More

    ಶೀಘ್ರದಲ್ಲೇ ಹಿಮ್ಸ್ನಲ್ಲಿ ಪ್ಲಾಸ್ಟಿಕ್ ಶಸ್ತ್ರಚಿಕಿತ್ಸಾ ವಿಭಾಗ ಆರಂಭ: ಡಾ.ಎಸ್.ವಿ.ಸಂತೋಷ್

    ಹಾಸನ : ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯಲ್ಲಿ ಪ್ಲಾಸ್ಟಿಕ್ ಶಸ್ತ್ರಚಿಕಿತ್ಸಾ ವಿಭಾಗ ಆರಂಭಿಸಿ ಸಾರ್ವಜನಿಕರಿಗೆ ಅನುಕೂಲ ಕಲ್ಪಿಸಲಾಗುವುದು ಎಂದು ಹಿಮ್ಸ್ ನಿರ್ದೇಶಕ ಡಾ.ಎಸ್.ವಿ.ಸಂತೋಷ್ ಅವರು ತಿಳಿಸಿದರು.
    ನಗರದ ಹಾಸನ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯಲ್ಲಿ ಶುಕ್ರವಾರ ಹಿಮ್ಸ್ ಶಸ್ತ್ರಚಿಕಿತ್ಸಾ ವಿಭಾಗ, ಚಿಕ್ಕಮಗಳೂರು ಶಸ್ತ್ರ ಚಿಕಿತ್ಸಕರ ಸಂಘ, ಕರ್ನಾಟಕ ಪ್ಲಾಸ್ಟಿಕ್ ಹಾಗು ಸುರೂಪಿ ಶಸ್ತ್ರ ಚಿಕಿತ್ಸಕರ ಸಂಘದಿಂದ ಆಯೋಜಿಸಿದ್ದ ನಿರಂತರ ವೈದ್ಯಕೀಯ ಶಿಕ್ಷಣ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಹಿಮ್ಸ್ ಆಸ್ಪತ್ರೆಯಲ್ಲಿ ಪ್ಲಾಸ್ಟಿಕ್ ಶಸ್ತ್ರಚಿಕಿತ್ಸಾ ವಿಶೇಷ ತಜ್ಞ ವಿಭಾಗವನ್ನು ಆರಂಭಿಸಿ ಸಾರ್ವಜನಿಕರಿಗೆ ಅನುಕೂಲ ಮಾಡಿಕೊಡಲು ಎಲ್ಲ ಪ್ರಯತ್ನ ಮಾಡಲಾಗುವುದು. ಈ ನಿಟ್ಟಿನಲ್ಲಿ ಕೆಲಸ ಪ್ರಾರಂಭಿಸಲಾಗಿದೆ ಎಂದರು.
    ಕಾರ್ಯಕ್ರಮದಲ್ಲಿ ಜಿಲ್ಲಾ ಶಸ್ತ್ರಚಿಕಿತ್ಸಕ ಡಾ.ಎಚ್.ಸಿ.ಲೋಕೇಶ, ಡಾ.ವಿ.ಆರ್.ಕೃಷ್ಣಮೂರ್ತಿ, ಡಾ.ರಾಜಣ್ಣ, ಪ್ಲಾಸ್ಟಿಕ್ ಶಸ್ತ್ರಚಿಕಿತ್ಸಾ ತಜ್ಞರ ರಾಜ್ಯ ಸಂಘದ ಅಧ್ಯಕ್ಷೆ ಡಾ.ಸ್ಮಿತಾ ಸೇಗು, ಹಿಮ್ಸ್‌ನ ಪ್ಲಾಸ್ಟಿಕ್ ಶಸ್ತ್ರಚಿಕಿತ್ಸಾ ತಜ್ಞ ಡಾ.ಪಾಲಚಂದ್ರ ಇತರರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts