More

    ಶೀಘ್ರದಲ್ಲಿಯೇ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ: ಬಿಎಸ್‌ಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ರಾಮ್ ಜಿ. ಗೋಪಾಲ್ ಹೇಳಿಕೆ

    ಹಾಸನ: ಶೀಘ್ರದಲ್ಲಿಯೇ ರಾಜ್ಯದ ಎಲ್ಲಾ ಕ್ಷೇತ್ರಗಳಲ್ಲೂ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡುತ್ತೇವೆ ಎಂದು ಬಿಎಸ್‌ಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹಾಗೂ ರಾಜ್ಯಸಭಾ ಸದಸ್ಯ ರಾಮ್ ಜಿ. ಗೋಪಾಲ್ ತಿಳಿಸಿದರು.

    ನಗರದ ಪ್ರವಾಸಿ ಮಂದಿರದಲ್ಲಿ ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದ ಎಲ್ಲಾ ಕ್ಷೇತ್ರಗಳಿಗೂ ಈ ಬಾರಿ ಅಭ್ಯರ್ಥಿಗಳನ್ನು ಕಣಕ್ಕೆ ಇಳಿಸಲು ಬಿಎಸ್‌ಪಿ ಯೋಜನೆ ರೂಪಿಸಿದೆ. ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಪ್ರವಾಸ ಮಾಡಿ ಜಿಲ್ಲಾ ಹಾಗೂ ಬೂತ್ ಮಟ್ಟದಲ್ಲಿ ಸಭೆ ನಡೆಸಿ ಅಭ್ಯರ್ಥಿಗಳ ಪಟ್ಟಿ ಮಾಡಿ ಚುನಾವಣೆಗೆ ಸಿದ್ದತೆ ನಡೆಸಲಾಗುತ್ತಿದೆ. ಚಾಮರಾಜನಗರ, ಹಾಸನ ಸೇರಿದಂತೆ ವಿವಿಧೆಡೆ ವಿಧಾನಸಭಾ ಚುನಾವಣೆಯಲ್ಲಿ ಬಿಎಸ್‌ಗೆ ಉತ್ತಮ ಜನಸ್ಪಂದನೆ ಸಿಕ್ಕಿದ್ದು, ಲೋಕಸಭೆ ಚುನಾವಣೆಯಲ್ಲಿ ಕೂಡ ಕನಿಷ್ಠ ಎರಡು ಸ್ಥಾನವನ್ನು ಗೆಲ್ಲುವ ವಿಶ್ವಾಸ ಇದೆ ಎಂದರು.

    ಪಕ್ಷದ ಮುಖಂಡ ಮುನಿಯಪ್ಪ ಅವರು ಮಾತನಾಡಿ, ಸಕಲೇಶಪುರದಲ್ಲಿ ಬಿಎಸ್‌ಪಿ ಮುಖಂಡರು ಹಾಗೂ ಕಾರ್ಯಕರ್ತರ ಸಭೆ ಕರೆಯಲಾಗಿದೆ. ಪ್ರತಿ ಜಿಲ್ಲೆ, ತಾಲೂಕು, ಹಾಗೂ ಬೂತ್ ಮಟ್ಟದಲ್ಲೂ ಸಭೆ ನಡೆಸಿ ಈ ಬಾರಿ ಬಿಎಸ್‌ಪಿ ಅಭ್ಯರ್ಥಿಗಳನ್ನು ಗೆಲ್ಲಿಸುವ ಪಣ ತೊಡಲಾಗಿದೆ. ಎಲ್ಲಾ ತಳ ಹಂತದ ಸಮುದಾಯಕ್ಕೆ ರಕ್ಷಣೆ ನೀಡಿ, ಅವರಿಗೆ ಸಮವಾಗಿ ಹಕ್ಕುಗಳನ್ನು ನೀಡಿ ಸಮ ಸಮಾಜ ನಿರ್ಮಾಣ ಮಾಡಲು ಬಿಎಸ್‌ಪಿ ಮುಂದಾಗಿದೆ. ಆದ್ದರಿಂದ ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಜನರು ಬಿಎಸ್‌ಪಿ ಬೆಂಬಲಿಸಿ ಸಹಕಾರ ನೀಡುವಂತೆ ಮನವಿ ಮಾಡಿದರು. ಈಗಾಗಲೇ ಹಾಸನ ಜಿಲ್ಲೆಯ ಎಂಪಿ ಅಭ್ಯರ್ಥಿಯಾಗಿ ಬಿಎಸ್‌ಪಿ ರಾಜ್ಯ ಉಪಾಧ್ಯಕ್ಷ ಗಂಗಾಧರ್ ಬಹುಜನ್ ಅವರನ್ನು ಆಯ್ಕೆ ಮಾಡಲಾಗಿದೆ ಎಂದು ಹೇಳಿದರು.

    ಸ್ಮಾರಕ ಸ್ಥಳಕ್ಕೆ ಭೇಟಿ

    ಸುದ್ದಿಗೋಷ್ಠಿಯ ನಂತರ ನಗರದ ಮಹಾರಾಜ ಪಾರ್ಕ್ ಬಳಿ ಇದ್ದ ಬಾಲ ಮಂದಿರದ ಹಳೇ ಜಾಗದಲ್ಲಿ ಅಂಬೇಡ್ಕರ್ ಸ್ಮಾರಕ ನಿರ್ಮಾಣ ಸ್ಥಳಕ್ಕೆ ರಾಮ್ ಜಿ. ಗೋಪಾಲ್ ಭೇಟಿ ನೀಡಿದರು. ಈ ವೇಳೆ ಮುಖಂಡರು ಸ್ಮಾರಕ ನಿರ್ಮಾಣಕ್ಕೆ ಒಂದು ಹಿಡಿ ಮರಳು ಹಾಕುವ ಮೂಲಕ ಸ್ಮಾರಕ ನಿರ್ಮಾಣಕ್ಕೆ ಕೈ ಜೋಡಿಸಿದರು. ಇದೇ ವೇಳೆ ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಪರ ಘೋಷಣೆ ಕೂಗಿದರು.

    ಇದೆ ವೇಳೆ ಬಿಎಸ್‌ಪಿ ರಾಜ್ಯಾಧ್ಯಕ್ಷ ಕೃಷ್ಣಮೂರ್ತಿ, ಜಿಲ್ಲಾ ಉಸ್ತುವಾರಿ ಮಲ್ಲೇಶ್, ರಾಜ್ಯ ಘಟಕದ ಉಪಾಧ್ಯಕ್ಷ ಗಂಗಾಧರ್ ಬಹುಜನ್, ಜಿಲ್ಲಾ ಮಹಿಳಾ ಘಟಕದ ಅಧ್ಯಕ್ಷೆ ಶಿವಮ್ಮ ಸೇರಿದಂತೆ ಇತರರು ಉಪಸ್ಥಿತರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts