More

    ಶಿವಾಜಿ ಪಾರ್ಕ್ ಟೆಂಡರ್

    ಬಸವಕಲ್ಯಾಣ: ನಗರದಲ್ಲಿ ಛತ್ರಪತಿ ಶಿವಾಜಿ ಮಹಾರಾಜ ಪಾಕರ್್ ನಿಮರ್ಾಣಕ್ಕಾಗಿ 8 ಎಕರೆ ಸ್ಥಳ ಒದಗಿಸಲಾಗಿದೆ. 10 ಕೋಟಿ ರೂ. ಅನುದಾನ ಸಕರ್ಾರದಿಂದ ಬಿಡುಗಡೆಯಾಗಿದೆ. ಕಾಮಗಾರಿಗಾಗಿ ಈಗಾಗಲೇ ಟೆಂಡರ್ ಕರೆದಿದ್ದು, ಬೇಗನೆ ಪೂರ್ಣಗೊಳಿಸಲು ಕ್ರಮ ಕೈಗೊಳ್ಳಲಾಗಿದೆ ಎಂದು ಪೌರಾಡಳಿತ ಸಚಿವ ಎಂಟಿಬಿ ನಾಗರಾಜ ತಿಳಿಸಿದ್ದಾರೆ.
    ವಿಧಾನಸಭೆ ಅಧಿವೇಶನದಲ್ಲಿ ಶುಕ್ರವಾರ ಬಸವಕಲ್ಯಾಣ ಕ್ಷೇತ್ರದ ಶಾಸಕ ಶರಣು ಸಲಗರ ಅವರ ಪ್ರಶ್ನೆಗೆ ಸಚಿವರು ಉತ್ತರಿಸಿದ್ದಾರೆ. ಹಿಂದು ಹೃದಯ ಸಾಮ್ರಾಟ್ ಛತ್ರಪತಿ ಶಿವಾಜಿ ಮಹಾರಾಜ ಪಾಕರ್್ ನಿಮರ್ಾಣಕ್ಕಾಗಿ ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿ ಸ್ಥಳ ಹಾಗೂ 10 ಕೋಟಿ ರೂ. ಅನುದಾನ ಒದಗಿಸಲಾಗಿದೆ. ಈ ಜಾಗಕ್ಕೆ ಹೋಗಲು ದಾರಿಯ ಸಮಸ್ಯೆ ಇದೆ.ಪೌರಾಡಳಿತ ಸಚಿವರು ಸ್ಥಳಕ್ಕೆ ಭೇಟಿ ನೀಡಿ ರಸ್ತೆ ನಿಮರ್ಿಸಲು ಕ್ರಮ ಕೈಗೊಳ್ಳಬೇಕು ಎಂದು ಶಾಸಕರು ಸಚಿವರ ಗಮನಕ್ಕೆ ತಂದರು.
    ಇದಕ್ಕೆ ಸ್ಪಂದಿಸಿದ ಸಚಿವರು ಸ್ಥಳಕ್ಕೆ ಭೇಟಿ ನೀಡುತ್ತೇನೆ. ರಸ್ತೆ ಮಾಡಿಕೊಡುವ ವ್ಯವಸ್ಥೆ ಮಾಡುವುದಾಗಿ ಭರವಸೆ ನೀಡಿದ್ದಾರೆ. ಪಾಕರ್್ಗೆ ಸ್ಥಳ ಒದಗಿಸಿ ಅನುದಾನ ಮಂಜೂರು ಮಾಡಿದ್ದಕ್ಕಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಎಂಟಿಬಿ ನಾಗರಾಜ ಅವರಿಗೆ ಕ್ಷೇತ್ರದ ಜನತೆ ಪರವಾಗಿ ಧನ್ಯವಾದ ಸಲ್ಲಿಸುವುದಾಗಿ ತಿಳಿಸಿದ್ದಾರೆ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts