More

    ಶಿಷ್ಟಾಚಾರ ಉಲ್ಲಂಘನೆ ಪ್ರಕರಣ, ಚಿಂತಾಮಣಿ ನಗರಸಭೆ ಪೌರಾಯುಕ್ತ, ಎಇ ಅಮಾನತು

    ಚಿಂತಾಮಣಿ: ಸರ್ಕಾರದ ಶಿಷ್ಟಾಚಾರ ಉಲ್ಲಂಘನೆಯ ಹಕ್ಕುಚ್ಯುತಿ ಪ್ರಕರಣದಲ್ಲಿ ನಗರಸಭೆ ಪೌರಾಯುಕ್ತ ಎಚ್.ವಿ. ಹರೀಶ್ ಮತ್ತು ನಗರಸಭೆ ಸಹಾಯಕ ಅಭಿಯಂತ ಪದ್ಮನಾಭರೆಡ್ಡಿ ಅವರನ್ನು ಅಮಾನತುಗೊಳಿಸಿ ಪೌರಾಡಳಿತ ನಿರ್ದೇಶಕಿ ಬಿ.ಬಿ.ಕಾವೇರಿ ಶುಕ್ರವಾರ ಆದೇಶಿಸಿದ್ದಾರೆ.

    ವಾರ್ಡ್ 19ರ ರಾಮುಕುಂಟೆಯಲ್ಲಿ ನಗರೋತ್ಥಾನ ಯೋಜನೆಯಡಿ ಸುಮಾರು 6 ಲಕ್ಷ ರೂ.ವೆಚ್ಚದ ಕೆಳ ಅಂತಸ್ತಿನ ಟ್ಯಾಂಕ್ ನಿರ್ಮಾಣ ಕಾಮಗಾರಿಗೆ ಸಂಬಂಧಿಸಿದಂತೆ ಬದಲಿ ಸ್ಥಳದ ಆಯ್ಕೆ ಪ್ರಕ್ರಿಯೆ ಜಾರಿಯಲ್ಲಿದ್ದರೂ ಅನುಮೋದನೆ ಇಲ್ಲದ ಜಾಗದಲ್ಲಿ ಜೂನ್ 23ರಂದು ಭೂಮಿ ಪೂಜೆ ನೆರವೇರಿಸಲಾಗಿತ್ತು. ಮೇಲಧಿಕಾರಿಗಳ ಗಮನಕ್ಕೆ ತಂದಿರಲಿಲ್ಲ. ಜತೆಗೆ ಶಿಷ್ಟಾಚಾರದ ಅನುಸಾರ ಸ್ಥಳೀಯ ಶಾಸಕರನ್ನು ಕಾರ್ಯಕ್ರಮಕ್ಕೆ ಆಹ್ವಾನಿಸಿರಲಿಲ್ಲ.

    ಈ ಹಿನ್ನೆಲೆಯಲ್ಲಿ ಹರೀಶ್ ಮತ್ತು ಪದ್ಮನಾಭರೆಡ್ಡಿ ವಿರುದ್ಧ ಶಾಸಕ ಎಂ.ಕೃಷ್ಣಾರೆಡ್ಡಿ ಜುಲೈ 28ರಂದು ಹಕ್ಕುಚ್ಯುತಿ ಮಂಡಿಸಿ ಸರ್ಕಾರಕ್ಕೆ ಪತ್ರ ಬರೆದಿದ್ದರು. ಪ್ರಕರಣಕ್ಕೆ ಸಂಬಂಧಿಸಿದಂತೆ ಶಿಷ್ಟಾಚಾರ ಉಲ್ಲಂಘಿಸಿರುವುದು ಸಾಬೀತಾಗಿದೆ ಎಂದು ಜಿಲ್ಲಾಧಿಕಾರಿ ಆರ್.ಲತಾ ಸಲ್ಲಿಸಿದ ವರದಿ ಆಧಾರದ ಮೇಲೆ ಪೌರಾಡಳಿತ ನಿರ್ದೇಶಕಿ ಬಿ.ಬಿ.ಕಾವೇರಿ ಅಮಾನತು ಆದೇಶ ಹೊರಡಿಸಿದ್ದಾರೆ.

    ಹಿಂಬಡ್ತಿಯ ಶಿಕ್ಷೆ! : ಪ್ರಕರಣಕ್ಕೆ ಸಂಬಂಧಿಸಿದಂತೆ ಇಲಾಖೆ ವಿಚಾರಣೆ ಕಾಯ್ದಿರಿಸಿ ಅಮಾನತುಗೊಳಿಸಿರುವುದರ ಜತೆಗೆ ಹಿಂಬಡ್ತಿಯೊಂದಿಗೆ ಸ್ಥಳ ಬದಲಾವಣೆಯ ಶಿಕ್ಷೆ ನೀಡಲಾಗಿದೆ. ಹರೀಶ್‌ಗೆ ನೆಲಮಂಗಲ ನಗರಸಭೆ ಕಚೇರಿ ವ್ಯವಸ್ಥಾಪಕರ ಹುದ್ದೆ, ಪದ್ಮನಾಭರೆಡ್ಡಿಯನ್ನು ಮಡಿಕೇರಿ ನಗರಸಭೆ ಸಹಾಯಕ ಅಭಿಯಂತ ಹುದ್ದೆಗೆ ವರ್ಗಾಯಿಸಲಾಗಿದೆ. ವಿಚಾರಣೆ ಪೂರ್ಣಗೊಳ್ಳುವವರೆಗೂ ಕೇಂದ್ರ ಸ್ಥಾನ ಬಿಡದಿರಲು ಸೂಚಿಸಲಾಗಿದೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts