More

    ಶಿವಶರಣರ ಕಾಯಕ ಪ್ರಜ್ಞೆ ಆದರ್ಶವಾಗಲಿ

    ಅರಸೀಕೆರೆ: ಬಸವಾದಿ ಶಿವಶರಣರ ಕಾಯಕ ಪ್ರಜ್ಞೆ ಬದುಕಿನ ಆದರ್ಶವಾಗಬೇಕು ಎಂದು ತಹಸೀಲ್ದಾರ್ ವಿಭಾ ವಿ. ರಾಥೋಡ್ ಹೇಳಿದರು.

    ತಾಲೂಕು ಆಡಳಿತದ ವತಿಯಿಂದ ನಗರದ ಶ್ರೀ ವೆಂಕಟೇಶ್ವರ ಕಲಾ ಭವನದಲ್ಲಿ ಶನಿವಾರ ಆಯೋಜಿಸಿದ್ದ ಶರಣ ನುಲಿಯ ಚಂದಯ್ಯ ಜಯಂತಿ ಉದ್ಘಾಟಿಸಿ ಮಾತನಾಡಿದರು. 12ನೇ ಶತಮಾನದ ಅನುಭವ ಮಂಟಪದಲ್ಲಿ ಸರ್ವ ಸಮುದಾಯದ ಕಾಯಕ ವೃತ್ತಿ ಅನುಸರಿಸಿ ಸಮಾಜದ ಉನ್ನತಿಗೆ ಶ್ರಮಿಸಿದ ಆಯ್ದಕ್ಕಿ ಲಕ್ಕಮ್ಮ, ಡೋಹರ ಕಕ್ಕಯ್ಯ, ಅಂಬಿಗರ ಚೌಡಯ್ಯನಂತಹ ಶರಣರನ್ನು ಎಂದಿಗೂ ಮರೆಯುವಂತಿಲ್ಲ. ನುಲಿಯ ಚಂದಯ್ಯ ಕೂಡ ಅಗ್ರಗಣ್ಯರಾಗಿದ್ದಾರೆ. ಅವರು ಹಾಕಿಕೊಟ್ಟ ಮಾರ್ಗದಲ್ಲಿ ಸಾಗಿದರೆ ಬದುಕು ಹಸನಾಗಲಿದೆ ಎಂದು ಬಣ್ಣಿಸಿದರು.

    ನಗರದ ಪ್ರವಾಸಿ ಮಂದಿರದ ಆವರಣದಿಂದ ರಾಷ್ಟ್ರೀಯ ಹೆದ್ದಾರಿ ಮಾರ್ಗವಾಗಿ ಬೆಳ್ಳಿ ರಥದಲ್ಲಿ ನುಲಿಯ ಚಂದಯ್ಯ ಭಾವಚಿತ್ರ ಮೆರವಣಿಗೆ ಮಾಡಲಾಯಿತು. ಶಾಸಕ ಕೆ.ಎಂ.ಶಿವಲಿಂಗೇಗೌಡ, ರಾಜ್ಯ ರಸ್ತೆ ಅಭಿವೃದ್ಧಿ ನಿಗಮದ ಉಪಾಧ್ಯಕ್ಷ ಜಿವಿಟಿ ಬಸವರಾಜ್, ನಗರಸಭಾಧ್ಯಕ್ಷ ಸಿ.ಗಿರೀಶ್, ನಗರ ಯೋಜನಾ ಪ್ರಾಧಿಕಾರದ ಅಧ್ಯಕ್ಷ ಕಾಟೀಕೆರೆ ಪ್ರಸನ್ನಕುಮಾರ್, ಕರಗುಂದ ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ಗೊಲ್ಲರಹಳ್ಳಿ ದಯಾನಂದ್, ಸಮಾಜದ ಮುಖಂಡ ಬೈರಾಂಬುಧಿ ಲೋಕೇಶ್ ಹಾಜರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts