More

    ಶಿಸ್ತುಬದ್ಧ ಅಧ್ಯಯನದಿಂದ ಯಶ ಸಾಧ್ಯ

    ಬಾಗಲಕೋಟೆ: ನಿರಂತರ ಮತ್ತು ಶಿಸ್ತುಬದ್ಧ ಅಧ್ಯಯನವಿದ್ದಲ್ಲಿ ಸಿಎ ಪರೀಕ್ಷೆಯಲ್ಲಿ ಯಶ ಸಾಧಿಸುವುದು ವಿದ್ಯಾರ್ಥಿಗಳಿಗೆ ಕಷ್ಟಕರವೇನಲ್ಲ ಎಂದು ಕಾಲೇಜಿನ ಹಳೆ ವಿದ್ಯಾರ್ಥಿ ಸಿಎ ಪಂಚಾಕ್ಷರಿ ಮಠ ಹೇಳಿದರು.

    ನಗರದ ವಿದ್ಯಾ ಪ್ರಸಾರಕ ಮಂಡಳದ ಎಸ್.ಆರ್. ನರಸಾಪುರ ಕಲಾ ಹಾಗೂ ಎಂ.ಬಿ. ಶಿರೂರ ವಾಣಿಜ್ಯ ಮಹಾವಿದ್ಯಾಲಯದ ಹಳೆಯ ವಿದ್ಯಾರ್ಥಿಗಳ ಸಂಘ ಹಾಗೂ ಐಕ್ಯೂಎಸಿ ಮಂಗಳವಾರ ಹಮ್ಮಿಕೊಂಡಿದ್ದ ವಿದ್ಯಾರ್ಥಿಗಳೊಂದಿಗೆ ಸಂವಾದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

    ಬದ್ಧತೆ, ದೃಢ ನಿರ್ಧಾರ ಮತ್ತು ಉತ್ತಮ ಕಾರ್ಯ ಯೋಜನೆಯೊಂದಿಗೆ ಅಧ್ಯಯನ ಮಾಡಿದಲ್ಲಿ ಸಿಎ ಪರೀಕ್ಷೆಯಲ್ಲಿ ಯಶ ಸಾಧಿಸಬಹುದು. ಆರ್ಟಿಕಲ್‌ಸಿಪ್ ಸಲುವಾಗಿ ವಿದ್ಯಾರ್ಥಿಗಳು ಉತ್ತಮ ಸಂಸ್ಥೆಯನ್ನು ಆಯ್ಕೆ ಮಾಡಿಕೊಂಡಲ್ಲಿ ಒಳ್ಳೆಯ ಪ್ರಾಯೋಗಿಕ ಜ್ಞಾನವನ್ನು ಪಡೆದುಕೊಳ್ಳಬಹುದು ಎಂದರು.
    ಕೌಶಲಗಳನ್ನು ಬೆಳೆಸಿಕೊಳ್ಳಲು ಸಿಗುವ ಅವಕಾಶವನ್ನು ಸರಿಯಾದ ರೀತಿಯಲ್ಲಿ ಬಳಸಿಕೊಳ್ಳಬೇಕು. ವಿದ್ಯಾರ್ಥಿಗಳು ಸಂವಹನ ಕೌಶಲ್ಯ ಮತ್ತು ನಾಯಕತ್ವ ಗುಣಗಳನ್ನು ಬೆಳೆಸಿಕೊಳ್ಳಲು ಸಲಹೆ ನೀಡಿದರು.

    ಪ್ರಾಚಾರ್ಯ ಶ್ರೀನಿವಾಸ ನರಗುಂದ ಮಾತನಾಡಿ, ವಿದ್ಯಾರ್ಥಿಗಳು ಕೀಳರಿಮೆಯನ್ನು ತೊರೆದು ಆತ್ಮವಿಶ್ವಾಸವನ್ನು ಬೆಳೆಸಿಕೊಳ್ಳಬೇಕು. ತಮ್ಮಲ್ಲಿನ ಸಾಮರ್ಥ್ಯವನ್ನು ಸರಿಯಾದ ರೀತಿಯಲ್ಲಿ ಬಳಸಿಕೊಳ್ಳಬೇಕು. ಉಳಿದ ವೃತ್ತಿಪರ ಕೋರ್ಸಗಳಿಗೆ ಹೋಲಿಸಿದರೆ ಸಿಎ ಮಿತವ್ಯಯಕಾರಿಯಾಗಿದ್ದು ಆ ಕ್ಷೇತ್ರದಲ್ಲಿ ಉತ್ತಮ ಸ್ಥಾನ-ಮಾನ ಪಡೆಯಬಹುದು. ಹಳೆಯ ವಿದ್ಯಾರ್ಥಿಗಳ ಸಾಧನೆ ಸದ್ಯದ ವಿದ್ಯಾರ್ಥಿಗಳಿಗೆ ಪ್ರೇರಣೆಯಾಗಲಿ ಎಂಬ ಉದ್ದೇಶದಿಂದ ಇಂತಹ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿತ್ತಿದೆ ಎಂದರು.

    ಹಳೆ ವಿದ್ಯಾರ್ಥಿಗಳಾದ ಪಂಚಾಕ್ಷರಿ ಮಠ ಹಾಗೂ ಸಿಎ ಆಸೀಫ್ ಹುಸೆನ್ನಾಯ್ಕ ಅವರನ್ನು ಸಮಾರಂಭದಲ್ಲಿ ಸನ್ಮಾನಿಸಲಾಯಿತು. ಜಂಟಿ ಕಾರ್ಯದರ್ಶಿ ಎಸ್.ಬಿ.ಪರ್ವತೀಕರ, ನಿವೃತ್ತ ಪ್ರಾಧ್ಯಾಪಕ ಜಿ.ಜೆ ಮೊರಬ ಇದ್ದರು. ದಿವ್ಯಶ್ರೀ ಬಿಲ್ಲಾರ ಪ್ರಾರ್ಥಿಸಿದರು. ಡಾ.ಎಚ್.ಎಸ್.ಗಿಡಗಂಟಿ ಸ್ವಾಗತಿಸಿದರು. ಸಂಯೋಜಕ ಎಸ್.ವೈ.ಬೊಮ್ಮಣ್ಣವರ ವಂದಿಸಿದರು. ಉಪನ್ಯಾಸಕ ಎನ್.ಬಿ.ಹಸಬಿ ವಂದಿಸಿದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts