯದ ಜನರ ಶ್ರೇಯೋಭಿವೃದ್ಧಿಗಾಗಿ ಜಿಲ್ಲಾ ಮಹಿಳಾ ಘಟಕ ಸ್ಥಾಪಿಸಿಕೊಂಡು ಮುನ್ನಡೆಯುತ್ತಿರುವುದು ಶ್ಲಾಘನೀಯ, ಒಗ್ಗಟ್ಟಿನಿಂದ ಹೋರಾಟ ಮಾಡಿದಾಗ ಮಾತ್ರ ಸರ್ಕಾರದ ಸೌಲಭ್ಯಗಳು ಸುಲಭವಾಗಿ ಸಿಗಲಿದೆ ಎಂದರು.
    ಮೋಚಿ ಸಮುದಾಯದ ಮಹಿಳಾ ಘಟಕಕ್ಕೆ ಬೇಕಾದ ಎಲ್ಲ ಸಹಕಾರಗಳನ್ನು ನೀಡಲು ನಮ್ಮ ಕುಟುಂಬ ಸಿದ್ಧವಿದ್ದು ಯಾವುದೇ ಸಂಕೋಚವಿಲ್ಲದೆ ಪಡೆದುಕೊಳ್ಳಬಹುದು. ಈ ಸಮುದಾಯದ ಮಕ್ಕಳು ಶಿಕ್ಷಣದಿಂದ ವಂಚಿತರಾಗಿರುವುದು ಸಾಕಷ್ಟು ಪ್ರಮಾಣದಲ್ಲಿ ಕಂಡು ಬಂದಿದ್ದು ಸರ್ಕಾರ ಶಿಕ್ಷಣಕ್ಕಾಗಿ ಹಲವು ಯೋಜನೆಗಳನ್ನು ಜಾರಿಗೆ ತಂದಿವೆ. ಅವುಗಳ ಲಾಭ ಪಡೆದು ಪ್ರತಿಯೊಬ್ಬರೂ ವಿದ್ಯಾವಂತರಾಗಬೇಕು. ಮಕ್ಕಳನ್ನು ವಿದ್ಯಾವಂತರಾಗಿಸುವ ಜತೆಗೆ ಪಾಲಕರು ಸಂಸ್ಕಾರ ಹಾಗೂ ದೇಶಪ್ರೇಮದ ಮಹತ್ವ ತಿಳಿಸಬೇಕು ಎಂದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts